– ಬೆಳಗಾವಿ ರಾಜಕಾರಣ, ಡಿಕೆಶಿಯಿಂದ ಸರ್ಕಾರ ಬೀಳಲಿದೆ
ಬೆಳಗಾವಿ: ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಸಿಡಿ ಮಾಸ್ಟರ್ ಮೈಂಡ್. ಸಿಡಿನೇ ಡಿಕೆಶಿ ಶಕ್ತಿಯಾಗಿದ್ದು ಆತ ಒಬ್ಬ ಪುಕ್ಕಲ, ಮೋಸಗಾರ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ಉಪಮುಖ್ಯಮಂತ್ರಿ ವಿರುದ್ಧ ಕಿಡಿಕಾರಿದ್ದಾರೆ.
Advertisement
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕನಕಪುರದಲ್ಲಿ ನಡೆದ ಎಲ್ಲಾ ಚುನಾವಣೆ ಹೊಂದಾಣಿಕೆ ಆಗಿವೆ. ರಾಜ್ಯದಲ್ಲಿ ಆಪರೇಷನ್ ಕಮಲ ಎಲ್ಲವೂ ಸುಳ್ಳು. ಜನರ ಗಮನ ಬೇರೆಡೆ ಸೆಳೆಯಲು ಈ ರೀತಿಯ ಯತ್ನ ಮಾಡಲಾಗುತ್ತಿದೆ. ಲಾಟರಿ ಮಂತ್ರಿ, ಶಾಸಕರು ಯಾವಾಗಲೂ ಡೇಂಜರ್ ಎಂದರು.
Advertisement
Advertisement
ಡಿಸಿಎಂ ಡಿಕೆ ಶಿವಕುಮಾರ್ ನಾಟಕ ಮಂಡಳಿ ಬಿಜೆಪಿ ನಾಯಕರ ಹೆಸರು ಕೆಡಿಸುತ್ತಿದ್ದಾರೆ. 50, 100 ಕೋಟಿ ಎಂದು ಅಪಪ್ರಚಾರ ಮಾಡಲಾಗಿದೆ. 2019ರಲ್ಲಿ ಡಿಕೆಶಿ ಸೊಕ್ಕು, ದುರಾಡಳಿತದಿಂದ ನಾವೆಲ್ಲ ಪಕ್ಷಾಂತರ ಮಾಡಿದ್ದೇವೆ. ಆಪರೇಷನ್ ಕಮಲ ಎಲ್ಲವೂ ನಡೆಯುತ್ತಿಲ್ಲ ಎಲ್ಲವೂ ಸುಳ್ಳು. ಗ್ಯಾರಂಟಿ ಯೋಜನೆ ಫೇಲ್ ಆಗಿದೆ. ಹೀಗಾಗಿ ಜನರ ದಿಕ್ಕು ಬದಲು ಮಾಡಲು ಈ ರೀತಿಯಲ್ಲಿ ಮಾಡುತ್ತಿದ್ದಾರೆ ಎಂದು ಹೇಳಿದರು.
Advertisement
ಶಿವಕುಮಾರ್ ಅಷ್ಟೇ ಯಾಕೆ ಆಪರೇಷನ್ ಕಮಲದ ಬಗ್ಗೆ ಮಾತನಾಡುತ್ತಿದ್ದಾರೆ. ಅನಿವಾರ್ಯವಾಗಿ ನಿನ್ನೆ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ. ಅತಿ ಶೀಘ್ರದಲ್ಲೇ ಡಿಕೆಶಿ ಮಾಜಿ ಮಂತ್ರಿ ಆಗಲಿದ್ದಾರೆ. ನನಗೆ ಆಗಿರೋ ಕಷ್ಟ ಸತೀಶ್ ಜಾರಕಿಹೊಳಿಗೆ ಆಗಲ್ಲ ಎಂದರು. ಇದನ್ನೂ ಓದಿ: ಬಿಜೆಪಿಯವರು ರಾಜಕೀಯ ವ್ಯವಸ್ಥೆಯನ್ನೇ ಹಾಳು ಮಾಡ್ತಿದ್ದಾರೆ: ದಿನೇಶ್ ಗುಂಡೂರಾವ್
ಜೆಡಿಎಸ್, ಬಿಜೆಪಿ ಮೈತ್ರಿ ಹಿನ್ನೆಲೆಯಲ್ಲಿ ಹೆಚ್‌ಡಿ ಕುಮಾರಸ್ವಾಮಿ ಭೇಟಿ ಮಾಡಿದ್ದೇನೆ. ಕಾಂಗ್ರೆಸ್ ಸರ್ಕಾರ ಬೀಳಬಾರದು, ಮುಂದುವರಿಯಬೇಕು. ಈ ಹಿಂದಿನ ಸಿದ್ದರಾಮಯ್ಯ ಈಗ ಇಲ್ಲ. 6 ತಿಂಗಳು ಏನು ಮಾತಾಡಲ್ಲ ಎಂದು ಸಂಕಲ್ಪ ಮಾಡಿದೆ. ನಮ್ಮ ಪಕ್ಷದ ಹೆಸರು ಕೆಡಿಸಿದ್ದರಿಂದ ನಾನು ಅನಿವಾರ್ಯವಾಗಿ ಮಾತನಾಡುತ್ತಿದ್ದೇನೆ. ಹಿರಿಯ ಶಾಸಕನಾಗಿ ಸರ್ಕಾರದ ವಿರುದ್ಧ ಮಾತನಾಡಲ್ಲ ಎಂದರು.
ಇದೇ ವೇಳೆ ರಾಜ್ಯಕ್ಕೆ ಡಾ. ಬಿಆರ್ ಅಂಬೇಡ್ಕರ್ ಹೆಸರು ಇಡಬೇಕು. ಅಂಬೇಡ್ಕರ್ ಜೀವನ ಸಾಧನೆ ನಮ್ಮ ಕಣ್ಣಮುಂದೆ ಇದೆ. ಅಂಬೇಡ್ಕರ್ ಹೆಸರು ಇಡಬೇಕು ಎಂದು ಆಗ್ರಹಿಸಿದರು.
ನೆಲಮಂಗಲ ಮಾಜಿ ಶಾಸಕ ನಾಗರಾಜ್‌ಗೆ ಇತ್ತೀಚೆಗೆ ಬೇದರಿಕೆ ಹಾಕಿದ್ದಾರೆ. ಮಾಜಿ ಶಾಸಕರೊಬ್ಬರ ಫೋನ್ ಮೂಲಕ ಬೆದರಿಕೆ ಹಾಕಿದ್ದಾರೆ. ಅಷ್ಟೇ ಅಲ್ಲದೇ ಸಿದ್ದರಾಮಯ್ಯ, ಪರಮೇಶ್ವರ್ ಭೇಟಿಯಾಗಿ ಸಿಡಿ ಪ್ರಕರಣ ಸಿಬಿಐ ವಹಿಸಬೇಕೆಂದು ಮನವಿ ಮಾಡುತ್ತೇನೆ. ಶೀಘ್ರದಲ್ಲೇ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಆಗ್ತಿವಿ ಎಂದರು. ಇದನ್ನೂ ಓದಿ: ಬಿಜೆಪಿ ಆಪರೇಷನ್ ಕಮಲದ ಕನಸು ನನಸಾಗಲ್ಲ: ಜಮೀರ್
Web Stories