– ಆಯುಧ ಪೂಜೆಯೊಳಗೆ ಪದಾಧಿಕಾರಿಗಳ ನೇಮಕ
ನವದೆಹಲಿ : ಜೆಡಿಎಸ್‍ನದ್ದು ಮಿಷನ್ 123, ಬಿಜೆಪಿಯವರದ್ದು150 ಆದರೆ, ನಮ್ಮದು 224, ನಾವು 224 ಕ್ಷೇತ್ರಗಳಲ್ಲೂ ಗೆಲವು ಸಾಧಿಸಲು ಪ್ರಯತ್ನ ಮಾಡಲಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಹೈಕಮಾಂಡ್ ನಾಯಕರ ಭೇಟಿಗೆ ನವದೆಹಲಿಗೆ ತೆರಳಿರುವ ಅವರು, ಮಾಧ್ಯಮಗಳ ಜೊತೆಗೆ ಮಾತನಾಡಿದರು. ಪದಾಧಿಕಾರಿಗಳ ಆಯ್ಕೆ ಸಂಬಂಧ ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದೇನೆ. ದಸರಾ ಒಳಗೆ ಎಲ್ಲ ಜಿಲ್ಲೆಗಳಲ್ಲೂ ಪದಾಧಿಕಾರಿಗಳನ್ನು ಆಯ್ಕೆ ಮಾಡುವ ಉದ್ದೇಶ ಹೊಂದಿದ್ದು ತಳಮಟ್ಟದಲ್ಲಿ ಸಕ್ರಿಯವಾಗಿರುವ ಯುವ ಸಮುದಾಯಕ್ಕೆ ಹೆಚ್ಚಿನ ಮನ್ನಣೆ ಸಿಗಲಿದೆ ಎಂದು ಅವರು ಹೇಳಿದರು. ಇದನ್ನೂ ಓದಿ: ಕಾಂಗ್ರೆಸ್ ಸೇರ್ಪಡೆಗೆ ಎಷ್ಟು ಜನ ಆಸಕ್ತರು ಎಂದು ಹೇಳಲ್ಲ: ಡಿಕೆಶಿ
Advertisement
Advertisement
ಮುಂದಿನ ಮುಖ್ಯಮಂತ್ರಿ ವಿಚಾರವಾಗಿ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಮಾತನಾಡಿದ ಅವರು, ನನಗೆ ಯಾವುದೇ ಮಾಹಿತಿ ಇಲ್ಲ. ಕಾಂಗ್ರೆಸ್ ಪಕ್ಷವೇ ಒಂದು ಕುಟುಂಬ. ನಮ್ಮ ಕುಟುಂಬದಲ್ಲಿ ಯಾವ ಕಲಹವೂ ಆಗುವುದಿಲ್ಲ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರು ಏನು ಹೇಳುತ್ತಾರೋ ಅದೇ ಅಂತಿಮ ಎಂದು ಹೇಳಿದರು.
