ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ (Disproportionate Assets Case) ಸಂಬಂಧಿಸಿದಂತೆ ಇಂದು ಹೈಕೋರ್ಟ್‌ನಲ್ಲಿ (High Court) ಅರ್ಜಿ ವಿಚಾರಣೆ ನಡೆಯಿತು.
ಸರ್ಕಾರ ತನಿಖೆಗೆ ನೀಡಿದ್ದ ಅನುಮತಿಯನ್ನು ವಾಪಸ್ ಪಡೆದ ಬಗ್ಗೆ ನ್ಯಾ. ಕೆ. ಸೋಮಶೇಖರ್, ನ್ಯಾ. ಉಮೇಶ್ ಎಂ. ಅಡಿಗ ಅವರಿದ್ದ ವಿಭಾಗೀಯ ಪೀಠದಲ್ಲಿ ವಿಚಾರಣೆ ನಡೆಯಿತು. ಇದನ್ನೂ ಓದಿ: ಹಿಂದೂಗಳಿಗೆ ದೊಡ್ಡ ಗೆಲುವು – ಜ್ಞಾನವಾಪಿ ಮಸೀದಿಯಲ್ಲಿ ಮೂರ್ತಿಗಳಿಗೆ ಪೂಜೆ ಮಾಡಲು ಅನುಮತಿ
Advertisement
Advertisement
ಈಗಾಗಲೇ ಈ ಪ್ರಕರಣದ ತನಿಖೆಯ ಹೊಣೆ ಲೋಕಾಯುಕ್ತ ಪೊಲೀಸರಿಗೆ ವರ್ಗಾಯಿಸಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರನ್ನು ಪ್ರತಿವಾದಿಯಾಗಿಸಲು ಮನವಿ ಮಾಡಲಾಯಿತು. ಇದನ್ನೂ ಓದಿ: ಮೈಸೂರಿಗೂ ಕಾಲಿಟ್ಟ ಧ್ವಜ ದಂಗಲ್- ಪ್ರತಾಪ್ ಸಿಂಹ ವಿರೋಧದ ಬೆನ್ನಲ್ಲೇ ಟಿಪ್ಪು ಬಾವುಟ ತೆರವು
Advertisement
ಈ ವೇಳೆ ಸಿಬಿಐ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ ಡಿಕೆ ಶಿವಕುಮಾರ್ ಪರ ವಕೀಲ ಅಭಿಷೇಕ್ ಮನುಸಿಂಘ್ವಿ, ತನಿಖೆಯ ಹೊಣೆ ಲೋಕಾಯುಕ್ತ ಪೊಲೀಸರಿಗೆ ವರ್ಗಾಯಿಸಿದರೂ ಸಿಬಿಐ ನೋಟಿಸ್ ನೀಡುತ್ತಿದೆ. ನೋಟಿಸ್ ನೀಡುತ್ತಿರುವ ಸಿಬಿಐ ಕ್ರಮ ಸರಿಯಲ್ಲ ಎಂದು ಮನವಿ ಮಾಡಿದರು.
Advertisement
ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಸಿಬಿಐ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಿ ಮುಂದಿನ ವಿಚಾರಣೆಯನ್ನು ಫೆ.12ಕ್ಕೆ ಮುಂದೂಡಿತು.