ರಾಮನಗರ: ಪಕ್ಷ ಸಂಘಟನೆ ಹಾಗೂ ಕಾರ್ಯಕರ್ತರ ಉತ್ಸಾಹಕ್ಕಾಗಿ ಡಿ.ಕೆ.ಶಿವಕುಮಾರ್ (DK Shivakumar) ಹೋರಾಟ ಮಾಡುತ್ತಿದ್ದಾರೆ. ಸಮಯ ಬಂದಾಗ ಅವರಿಗೆ ಸಿಗಬೇಕಾದ ಸ್ಥಾನಮಾನ ಸಿಗುತ್ತೆ ಎಂದು ಶಾಸಕ ಇಕ್ಬಾಲ್ ಹುಸೇನ್ (Iqbal Hussain) ತಿಳಿಸಿದ್ದಾರೆ.
ಕೆಪಿಸಿಸಿ (KPCC) ಅಧ್ಯಕ್ಷರ ಬದಲಾವಣೆಯಾಗಬೇಕು ಎಂಬ ವಿಚಾರ ಕುರಿತು ರಾಮನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ಯ ಈ ವಿಚಾರಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇದಕ್ಕೆ ಫುಲ್ ಸ್ಟಾಪ್ ಹಾಕಿದ್ದಾರೆ. ಯಾರೂ ಕೂಡ ಈ ಬಗ್ಗೆ ಮಾತನಾಡಬಾರದೆಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಇಲ್ಲಿ ಯಾವ ಬದಲಾವಣೆಯೂ ಇಲ್ಲ, ಯಾವ ಚೇರು ಕೂಡ ಖಾಲಿ ಇಲ್ಲ ಎಂದರು. ಇದನ್ನೂ ಓದಿ: ದರ್ಶನ್ ಜಾಮೀನು ರದ್ದುಗೊಳಿಸಿ – ಸುಪ್ರೀಂಗೆ 1492 ಪುಟಗಳ ದಾಖಲೆ ಸಲ್ಲಿಸಿದ ಪೊಲೀಸರು
ಇನ್ನೂ ರಾಮನಗರದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ವಿಚಾರ ಕುರಿತು ಮಾತನಾಡಿದ ಅವರು, ಜನರು ಅನಾವಶ್ಯಕವಾಗಿ ಸಂಘಗಳನ್ನ ಮಾಡಿಕೊಂಡು ಸಾಲ ಮಾಡಬಾರದು. ಬಿಡಿಸಿಸಿ ಬ್ಯಾಂಕ್‌ನಲ್ಲಿ 0%ನಲ್ಲಿ ಸಾಲ ಸೌಲಭ್ಯ ನೀಡಲಾಗುತ್ತಿದೆ. ಮೈಕ್ರೋ ಫೈನಾನ್ಸ್ ಅವರನ್ನು ದೂರವಿಡಿ ಎಂದು ಜನರಿಗೆ ಮನವಿ ಮಾಡುತ್ತೇನೆ. ದುಡಿದ ಹಣವನ್ನು ಮೈಕ್ರೋ ಫೈನಾನ್ಸ್‌ಗೆ ಬಡ್ಡಿಕಟ್ಟಿ ಹಾಳು ಮಾಡಿಕೊಳ್ಳಬೇಡಿ. ಮೈಕ್ರೋ ಫೈನಾನ್ಸ್ ನಡೆಸುವವರು ಯಾವುದೇ ಆರ್‌ಬಿಐ ನಿಯಮಗಳನ್ನು ಇಟ್ಟುಕೊಂಡಿಲ್ಲ. ಅಲ್ಲದೇ ಫೈನಾನ್ಸ್‌ಗಳಿಗೂ ಆರ್‌ಬಿಐಗೂ ಯಾವುದೇ ಸಂಬಂಧವಿಲ್ಲ. ಯಾವ್ಯಾವುದೋ ದೇವರ ಹೆಸರಿಟ್ಟುಕೊಂಡು ಜನರಿಗೆ ಮೋಸ ಮಾಡುತ್ತಿದ್ದಾರೆ. ಇಂತಹ ಫೈನಾನ್ಸ್ ಕಂಪನಿಗಳಿಗೆ ಅಂತ್ಯ ಕಾಣಬೇಕು ಎಂದು ಇಕ್ಬಾಲ್ ಹುಸೇನ್ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ. ಇದನ್ನೂ ಓದಿ: ರೌಡಿಶೀಟರ್ ಹತ್ಯೆ; ಬೆಂಗಳೂರಲ್ಲಿ ಕೊಲೆ ಮಾಡಿ ತಮಿಳುನಾಡಿನಲ್ಲಿ ಸುಟ್ಟುಹಾಕಿದ್ದ ಹಂತಕ