Advertisement
Advertisement
ನಾನು 224 ಶಾಸಕರ ಜೊತೆಗೂ ಮಾತನಾಡುತ್ತೇನೆ. ಯಾರ ಜೊತೆಗೂ ನನಗೆ ಭಿನ್ನಾಭಿಪ್ರಾಯವಿಲ್ಲ. ಜೆಡಿಎಸ್ ನಿಂದ ಯಾರೆಲ್ಲ ಬರಲು ಸಿದ್ಧರಿದ್ದಾರೆ ಎಂಬ ಮಾಹಿತಿ ಬಹರಂಗಪಡಿಸಲು ಸಾಧ್ಯವಿಲ್ಲ. ರಾಜಕೀಯ ಸಂಪರ್ಕದ ವಿಚಾರ ಮಾಧ್ಯಮಗಳ ಮುಂದೆ ಮಾತನಾಡುವಂತದ್ದಲ್ಲ. ಬಿಜೆಪಿ ಎಷ್ಟು ಜನರನ್ನು ಸೇರಿಸಿಕೊಳ್ಳುತ್ತೊ ಸೇರಿಸಿಕೊಳ್ಳಲಿ ಬಳಿಕ ನಾವು ಈ ಬಗ್ಗೆ ಚಿಂತನೆ ಮಾಡ್ತೇವೆ ಎಂದ ಡಿ.ಕೆ ಶಿವಕುಮಾರ್ ಕಾಂಗ್ರೆಸ್ ಸಂಪರ್ಕದಲ್ಲಿರುವ ಶಾಸಕರ ಮಾಹಿತಿ ಬಿಟ್ಟು ಕೊಡಲಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಅಪೌಷ್ಟಿಕತೆ ನಿವಾರಣೆಗೆ 35 ಬೆಳೆ ತಳಿ ಬಿಡುಗಡೆ ಮಾಡಿದ ಪ್ರಧಾನಿ ಮೋದಿ
ವಿಧಾನಸಭೆ ಉಪಚುನಾವಣೆ ಸಂಬಂಧ ಎಐಸಿಸಿ ಈಗಾಗಲೇ ಒಂದು ಕ್ಷೇತ್ರದ ಅಭ್ಯರ್ಥಿ ಹೆಸರು ಪ್ರಕಟಿಸಿದ್ದು, ಮತ್ತೊಂದು ಕ್ಷೇತ್ರದ ಅಭ್ಯರ್ಥಿ ಹೆಸರನ್ನು ನಾವು ಚರ್ಚಿಸಿ ಹೈಕಮಾಂಡ್ ಗೆ ಕಳುಹಿಸುತ್ತೇವೆ. ಕಳೆದ ಬಾರಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟಿತ್ತೋ ಅವರು ಚುನಾವಣೆ ನಂತರವೂ ಪಕ್ಷ ಸಂಘಟನೆಗೆ ಶ್ರಮಿಸಿರುತ್ತಾರೆ. ಆದರೆ ಅಭ್ಯರ್ಥಿಯ ಅಂತಿಮ ಆಯ್ಕೆ ಹೈಕಮಾಂಡ್ ಮಾಡುತ್ತದೆ. ಈ ಬಗ್ಗೆ ನಾನು ಬೆಂಗಳೂರಿಗೆ ಮರಳಿದ ನಂತರ ನಾಯಕರ ಜೊತೆ ಚರ್ಚಿಸುತ್ತೇನೆ. ಇದನ್ನೂ ಓದಿ: ಸ್ಟೈಲಿಷ್ ಕೇಶ ವಿನ್ಯಾಸ, ಕ್ಲೀನ್ ಶೇವ್, ಟ್ರಿಮ್‍ಗೂ ತಾಲಿಬಾನ್ ನಿಷೇಧ
ನಮ್ಮ ಪಕ್ಷದ ಸಿದ್ಧಾಂತ, ನಾಯಕತ್ವದ ಬಗ್ಗೆ ಯಾರಿಗೆ ನಂಬಿಕೆ ಇದೆಯೋ, ಅವರೆಲ್ಲ ಪಕ್ಷ ಸೇರಲು ಅರ್ಜಿ ಹಾಕಬೇಕು. ಅದನ್ನು ಪರಿಶೀಲಿಸಲು ಒಂದು ಸಮಿತಿ ಇದೆ. ಯಾರೇ ಬಂದರೂ ಬೇಷರತ್ತಾಗಿ ಬೆಂಬಲ ನೀಡಬೇಕು ಎಂದು ಹೇಳಿದ್ದೇವೆ. ಸುರೇಶ್ ಗೌಡ ಅವರ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ರಾಜಣ್ಣ ಅವರು ನೀಡಿರುವ ಹೇಳಿಕೆ ವಿಚಾರವಾಗಿ ನಾನು ಮಾಹಿತಿ ಪಡೆಯುತ್ತೇನೆ. ಈಗ ಅದರ ಬಗ್ಗೆ ಮಾತನಾಡಿ ರಾಜಣ್ಣ ಹಾಗೂ ಸುರೇಶ್ ಅವರ ಘನತೆಗೆ ಧಕ್ಕೆ ತರುವುದಿಲ್ಲ ಎಂದು ಡಿಕೆಶಿ ಹೇಳಿದರು.