BelgaumDistrictsKarnatakaLatestLeading NewsMain Post

ಸಂತೋಷ್ ಪಾಟೀಲ್ ಪತ್ನಿಗೆ 11 ಲಕ್ಷ ರೂ. ಚೆಕ್ ವಿತರಿಸಿದ ಡಿಕೆಶಿ

ಬೆಳಗಾವಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ(ಇಂದು) ಬೆಳಗಾವಿ ತಾಲೂಕಿನ ಬಡಸ್ ಗ್ರಾಮಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿ ನೀಡಿದರು. ಈ ವೇಳೆ ಸಂತೋಷ್ ಕುಟುಂಬಸ್ಥರಿಗೆ 11 ಲಕ್ಷ ರೂ. ಚೆಕ್ ವಿತರಣೆ ಮಾಡಿದರು.

ಬೆಳಗಾವಿ ತಾಲೂಕಿನ ಸಾಂಬ್ರಾ ವಿಮಾನ ನಿಲ್ದಾಣದಿಂದ ನೇರವಾಗಿ ಬಡಸ ಗ್ರಾಮದಲ್ಲಿರುವ ಸಂತೋಷ್ ಅವರ ಮನೆಗೆ ಭೇಟಿ ನೀಡಿದ ಡಿ.ಕೆ.ಶಿವಕುಮಾರ್ ಮೃತ ಸಂತೋಷ್ ಪತ್ನಿ ಮತ್ತು ಆತನ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.  ಇದನ್ನೂ ಓದಿ:  ಸತ್ತಿರುವ ವಿಚಾರಕ್ಕೆ ಹೋರಾಟ ಮಾಡಿದ್ದು ಸಣ್ಣ ವಿಚಾರನಾ?: ಸಿದ್ದರಾಮಯ್ಯ ಕಿಡಿ

ಈ ವೇಳೆ ಡಿಕೆಶಿಗೆ ಶಾಸಕ ಮಹಾಂತೇಶ್ ಕೌಜಲಗಿ, ಶಾಸಕಿಯರಾದ ಲಕ್ಷ್ಮೀ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್ ಸಾಥ್ ನೀಡಿದರು. ಬಳಿಕ ಮೃತ ಸಂತೋಷ್ ಕುಟುಂಬಕ್ಕೆ ಡಿ.ಕೆ.ಶಿವಕುಮಾರ್ ಕೆಪಿಸಿಸಿ ವತಿಯಿಂದ 11 ಲಕ್ಷ ರೂ. ಚೆಕ್ ವಿತರಣೆ ಮಾಡಿದರು. ಇದೇ ವೇಳೆ ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ 5 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿದರು. ಇದರ ಜೊತೆಗೆ ಕುಟುಂಬಸ್ಥರಿಗೆ ನ್ಯಾಯ ಕೊಡಿಸುವುದಾಗಿ ಡಿಕೆಶಿ ಭರವಸೆ ನೀಡಿದರು.

Leave a Reply

Your email address will not be published.

Back to top button