ನನ್ನನ್ನು ನೋಡಿದ್ರೆ ಕೊರೊನಾ ಇದೆ ಅಂತ ಅನ್ನಿಸುತ್ತಾ?: ಡಿ.ಕೆ. ಶಿವಕುಮಾರ್

Public TV
2 Min Read
DKS 3

ರಾಮನಗರ: ನನ್ನನ್ನು ನೋಡಿದರೆ ಕೊರೊನಾ ಲಕ್ಷಣಗಳು ಇದೆ ಎಂದು ಅನ್ನಿಸುತ್ತಾ? ನನಗೆ ಕೊರೊನಾ ಟೆಸ್ಟ್ ಮಾಡಿ ಪಾಸಿಟಿವ್ ಅಂತ ಹೇಳಿದರೆ, ಯಾತ್ರೆ ಹತ್ತಿಕ್ಕಬಹುದು ಅಂತ ಬಿಜೆಪಿ ಅವರು ತಿಳಿದಿದ್ದಾರೆ. ಯಾವುದೇ ಕಾರಣಕ್ಕೂ ಪಾದಯಾತ್ರೆ ನಿಲ್ಲಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಇಂದು ಎರಡನೇ ದಿನದ ಪಾದಯಾತ್ರೆ ದೊಡ್ಡ ಆಲಹಳ್ಳಿಯಿಂದ ಪಾರಂಭವಾಗುತ್ತಿದ್ದು ಈ ಹಿನ್ನೆಲೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾತ್ರಿ ಕೋವಿಡ್ ಟೆಸ್ಟ್ ಮಾಡಲು ಜಿಲ್ಲಾಡಳಿತ ಅಧಿಕಾರಿಗಳನ್ನು ಕಳಿಸಿದ್ದರು. ಸರ್ಕಾರ ಮತ್ತು ಜಿಲ್ಲಾಡಳಿತಕ್ಕೆ ಗೊತ್ತಿಲ್ಲ. ನನ್ನ ಹತ್ತಿರ ಹತ್ತು ಜನರ ವೈದ್ಯರ ತಂಡ ಇದೆ ಅಂತ. ನನ್ನನ್ನು ನೋಡಿದರೆ ಕೊರೊನಾ ಲಕ್ಷಣಗಳು ಇದೆ ಎಂದು ಅನ್ನಿಸುತ್ತಾ? ನಿನ್ನೆ ಸಮರ್ಥವಾಗಿ ನಡೆದಿದ್ದೇನೆ. ಎಲ್ಲೂ ಕೂಡ ಸುಸ್ತಾಗಿಲ್ಲ. ನನಗೆ ಕೊರೊನಾ ಟೆಸ್ಟ್ ಮಾಡಿ ಪಾಸಿಟಿವ್ ಅಂತ ಹೇಳಿದರೆ, ಯಾತ್ರೆ ಹತ್ತಿಕ್ಕಬಹುದು ಅಂತ ತಿಳಿದಿದ್ದಾರೆ. ಯಾವುದೇ ಕಾರಣಕ್ಕೂ ಪಾದಯಾತ್ರೆ ನಿಲ್ಲಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೋವಿಡ್‌ ಟೆಸ್ಟ್‌ ಮಾಡಿಸಿಕೊಳ್ಳಿ ಎಂದ ಆರೋಗ್ಯ ಅಧಿಕಾರಿ ವಿರುದ್ಧ ಡಿಕೆಶಿ ಗರಂ

CORONA 9

ರಾಜ್ಯದಲ್ಲಿ ಕರ್ಫ್ಯೂ ಇರುವುದರಿಂದ ಸಾಮಾನ್ಯ ಜನರು ಕಷ್ಟಪಡುವ ಸ್ಥಿತಿ ಇದೆ. ಈ ಕರ್ಫ್ಯೂವನ್ನು ತೆಗೆಯಬೇಕು. ಏರ್‌ಪೋರ್ಟ್‌ನಲ್ಲಿ ದಂಧೆ ಮಾಡುತ್ತಿದ್ದಾರೆ. ಇಬ್ಬರು ವಿದೇಶದಿಂದ ಬಂದರೇ ಒಬ್ಬರಿಗೆ ಪಾಸಿಟಿವ್ ತೋರಿಸುತ್ತಿದ್ದಾರೆ. ಕೊರೊನಾ ಹೆಸರಿನಲ್ಲಿ ದುಡ್ಡು ಹೊಡೆದಿದ್ದು ಸಾಕು. ಕಳೆದ ವರ್ಷ ಬೆಡ್ ಹಾಕಿದರೂ ಯಾರು ಮಲಗಲಿಲ್ಲ. ಆ ದುಡ್ಡು ಎಲ್ಲಿ ಹೋಯ್ತು ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ನಾಯಕತ್ವಕ್ಕಾಗಿ ಡಿಕೆಶಿಯಿಂದ ಪಾದಯಾತ್ರೆ ಡ್ರಾಮಾ: ಕಟೀಲ್

ನನ್ನ ಕಾಂಗ್ರೆಸ್‍ನವರು ರೇಪ್ ಮಾಡುತ್ತಿದ್ದಾರೆ ಎಂದು ಆರಗ ಜ್ಞಾನೇಂದ್ರ ಅವರು ನೀಡಿದ್ದ ಹೇಳಿಕೆಗೆ, ಈಗ ಕ್ಷಮೆ ಕೇಳಿ ಅಂತ ಹೇಳುತ್ತಿದ್ದಾರೆ. ಆತ ಅಜ್ಞಾನ ಅರಗ ಜ್ಞಾನೇಂದ್ರ. ಬಿಜೆಪಿ ಅವರಿಗೆ ನನ್ನ ನೆನಯದೇ ಇದ್ದರೇ ನಿದ್ದೆ ಬರಲ್ಲ. ನಾನು ಕೂತರು ನಿಂತರು ಟ್ರೋಲ್ ಮಾಡುತ್ತಾರೆ. ಅವರು ಟ್ರೋಲ್ ಮಾಡಿಕೊಳ್ಳಲಿ ಬಿಡಿ, ನಾನು ತಲೆಕೆಡಿಸಿಕೊಳ್ಳಲ್ಲ. ಈ ಪಾದಯಾತ್ರೆ 10 ದಿನವೂ ನಡೆಯುತ್ತದೆ. ಸಿಎಂ ಅಕ್ಕ-ಪಕ್ಕ ಕೂತವರಿಗೆ ಪಾಸಿಟಿವ್ ಬಂದಿದೆ. ಆದರೆ ಮುಖ್ಯಮಂತ್ರಿಗೆ ಅವರಿಗೆ ಯಾಕೆ ಟೆಸ್ಟ್ ಮಾಡಿಲ್ಲ. ಅವರಿಗೆ ಲಕ್ಷಣಗಳು ಇಲ್ವಾ. ಇದೇ ಬಿಜೆಪಿ ಅವರು ರಾಜಕೀಯಕ್ಕಾಗಿ ಮಾಡುತ್ತಿರುವ ಡ್ರಾಮ. ನಿನ್ನೆ ಕರ್ಫ್ಯೂ ನೆಪದಲ್ಲಿ, ನಮ್ಮ ಕಾರ್ಯಕರ್ತರ ಬಸ್‍ಗಳನ್ನು ಹಿಡಿದಿದ್ದರು. ಇಂದು ಕರ್ಫ್ಯೂ ಇಲ್ಲ. ಪಾದಯಾತ್ರೆಗೆ ಅಪಾರ ಸಂಖ್ಯೆಯಲ್ಲಿ ಜನ ಬರುತ್ತಾರೆ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *