ಬೆಂಗಳೂರು: ತೀರ್ಥಹಳ್ಳಿ ಕಾಂಗ್ರೆಸ್‍ನ ಎರಡೆರಡು ನಿಯೋಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರನ್ನು ಸದಾಶಿವನಗರ ನಿವಾಸದಲ್ಲಿ ಇಂದು ಭೇಟಿ ಮಾಡಿ ರಾಜಕೀಯ ಮೇಲಾಟಕ್ಕೆ ವೇದಿಕೆಯನ್ನಾಗಿಸಿಕೊಂಡಿದ್ದಾರೆ.
Advertisement
ತೀರ್ಥಹಳ್ಳಿ ಪಟ್ಟಣ ಪಂಚಾಯತ್ ಕಾಂಗ್ರೆಸ್ ಅಧಿಕಾರ ಹಿಡಿದ ಹಿನ್ನೆಲೆಯಲ್ಲಿ ಸದಸ್ಯರನ್ನು ಡಿಕೆಶಿ ನಿವಾಸಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಕರೆ ತಂದಿದ್ದರು. ಕಿಮ್ಮೆನೆ, ಡಿಕೆಶಿ ನಿವಾಸಕ್ಕೆ ಭೇಟಿ ನೀಡಿದ ಬೆನ್ನಲ್ಲೆ ಡಿಕೆಶಿ ನಿವಾಸಕ್ಕೆ ಮಂಜುನಾಥ ಗೌಡ ಸಹಾ ಬಂದಿದ್ದಾರೆ. ಮಂಜುನಾಥ ಗೌಡ ಡಿಕೆಶಿ ಆಪ್ತ. ಕಿಮ್ನೆನೆ ವಿರೋಧದ ನಡುವೆ ಮಂಜುನಾಥ ಗೌಡರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದ ಡಿ.ಕೆ.ಶಿವಕುಮಾರ್, ಈಗ ಪಟ್ಟಣ ಪಂಚಾಯತ್ ಸದಸ್ಯರನ್ನು ಡಿಕೆಶಿ ನಿವಾಸಕ್ಕೆ ಕರೆತರುವಲ್ಲು ಇಬ್ಬರ ನಡುವೆ ಪೈಪೋಟಿ ಉಂಟಾಗಿದೆ. ಇದನ್ನೂ ಓದಿ: ಬಿಟ್ ಕಾಯಿನ್ ಪ್ರಕರಣ – ಗೃಹಸಚಿವರೇ ಧಮ್ ಇದ್ದರೆ ಅರೆಸ್ಟ್ ಮಾಡಿ: ಡಿಕೆಶಿ
Advertisement
Advertisement
ತೀರ್ಥಹಳ್ಳಿಯಲ್ಲಿ ಕಿಮ್ಮನೆ, ಮಂಜುನಾಥ್ ಗೌಡ ಫೈಟ್
ಡಿ.ಕೆ.ಶಿವಕುಮಾರ್ ಮನೆ ಅಂಹಳದಲ್ಲಿ ಟಾಕ್ ಫೈಟ್ ಆಗಿ ಪರಿವರ್ತನೆ ಆಯ್ತು. ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಕಿಮ್ಮನೆ ರತ್ನಾಕರ್, ತೀರ್ಥಹಳ್ಳಿ ಕ್ಷೇತ್ರದಲ್ಲಿ ಏನೇ ಗೊಂದಲ ಇದ್ರು ಪಕ್ಷದ ವೇದಿಕೆಯಲ್ಲಿ ಚರ್ಚೆಮಾಡುತ್ತೇವೆ. ಆದರೆ ತೀರ್ಥಹಳ್ಳಿಯಲ್ಲಿ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಏನೇ ಇದ್ದರು ಪಕ್ಷದ ವೇದಿಕೆಯಲ್ಲಿ ನಾಲ್ಕು ಗೋಡೆಗಳ ಮದ್ಯೆ ಪ್ರಸ್ತಾಪ ಮಾಡುತ್ತೇನೆ. ಭಿನ್ನಾಭಿಪ್ರಾಯ ಇರಬೇಕು ಅದು ಆಂತರಿಕ ಪ್ರಜಾಪ್ರಭುತ್ವಕ್ಕೆ ಸಾಕ್ಷಿ ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವವಿಲ್ಲ. ಅಲ್ಲಿ ಮೋದಿ ಜೊತೆ ಪಕ್ಷದ ಮುಖಂಡರು ಮಾತನಾಡಲು ಸಾಧ್ಯವಿಲ್ಲ. ಆದರೆ ಕಾಂಗ್ರೆಸ್‍ನಲ್ಲಿ ಆಂತರಿಕ ಚರ್ಚೆ ಮಾಡಲು ಸಾಧ್ಯವಿದೆ ಏನೇ ಭಿನ್ನಾಭಿಪ್ರಾಯ ಇದ್ದರು ಪಕ್ಷದ ನಾಯಕರ ಜೊತೆ ಚರ್ಚೆ ಮಾಡುತ್ತೇನೆ. ನಾನು ಪತ್ರ ಬರೆದಿದ್ದು ಪಕ್ಷದ ವೇದಿಕೆಯಲ್ಲಿ ಬರೆದಿದ್ದು ಅದನ್ನು ಮಾಧ್ಯಮ ಮುಂದೆ ಹೇಳುವ ಅವಶ್ಯಕತೆ ಇಲ್ಲ. ಮುಂದಿನ ಚುನಾವಣೆಯಲ್ಲಿ ಟಿಕೆಟ್ ಯಾರಿಗೆ ಅಂತ ನಾಯಕರು ತೀರ್ಮಾನ ಮಾಡ್ತಾರೆ. ಮತದಾರರಲ್ಲಿ ಹಾಗೂ ಕಾರ್ಯಕರ್ತರಲ್ಲಿ ಯಾವುದೇ ಗೊಂದಲವಿಲ್ಲ ಎಂದರು. ಇದನ್ನೂ ಓದಿ: ರಾಜ್ಯ ರಾಜಕೀಯದಲ್ಲಿ ಬಿಟ್ ಕಾಯಿನ್ ಬಿರುಗಾಳಿ – 10 ಸಾವಿರ ಕೋಟಿ ರೂ. ಹಗರಣ!
Advertisement
ಮಂಜುನಾಥ ಗೌಡ ಮಾತನಾಡಿ, ಕ್ಷೇತ್ರದಲ್ಲಿ ಆಕಾಂಕ್ಷಿಗಳು ಸಾಕಷ್ಟು ಜನ ಇದ್ದಾರೆ. ಆಕಾಂಕ್ಷಿಗಳು ಎಲ್ಲಾ ಅಭ್ಯರ್ಥಿ ಆಗಲು ಸಾಧ್ಯವಿಲ್ಲ. ನಾನು ಕೂಡ ಟಿಕೆಟ್ ಪ್ರಬಲ ಆಕಾಂಕ್ಷಿ. ಟಿಕೆಟ್ ಯಾರಿಗೆ ಕೊಡಬೇಕು ಎಂದು ತೀರ್ಥಹಳ್ಳಿಯಲ್ಲಿ ತೀರ್ಮಾನ ಆಗಲ್ಲ. ಕೆಪಿಸಿಸಿ ಮಟ್ಟದಲ್ಲಿ ತೀರ್ಮಾನ ಆಗುತ್ತದೆ. ಇಲ್ಲದಿದ್ದರೇ ಎಐಸಿಸಿ ಮಟ್ಟದಲ್ಲಿ ತೀರ್ಮಾನ ಆಗುತ್ತದೆ. ನನ್ನ ನಾಯಕರು ಡಿ.ಕೆ ಶಿವಕುಮಾರ್ ಅವರು ಹೇಳಿದಂತೆ ನಾನು ಕೇಳುತ್ತೇನೆ. ಕೆಲವರು ಪತ್ರವನ್ನು ಪ್ರೀತಿಯಿಂದ ಬರೆದಿರಬಹುದು. ಕಠೋರ ಶಬ್ದ ಬಳಸಿರಬಹುದು, ಪ್ರೀತಿ ಮಾಡುವ ವಯಸ್ಸು ಇದಲ್ಲ ಎಂದು ಕಿಮ್ಮನೆ ರತ್ನಾಕರ್ ಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಬಿಟ್ ಕಾಯಿನ್ ಹಗರಣ ಮುಚ್ಚಿಹಾಕಲು ಬಿಜೆಪಿ, ಕಾಂಗ್ರೆಸ್ ಯತ್ನ: ಎಚ್‍ಡಿಕೆ