ಹುಬ್ಬಳ್ಳಿ/ಧಾರವಾಡ: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡರ ಹೇಳಿಕೆಗೆ ಸಂಬಂಧಿಸಿದಂತೆ ನನಗೇನೂ ಗೊತ್ತಿಲ್ಲ, ಅದರ ಬಗ್ಗೆ ತಿಳಿದುಕೊಂಡು ಮಾತನಾಡ್ತೇನೆ ಎಂದು ಸಚಿವ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ದೇವೇಗೌಡರು ಸಮ್ಮಿಶ್ರ ಸರ್ಕಾರದ ಬಗ್ಗೆ ಮಾತನಾಡಿದ್ದು ನನಗೇನೂ ಗೊತ್ತಿಲ್ಲ, ಅದರ ಬಗ್ಗೆ ತಿಳಿದುಕೊಂಡು ಮಾತನಾಡುತ್ತೇನೆ. ಮೈತ್ರಿಯಲ್ಲಿ ಯಾವುದೇ ಅಸಮಾಧಾನವಿಲ್ಲ, ಸಿಎಂ ಅವರಿಗೆ ನೀವೇ ಮುಂದುವರೆಯಬೇಕು ಎಂದು ಹೇಳಿದ್ದೇವೆ. ಸರ್ಕಾರಕ್ಕೆ ಸಂಬಂಧಿಸಿದಂತೆ ಬಹಿರಂಗ ಹೇಳಿಕೆಗಳನ್ನು ನೀಡದಂತೆ ಪಕ್ಷದ ಹೈಕಮಾಂಡ್ ಆದೇಶವಿದೆ ಎಂದರು.
Advertisement
Advertisement
ಉಪಚುನಾವಣಾ ಸಂದರ್ಭದಲ್ಲಿ ಕುಂದಗೋಳ ವಿಧಾನಸಭಾ ಕ್ಷೇತ್ರವನ್ನು ದತ್ತು ತೆಗದುಕೊಳ್ಳುವುದಾಗಿ ಮಾತು ನೀಡಲಾಗಿತ್ತು. ಕುಂದಗೋಳ ಅಭಿವೃದ್ದಿ ವಿಚಾರದಲ್ಲಿ ಇಂದು ವ್ಯಾಪಕ ಚರ್ಚೆ ನಡೆಸಲಿದ್ದೇವೆ. ಸಚಿವ ಆರ್.ಬಿ.ತಿಮ್ಮಾಪುರ, ಎಂಟಿಬಿ ನಾಗರಾಜ್, ಪ್ರಿಯಾಂಕ್ ಖರ್ಗೆ, ಜಯಮಾಲಾ ಸೇರಿದಂತೆ ಹಲವು ನಾಯಕರ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಕಾಮಗಾರಿ ಸಭೆ ನಡೆಸಲಿದ್ದೇವೆ. ಸಂಜೆ ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕುಂದಗೋಳ ಕ್ಷೇತ್ರದ ಮತದಾರರ ಋಣವನ್ನು ತೀರಿಸುವ ಕಾರ್ಯವನ್ನು ನಾವು ಮಾಡಲಿದ್ದೇವೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.
Advertisement
Advertisement
ದೇವೇಗೌಡರು ಹೇಳಿದ್ದೇನು?
ಮಧ್ಯಂತರ ಚುನಾವಣೆ ನಡೆಯುವ ಬಗ್ಗೆ ಸಂಶಯವಿಲ್ಲ ಎಂದು ಇಂದು ಬೆಳಗ್ಗೆ ದೇವೇಗೌಡರು ಹೊಸ ಬಾಂಬ್ ಸಿಡಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸಿಎಂ ಆಗಬಾರದು ಎಂದು ಕಾಂಗ್ರೆಸ್ ನವರು ಬಂದು ಚರ್ಚೆ ಮಾಡದೆ ಸರ್ಕಾರ ರಚನೆಗೆ ಮುಂದಾಗಿದ್ದರು. ಕುಮಾರಸ್ವಾಮಿ ಅವರನ್ನೇ ಸಿಎಂ ಮಾಡಿ ಎಂದರು. ಈಗ ಒನ್ ಥರ್ಡ್ ನಿಯಮವೂ ಇಲ್ಲ ಏನೂ ಇಲ್ಲ. ನಮ್ಮ ಒಂದು ಮಂತ್ರಿ ಸ್ಥಾನವನ್ನೂ ಕಾಂಗ್ರೆಸ್ಸಿಗೆ ಸರೆಂಡರ್ ಮಾಡಿದ್ದೀವಿ. ಎಲ್ಲವನ್ನು ಸಹಿಸಿಕೊಂಡು ಹೋಗುತ್ತಿದ್ದೇನೆ. ನಾನೇನಾದರೂ ಮಾತಾಡಿದ್ನಾ ಎಂದು ಹೇಳುವ ಮೂಲಕ ಮಧ್ಯಂತರ ಚುನಾವಣೆಯ ಸುಳಿವು ನೀಡಿದ್ದರು.
[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.biskuht.com/wp-content/plugins/wonderplugin-video-embed/engine/playvideo-64-64-0.png”]