ಬೆಂಗಳೂರು: ಭ್ರಷ್ಟಾಚಾರದ ಮಸಿ ಬಳಿದುಕೊಂಡಿರುವ ಬಿಜೆಪಿಯವರಿಗೆ ಮುಖ ತೋರಿಸಲು ಆಗುತ್ತಿಲ್ಲ ಎಂದು ಬಿಜೆಪಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.
ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ಆಜಾನ್ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಈಗಾಗಲೇ ತೀರ್ಮಾನ ಮಾಡಿದೆ. ಈಗಾಗಲೇ ಪೊಲೀಸರು ಕೂಡ ನೊಟೀಸ್ ಜಾರಿ ಮಾಡಿದ್ದಾರೆ. ನಮ್ಮ ಪಕ್ಷದ ನಾಯಕರ ತಂಡ ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುವುದು ಮುಖ್ಯಮಂತ್ರಿಗಳ ಜವಾಬ್ದಾರಿ ಎಂದರು. ಇದನ್ನೂ ಓದಿ: ನಿದ್ರೆ ಮಾಡುತ್ತಿರುವಾಗಲೇ ಗುಂಡಿಕ್ಕಿ ಬಿಜೆಪಿ ಮುಖಂಡನ ಹತ್ಯೆ
Advertisement
Advertisement
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಕಾಂಗ್ರೆಸ್ ಅಜೆಂಡಾ ಭ್ರಷ್ಟಾಚಾರ ಹಾಗೂ ಭಯೋತ್ಪಾದನೆ ಎಂಬ ಹೇಳಿಕೆ ಬಗ್ಗೆ ಉತ್ತರಿಸಿದ ಅವರು, ದಿನ ಬೆಳಗಾದರೆ ಸರ್ಕಾರದ ಅಕ್ರಮ, ಭ್ರಷ್ಟಾಚಾರಗಳು ಬೆಳಕಿಗೆ ಬರುತ್ತಿವೆ. ನಿನ್ನೆ ಪತ್ರಿಕೆಯಲ್ಲಿ ಯಾವ ಸರ್ಕಾರಿ ಹುದ್ದೆಗೆ ಎಷ್ಟೆಷ್ಟು ದರ ನಿಗದಿಯಾಗಿದೆ ಎಂದು ವರದಿಯಾಗಿದೆ. ಇಷ್ಟೊಂದು ಭ್ರಷ್ಟಾಚಾರದ ಮಸಿ ಬಳಿದುಕೊಂಡಿರುವ ಬಿಜೆಪಿಯವರಿಗೆ ಮುಖ ತೋರಿಸಲು ಆಗುತ್ತಿಲ್ಲ. ಜನ ಹಾದಿ-ಬೀದಿಯಲ್ಲಿ ಉಗಿಯುತ್ತಿದ್ದು, ಮೊದಲು ಅವರು ತಮ್ಮ ಮುಖವನ್ನು ತೊಳೆದುಕೊಳ್ಳಲಿ. ನಂತರ ನಮ್ಮ ಬಗ್ಗೆ ಮಾತನಾಡಲಿ ಎಂದು ತಿರುಗೇಟು ಕೊಟ್ಟರು.
Advertisement
Advertisement
ಉದ್ದೇಶಪೂರ್ವಕವಾಗಿ ಈ ವಿಚಾರವನ್ನು ಕೆದಕಿ, ಜಗಳ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಇದು ಸರ್ಕಾರದ ವೈಫಲ್ಯ. ಇದನ್ನು ನಿಯಂತ್ರಿಸದಿದ್ರೆ ರಾಜ್ಯದಲ್ಲಿ ಅಶಾಂತಿ, ಕೋಮು ಸಂಘರ್ಷ ಹೆಚ್ಚುತ್ತದೆ. ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು ಎಂದು ಕರೆ ಕೊಟ್ಟರು.
ಬೆಂಗಳೂರಿನಲ್ಲಿ ಮತ್ತೊಂದು ಕೋಮುಗಲಭೆಗೆ ಸಿದ್ಧತೆ ನಡೆದಿತ್ತು ಎಂಬ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ವಿಚಾರದಲ್ಲಿ ಕ್ರಮ ಕೈಗೊಳ್ಳುವುದು ಪೊಲೀಸರ ಕರ್ತವ್ಯ. ಈ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಮಾಹಿತಿ ಪಡೆದ ನಂತರ ಮಾತನಾಡುತ್ತೇನೆ ಎಂದರು. ಇದನ್ನೂ ಓದಿ: ಕೆಲವೊಂದು ಕೋಮುವಾದಿ ಸಂಘಟನೆಗಳು ನಿರಂತರವಾಗಿ ಸಮಾಜ ಒಡೆಯುವ ಕೆಲಸ ಮಾಡುತ್ತಿವೆ: ಸಲೀಂ
ಕಾಂಗ್ರೆಸ್ ಪಕ್ಷದಲ್ಲಿ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರ ನಡುವೆ ಹೊಂದಾಣಿಕೆ ಇಲ್ಲ ಅಂದ ಕಟೀಲ್, ಅವರ ಪಕ್ಷದಲ್ಲಿ ಆಂತರಿಕ ಕಚ್ಛಾಟ, ಮಂತ್ರಿ ಬದಲಾವಣೆ, ನಾಯಕತ್ವ ಬದಲಾವಣೆ ಸೇರಿದಂತೆ ಅನೇಕ ಹುಳುಕುಗಳಿವೆ. ಅವರು ಮೊದಲು ತಮ್ಮ ಮನೆಯ ಸಮಸ್ಯೆಗಳನ್ನು ನೋಡಿಕೊಳ್ಳಲಿ. ನಂತರ ನಮ್ಮ ಬಗ್ಗೆ ಮಾತನಾಡಲಿ ಎಂದು ಟಾಂಗ್ ಕೊಟ್ಟರು.