ರಾಮನಗರ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೈಕೋರ್ಟ್‍ನಿಂದ (Highcourt) ರಿಲೀಫ್ ಸಿಕ್ಕಿಲ್ಲ ಇವರೇ ತೆಗೆದುಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ.
ಈ ವಿಚಾರ ಕುರಿತು ಚನ್ನಪಟ್ಟಣ ಚಿಕ್ಕನದೊಡ್ಡಿ ಗ್ರಾಮದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸ್ವಲ್ಪ ದಿನ ಇದನ್ನ ಮುಂದಕ್ಕೆ ಎಳೆಯಬೇಕಲ್ಲ. ಬಹುಶಃ ಗ್ಯಾರಂಟಿ ಕಾರ್ಯಕ್ರಮದ ಮೂಲಕ ದೇಶದಲ್ಲಿ ಅಧಿಕಾರಕ್ಕೆ ಬಂದುಬಿಡ್ತೀವಿ. ಅಧಿಕಾರಕ್ಕೆ ಬಂದಮೇಲೆ ಎಲ್ಲಾ ಕೇಸ್‍ಗಳನ್ನ ಮುಚ್ಚಿಹಾಕಬಹುದು ಅಂತಾ ಐದಾರು ತಿಂಗಳು ಮುಂದೂಡ್ತಿದ್ದಾರೆ. ಇದೆಲ್ಲಾ ಅವರ ತಂತ್ರಗಾರಿಕೆ ಅಷ್ಟೇ. ಅದು ಮುಂದೆ ಏನೇನಾಗುತ್ತೋ ನೋಡೋಣ ಎಂದು ಹೆಚ್‍ಡಿಕೆ ವಾಗ್ದಾಳಿ ನಡೆಸಿದ್ದಾರೆ.
Advertisement
Advertisement
ನಾನು ವಕೀಲನಾಗಿರುವುದಕ್ಕೆ ಕೇಸ್ ವಾಪಸ್ ತೆಗೆದುಕೊಂಡಿದ್ದು ಎಂಬ ಸಿಎಂ ಸಿದ್ದು ಹೇಳಿಕೆಗೆ ವ್ಯಂಗ್ಯವಾಡಿದ ಹೆಚ್‍ಡಿಕೆ, ಅವರು ದೊಡ್ಡ ವಕೀಲರು ಅಂತ ಗೊತ್ತು ನನಗೆ. ಇವರೊಬ್ಬರೇ ಕಾನೂನು ತಿಳಿದುಕೊಂಡಿದ್ದಾರಲ್ವಾ. ಅದಕ್ಕೆ ಅರ್ಕಾವತಿ ಡಿನೋಟಿಫಿಕೇಷನ್ ತೆಗೆದು ರಿಡೋ ಮಾಡಿದ್ರಿ. ಕೆಂಪಣ್ಣನ ಆಯೋಗ ಮಾಡಿ ಉಳಿದುಕೊಂಡ್ರಲ್ಲ. ಆ ರೀತಿಯ ವಕೀಲರು ಇವರು. ಜನಸಾಮಾನ್ಯರಿಗೆ ಒಂದು ನ್ಯಾಯ, ಇವರಿಗೊಂದು ನ್ಯಾಯ. ಆ ವಕೀಲಿಕೆಲಿಯಲ್ಲಿ ಇವರು ಬುದ್ದಿವಂತರಿದ್ದಾರೆ. ಎಸಿಬಿ (ACB) ರಚನೆ ಮಾಡಿ, ಇವರ ಮೇಲೆ ಬಂದ ಕೇಸ್ ಗಳನ್ನ ಮುಚ್ಚಿಹಾಕಿಕೊಂಡ್ರು ಎಂದು ಕಿಡಿಕಾರಿದರು. ಇದನ್ನೂ ಓದಿ: ಕಾಂಗ್ರೆಸ್ ಆರು ತಿಂಗಳಲ್ಲಿ ನೆಲ ಕಚ್ಚುವ ಪರಿಸ್ಥಿತಿ ತಲುಪಲಿದೆ: ಪ್ರಹ್ಲಾದ್ ಜೋಶಿ
Advertisement
Advertisement
ನಾನು ಸಿಎಂ ಆಗಿದ್ದಾಗ ಕಾನೂನು ಬಾಹಿರ ಚಟುವಟಿಕೆ ಬಗ್ಗೆ ಹೋರಾಟ ಮಾಡಿದ್ದೆ. ನನ್ನ ಮೇಲೆ ಇವರ ಸರ್ಕಾರದ 15 ಕೇಸ್ ಇತ್ತಲ್ಲ. ನಾನು ಆವಾಗ ಇವರ ರೀತಿ ನಡೆದುಕೊಂಡನಾ. ಇಲ್ಲ ಎರಡನೇ ಬಾರಿ ಸಿಎಂ ಆದಾಗ ನನ್ನ ಮೇಲಿನ ಕೇಸ್ ಮುಚ್ಚಿಹಾಕಿದ್ನಾ..? ಮೆರಿಟ್ ಇದ್ರೆ ಮಾಡಿಕೊಳ್ಳಲಿ ಅಂತ ಬಿಟ್ಟಿದ್ದೀನಿ. ಅವರಿಗೂ, ನಮಗೂ ಇರುವ ವ್ಯತ್ಯಾಸ ಅಷ್ಟೇ ಎಂದು ಸಿಎಂ ವಿರುದ್ಧವೂ ಮಾಜಿ ಸಿಎಂ ಹೆಚ್‍ಡಿಕೆ ಕಿಡಿಕಾರಿದ್ರು.