ಬೆಂಗಳೂರು: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಗೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್ ನೀಡಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ನಿರೀಕ್ಷೆಯಲ್ಲಿದ್ದ ಡಿಕೆಶಿಗೆ ಹೈಕಮಾಂಡ್ ಬುಲಾವ್ ಕೆಪಿಸಿಸಿ ಪಟ್ಟದ ಕನಸು ಚಿಗುರುವಂತೆ ಮಾಡಿದೆ.
ನಾಳೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನ ಡಿ.ಕೆ.ಶಿವಕುಮಾರ್ ಭೇಟಿಯಾಗಲಿದ್ದಾರೆ. ಜನವರಿ 15 ರಿಂದ 10 ದಿನಗಳ ಕಾಲ ಸೋನಿಯಾ ಗಾಂಧಿ ಇಟಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ನಲ್ಲಿ ಖಾಲಿ ಇರುವ ಕೆಪಿಸಿಸಿ ಅಧ್ಯಕ್ಷ ಸ್ಥಾನ, ವಿಪಕ್ಷ ನಾಯಕನ ಸ್ಥಾನ ಹಾಗೂ ಸಿಎಲ್ ಪಿ ನಾಯಕನ ಸ್ಥಾನ ಅಷ್ಟಕ್ಕು ಹೆಸರುಗಳನ್ನ ಆಂತಿಮ ಪಡಿಸಲಿದ್ದಾರೆ ಎಂದು ತಿಳಿದು ಬಂದಿದೆ.
Advertisement
Advertisement
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬಹುತೇಕ ಡಿ.ಕೆ.ಶಿವಕುಮಾರ್ ಹೆಸರು ಅಂತಿಮವಾಗಿದ್ದು, ನಾಳೆ ಸೋನಿಯ ಗಾಂಧಿ ಜೊತೆಗಿನ ಮಾತುಕತೆ ನಂತರ ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ಹೆಸರು ಅಧಿಕೃತವಾಗಿ ಪ್ರಕಟವಾಗುವ ಸಾಧ್ಯತೆ ಇದೆ.