‘ಪವರ್’ ಮಿನಿಸ್ಟರ್ ಡಿಕೆ ಶಿವಕುಮಾರ್ ಬಳಿ ಆಸ್ತಿ ಎಷ್ಟಿದೆ?

Public TV
1 Min Read
dk shivakumar it raid

ಬೆಂಗಳೂರು: ಡಿಕೆ ಶಿವಕುಮಾರ್ ಮನೆ ಮೇಲೆ ಐಟಿ ದಾಳಿ ನಡೆದಿದ್ದು, ಕಾಂಗ್ರೆಸ್‍ನವರು ಇದೊಂದು ರಾಜಕೀಯ ದಾಳಿ ಎಂದು ಆರೋಪಿಸುತ್ತಿದ್ದರೆ ಬಿಜೆಪಿಯವರು ಪೂರ್ವ ನಿಯೋಜಿತವಾಗಿ ದಾಳಿ ನಡೆದಿದೆ ಎಂದು ಹೇಳಿದೆ.

ಐಟಿ ದಾಳಿಯಿಂದಾಗಿ ಈಗ #DKShivakumar ಭಾರತದಲ್ಲಿ ನಂಬರ್ ಒನ್ ಹ್ಯಾಶ್ ಟ್ಯಾಗ್ ಆಗಿದ್ದು, ಟ್ವಿಟ್ಟರ್ ನಲ್ಲಿ ಟ್ರೆಂಡಿಂಗ್ ಟಾಪಿಕ್ ಆಗಿದೆ. ಈ ಚರ್ಚೆಯ ವೇಳೆ ಓದುಗರಾದ ನಿಮಗೆ ಇಂಧನ ಸಚಿವರ ಬಳಿ ಆಸ್ತಿ ಎಷ್ಟಿದೆ ಎನ್ನುವ ಪ್ರಶ್ನೆ ಹುಟ್ಟದೇ ಇರಲಾರದು.

ಆಸ್ತಿ ಎಷ್ಟಿದೆ?  ಡಿಕೆ ಶಿವಕುಮಾರ್ ಅವರು 2013ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಮಾಹಿತಿಯಲ್ಲಿ ತನ್ನ ಬಳಿ 251 ಕೋಟಿ ರೂ. ಆಸ್ತಿ ಇದೆ ಎಂದು ಘೋಷಿಸಿಕೊಂಡಿದ್ದರು. ಇದಕ್ಕೂ ಮೊದಲು 2008ರಲ್ಲಿ ನಡೆದ ಚುನಾವಣೆ ವೇಳೆ ತನ್ನ ಬಳಿ 75 ಕೋಟಿ ರೂ. ಆಸ್ತಿ ಇದೆ ಎಂದು ತಿಳಿಸಿದ್ದರು.

twitter dkshi

ಎರಡನೇ ಶ್ರೀಮಂತ ಸಚಿವ: 251 ಕೋಟಿ ರೂ. ಆಸ್ತಿಯನ್ನು ಹೊಂದುವ ಮೂಲಕ ಡಿಕೆ ಶಿವಕುಮಾರ್ ಅವರು ದೇಶದ ಶ್ರೀಮಂತ ಸಚಿವರ ಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. 2016ರ ಆಗಸ್ಟ್ ನಲ್ಲಿ ಅಸೋಶಿಯೇಷನ್ ಫಾರ್ ಡೆಮೊಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಪಟ್ಟಿಯನ್ನು ಬಿಡುಗಡೆ ಮಾಡಿದ್ದು, 496 ಕೋಟಿ ರೂ. ಆಸ್ತಿಯನ್ನು ಹೊಂದಿರುವ ಆಂಧ್ರಪ್ರದೇಶದ ತೆಲುಗು ದೇಶಂ ಪಕ್ಷದ ಸಚಿವ ಪೊಂಗುರು ನಾರಾಯಣ ದೇಶದ ಅತ್ಯಂತ ಶ್ರೀಮಂತ ಸಚಿವರೆನಿಸಿಕೊಂಡಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ಚುನಾವಣಾ ಆಯೋಗಕ್ಕೆ ನೀಡಿರುವ ಆಸ್ತಿ ಮೌಲ್ಯದ ಮಾಹಿತಿಯನ್ನು ಆಧರಿಸಿ, 29 ವಿಧಾನಸಭೆ ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 620 ಸಚಿವರ ಪೈಕಿ 609 ಸಚಿವರನ್ನು ಅಧ್ಯಯನ ನಡೆಸಿ ವರದಿ ತಯಾರಿಸಿತ್ತು.

ಡಿಕೆಶಿ ಬಳಿ ಇರುವ ಒಟ್ಟು ಆಸ್ತಿ ಇಷ್ಟು:
2008 – 75,59,87,229 ರೂ.
2013 – 251,50,96,329 ರೂ.

dk shivakumar assets 1

Share This Article
Leave a Comment

Leave a Reply

Your email address will not be published. Required fields are marked *