ಬೆಂಗಳೂರು: ಮಾಜಿ ಡಾನ್ ಮುತ್ತಪ್ಪ ರೈ (Muttappa Rai) ಪುತ್ರ ರಿಕ್ಕಿ ರೈ ಗುಂಡೇಟು ತಿಂದು ಮಣಿಪಾಲ್ ಆಸ್ಪತ್ರೆ (Manipal Hospital) ಸೇರಿದ್ದು, ಚಿಕಿತ್ಸೆ ಪಡೆಯುತ್ತಿರುವ ರಿಕ್ಕಿ ಆರೋಗ್ಯವನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ವಿಚಾರಿಸಿದ್ದಾರೆ.
ಆಸ್ಪತ್ರೆಗೆ ಭೇಟಿ ನೀಡುವ ಮೊದಲೇ ರಿಕ್ಕಿ ರೈಗೆ (Rikki Rai) ಕರೆ ಮಾಡಿ ಘಟನೆ ಹೇಗಾಯ್ತು ಎಂದು ಮಾಹಿತಿ ಪಡೆದಿದ್ದಾರೆ. ಆರೋಪಿಗಳು ಯಾರೇ ಆಗಿದ್ದರೂ ಪೊಲೀಸರು ಪತ್ತೆ ಹಚ್ಚುತ್ತಾರೆ. ನಾನು ಗೃಹ ಇಲಾಖೆ ಜೊತೆಗೆ ಪ್ರಕರಣದ ಬಗ್ಗೆ ಮಾತನಾಡುತ್ತೇನೆ. ಪೊಲೀಸರು ಆರೋಪಿಗಳನ್ನ ಪತ್ತೆ ಮಾಡುತ್ತಾರೆ. ನೀನು ಆರೋಗ್ಯದ ಕಡೆ ಗಮನ ಕೊಡು ಎಂದು ಡಿಕೆಶಿ ಪೋನ್ ಮೂಲಕ ಸಾಂತ್ವನ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.ಇದನ್ನೂ ಓದಿ: Exclusive | ರಿಕ್ಕಿ ರೈಗಿದ್ದ ಭದ್ರತೆ ನೋಡಿದ್ರೆ ಎದುರಾಳಿಗಳು ಹತ್ತಿರ ಸುಳಿಯೋಕು ನಡುಗುತ್ತಾರೆ!
ಶನಿವಾರ ಸಂಜೆ ಡಿಕೆಶಿ ರಿಕ್ಕಿ ರೈ ಜೊತೆ ಮಾತನಾಡಿ ಆರೋಗ್ಯ ವಿಚಾರಿಸಿದ್ದಾರೆ. ಇತ್ತ ಪೊಲೀಸರ ತನಿಖೆ ನಡುವೆ ಡಿಸಿಎಂ ಆರೋಗ್ಯ ವಿಚಾರಿಸಿರುವುದು ಆತ್ಮಬಲ ಹೆಚ್ಚಿಸಿದೆ ಎಂದು ರಿಕ್ಕಿ ರೈ ಹೇಳಿದ್ದಾರೆ.
ಏನಿದು ಘಟನೆ?
ರಿಕ್ಕಿ ರೈ ತಮ್ಮ ಫಾರ್ಚೂನರ್ ಕಾರಿನಲ್ಲಿ ಡ್ರೈವರ್ ಮತ್ತು ಗನ್‌ಮ್ಯಾನ್ ಜೊತೆಗೆ ಬಿಡದಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದಾಳಿ ನಡೆದಿದೆ. ಮನೆಯ ಕಾಂಪೌಂಡ್ ಬಳಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ರಿಕ್ಕಿ ರೈ ಅವರಿಗೆ ಗಾಯಗಳಾಗಿವೆ.
ಡ್ರೈವಿಂಗ್ ಸೀಟ್ ಟಾರ್ಗೆಟ್ ಮಾಡಿ ಫೈರಿಂಗ್:
ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಮೇಲೆ ನಡೆದ ಶೂಟೌಟ್‌ನಲ್ಲಿ ದುಷ್ಕರ್ಮಿಗಳು ಡ್ರೈವಿಂಗ್ ಸೀಟ್‌ನನ್ನೇ ಗುರಿಯಾಗಿಸಿ 2 ಸುತ್ತು ಗುಂಡುಗಳನ್ನು ಹಾರಿಸಿದ್ದಾರೆ. ರಿಕ್ಕಿ ರೈ ಸಾಮಾನ್ಯವಾಗಿ ತಾನೇ ಕಾರು ಚಾಲನೆ ಮಾಡುತ್ತಿದ್ದ ಕಾರಣ, ದಾಳಿಕೋರರು ಡ್ರೈವಿಂಗ್ ಸೀಟ್‌ನ ಮೇಲೆ ಗುರಿ ಇಟ್ಟಿದ್ದರು. ಆದರೆ, ಈ ಬಾರಿ ಕಾರನ್ನು ಚಾಲಕ ರಾಜು ಚಲಾಯಿಸುತ್ತಿದ್ದು, ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದ. ಆದರೆ, ಪಕ್ಕದ ಸೀಟ್‌ನಲ್ಲಿದ್ದ ರಿಕ್ಕಿ ರೈ ಅವರ ಮೂಗು ಮತ್ತು ಕೈಗೆ ಗುಂಡು ತಾಕಿದ್ದು, ಗಂಭೀರ ಗಾಯಗೊಂಡಿದ್ದರು.
ಘಟನೆಯ ಸ್ಥಳಕ್ಕೆ ರಾಮನಗರ ಎಸ್ಪಿ ಶ್ರೀನಿವಾಸ್ ಗೌಡ ಮತ್ತು ಡಿವೈಎಸ್‌ಪಿ ಶ್ರೀನಿವಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ದಾಳಿಯ ಹಿಂದಿನ ಕಾರಣ, ದುಷ್ಕರ್ಮಿಗಳ ಗುರುತು ಮತ್ತು ಈ ಘಟನೆಯ ಹಿನ್ನೆಲೆಯನ್ನು ಪತ್ತೆಹಚ್ಚಲು ತೀವ್ರ ಪ್ರಯತ್ನ ನಡೆಯುತ್ತಿದೆ.ಇದನ್ನೂ ಓದಿ: ಗೆಳತಿಯೊಂದಿಗೆ ಲಿವ್ ಇನ್‌ನಲ್ಲಿರಲು ಮನೆಯವರ ವಿರೋಧ – ರೈಲ್ವೆ ಹಳಿಗೆ ಹಾರಿ ಯುವಕ ಆತ್ಮಹತ್ಯೆ