ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ಮತ್ತು ಸಿಎಂ ಬೊಮ್ಮಾಯಿ ಏನೇ ಮಾತಾಡಲಿ. ರಾಜ್ಯದಲ್ಲಿ ಜನರು ಬದಲಾವಣೆಯನ್ನು ಬಯಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಹುಮುಖ ಪ್ರತಿಭೆ, ಸರಳ ವ್ಯಕ್ತಿತ್ವದ ಎಸ್.ನಾರಾಯಣ್ ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ. ಪಕ್ಷದ ತತ್ವ ಸಿದ್ಧಾಂತ ಒಪ್ಪಿ ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ. ಈ ಹಿಂದೆ ನಾನು ಒಂದು ದಿನಾಂಕ ನೀಡಿದ್ದೆ. ನಾರಾಯಣ್ ಇಂದೇ ಶುಭದಿನ ಎಂದು ನಿರ್ಧಾರ ಮಾಡಿ ಇಂದೇ ಪಕ್ಷ ಸೇರ್ಪಡೆ ಆಗ್ತಿದ್ದಾರೆ. ಮುಂದಿನ ದಿನಗಳಲ್ಲಿ ತಮ್ಮ ವಾಣಿಜ್ಯ ಮಂಡಲಿ ಸೇರಿದಂತೆ ಸಮುದಾಯದ ಸಂಘಟನೆ ಮಾಡಲಿದ್ದಾರೆ ಎಂದು ವಿವರಿಸಿದರು.
ನಮ್ಮ ಪಕ್ಷಕ್ಕೆ ಸೇರುವವರ ದೊಡ್ಡ ಪಟ್ಟಿ ಇದೆ. ಅರ್ಜಿ ಹಾಕಿಕೊಂಡಿದ್ದಾರೆ. ಟೈಮ್ ಫಿಕ್ಸ್ ಮಾಡಬೇಕಿದೆ. ಸಿಎಂ ಯಾರ ಜೊತೆ ಮಾತಾಡ್ತಿದ್ದಾರೆ ಗೊತ್ತಿದೆ. ಉಡುಪಿ ಶಾಸಕರ ಜೊತೆ ಏನ್ ಮಾತನಾಡಿದ್ದಾರೆ ಗೊತ್ತಿದೆ. ಬಿಜೆಪಿ ಅಧ್ಯಕ್ಷರು ತಡ ಮಾಡೋದು ಬೇಡ, ಯಾವ ಶಾಸಕರು ಸಂಪರ್ಕದಲ್ಲಿದ್ದಾರೋ ಬೇಗ ಸೇರ್ಪಡೆ ಮಾಡಿಕೊಳ್ಳಿ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಅಕ್ರಮ ಗೋ ಸಾಗಾಟ – 6 ಆರೋಪಿಗಳನ್ನ ಪೊಲೀಸರಿಗೆ ಒಪ್ಪಿಸಿದ RSS ಕಾರ್ಯಕರ್ತರು
ಪಂಚರಾಜ್ಯಗಳ ಚುನಾವಣೆ ಫಲಿತಾಂಶದ ನಂತರ ಕಾಂಗ್ರೆಸ್ ಮುಗಿದೇ ಹೋಯ್ತು. ಧೂಳೀಪಟ ಅಂತ ಬರೆದ್ರು. ಪ್ರಿಯಾಂಕಾ ಗಾಂಧಿ 200ಕ್ಕೂ ಹೆಚ್ಚು ಸಭೆ ಮಾಡಿದ್ದಾರೆ. ಮುಂದಕ್ಕೆ ಸ್ಟೆಪ್ಪಿಂಗ್ ಸ್ಟೋನ್ ಆಗಿದ್ದಾರೆ. ಪಂಜಾಬ್‍ನಲ್ಲಿ ನಮ್ಮ ಆಂತರಿಕ ಕಲಹದಿಂದ ಕೈ ತಪ್ಪಿದೆ. ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿಗಳು ಏನೇ ಮಾತಾಡಲಿ. ರಾಜ್ಯದಲ್ಲಿ ಜನ ಬದಲಾವಣೆ ಬಯಸಿದ್ದಾರೆ. ನಮ್ಮ ಕಾಲ ಮೇಲೆ ನಾವು ನಿಲ್ಲಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.