DharwadDistrictsKarnatakaLatestMain Post

ಗಾಂಧಿ ಕುಟುಂಬಕ್ಕೆ ಅಪಕೀರ್ತಿ ತರಲು ಮೋದಿ ಯತ್ನಿಸುತ್ತಿದ್ದಾರೆ: ಡಿಕೆಶಿ

Advertisements

ಹುಬ್ಬಳ್ಳಿ: ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದಂತಹ ಗಾಂಧಿ ಕುಟುಂಬಕ್ಕೆ ಪ್ರಧಾನಿ ಮೋದಿ ಅಪಕೀರ್ತಿ ತರಲು ಯತ್ನಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹರಿಹಾಯ್ದಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ-ಧಾರವಾಡ ಮುಖ್ಯಮಂತ್ರಿಯವರ ತವರು ಜಿಲ್ಲೆಯಾಗಿದೆ. ಜಗದೀಶ್ ಶೆಟ್ಟರ್, ಪ್ರಹ್ಲಾದ ಜೋಶಿಯ ನೆಲ ಇದು. ಇಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಅದಕ್ಕೆ ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿರುವ ಜನರೇ ಸಾಕ್ಷಿ. ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಮಾನಸಿಕ ಕಿರುಕುಳ ನೀಡುವ ಉದ್ದೇಶದಿಂದ ಇಡಿ ವಿಚಾರಣೆ ಮಾಡಲಾಗುತ್ತಿದೆ. ಗಾಂಧಿ ಕುಟುಂಬ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದೆ. ಇಂತಹ ಕುಟುಂಬಕ್ಕೆ ಪ್ರಧಾನಿ ಮೋದಿ ಅಪಕೀರ್ತಿ ತರಲು ಯತ್ನಿಸುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ ಅವರದೇ ಪಕ್ಷದಲ್ಲಿ 40% ಕಮಿಷನ್ ಆರೋಪವಿದೆ. ಇದನ್ನು ಮೊದಲು ತನಿಖೆ ಮಾಡಲಿ. ಅದನ್ನು ಬಿಟ್ಟು ಸೇಡಿನ ರಾಜಕಾರಣ ಮಾಡುವುದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.  ಇದನ್ನೂ ಓದಿ: ಆಸ್ಪತ್ರೆಯ ಖಾಸಗಿ ವಾರ್ಡ್ ಕೊಠಡಿಗಳ ಮೇಲೆ GST ಸುಂಕ – ರೋಗಿಗಳಿಗೆ ಶಾಕ್ ಕೊಟ್ಟ AIIMS

ಎನೀ ಟೈಮ್, ಎನೀ ವೇರ್ ಭ್ರಷ್ಟಾಚಾರ ಕುರಿತಂತೆ ಚರ್ಚೆ ನಡೆಸಲು ನಾನು ಸಿದ್ಧನಾಗಿದ್ದೇನೆ. ಬಹಿರಂಗ ವೇದಿಕೆಯನ್ನು ಯಾರೇ ಸಜ್ಜುಗೊಳಿಸಿದರೂ ನಾನು ರೆಡಿಯಾಗಿದ್ದೇನೆ. ಆದರೆ ನನ್ನ ಜೊತೆಗೆ ಚರ್ಚೆಗೆ ಸರಿಸಮಾನರು ಬೇಕು. ಸಚಿವ ಸುಧಾಕರ್ ಅಥವಾ ಮತ್ತೊಬ್ಬ ನನಗೆ ಏನೂ ಅಲ್ಲ. ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಬಹಿರಂಗ ಚರ್ಚೆ ಬಂದರೆ ನಾನು ಸಿದ್ದ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪುತ್ರನಿಗಾಗಿ ಕ್ಷೇತ್ರ ಬಿಟ್ಟುಕೊಟ್ಟ ಬಿಎಸ್‌ವೈ: ಶಿಕಾರಿಪುರದಿಂದಲೇ ವಿಜಯೇಂದ್ರ ಸ್ಪರ್ಧೆ

Live Tv

Leave a Reply

Your email address will not be published.

Back to top button