ಬೆಂಗಳೂರು: ಮೆಂಟಲ್ ಹಾಸ್ಪಿಟಲ್ ಕ್ಯಾಂಡಿಡೇಟ್ ಬಗ್ಗೆ ನಾನು ಮಾತನಾಡಲು ಹೋಗಲ್ಲ. ಅವರ ಪಾರ್ಟಿಯಲ್ಲಿ ಏನೇನು ಇದೆಯೋ ಗೊತ್ತಿಲ್ಲ ಎಂದು ರಮೇಶ್ ಜಾಕಿಹೊಳಿಗೆ (Ramesh Jarkiholi) ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ತಿರುಗೇಟು ನೀಡಿದರು.
ನಮ್ಮ ಕೆಲವು ಮಂತ್ರಿಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೆದರಿಸುತ್ತಿದ್ದಾರೆ. ಬಾಂಬೆಯಿಂದ ಬಂದವರಿಗೆ ಸಿಡಿ ಬಿಡುತ್ತೇನೆ ನೋಡು ಬಾ ಎಂದು ಬೆದರಿಕೆ ಹಾಕುತ್ತಿದ್ದಾರೆ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆಗೆ ತಿರುಗೇಟು ನೀಡಿದ ಅವರು, ನಾನು ನಿಮಾನ್ಸ್ ಅಭ್ಯರ್ಥಿಗಳ ಬಗ್ಗೆ ಮಾತನಾಡುವುದಕ್ಕೆ ಹೋಗಲ್ಲ. ಡಿಕೆಶಿ ಟೋಲ್ ಅಲ್ಲಾ ಮೊದಲು ಬೆಂಗಳೂರು- ಮೈಸೂರು ರೋಡ್‍ನ ಟೋಲ್ ವ್ಯವಸ್ಥೆ ಮೊದಲು ಸರಿಪಡಿಸಲಿ ಎಂದು ಕಿಡಿಕಾರಿದರು. ಇದನ್ನೂ ಓದಿ: ಸುಳ್ಳು ಪ್ರಚಾರ ಮಾಡಿ ಅಧಿಕಾರಕ್ಕೆ ಬರುವುದಕ್ಕಿಂತ ವಿಪಕ್ಷದಲ್ಲಿ ಇರೋದೆ ಒಳ್ಳೆಯದು: ಜಾರಕಿಹೊಳಿ
ಧ್ರುವನಾರಾಯಣ್ (Dhruva Narayan) ಪುತ್ರನಿಗೆ ಟಿಕೆಟ್ ನೀಡುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಧ್ರುವನಾರಾಯಣ್ ನಮ್ಮ ಆಸ್ತಿ. ಅವರ ಬಗ್ಗೆ ಎಐಸಿಸಿ ಅಧ್ಯಕ್ಷರಿಗೆ ಚೆನ್ನಾಗಿ ಗೊತ್ತಿದೆ. ಅವರ ಸಾವಿಗೆ ನ್ಯಾಯ ಒದಗಿಸುವ ಕೆಲಸ ನಾವು ಮಾಡೇ ಮಾಡುತ್ತೇವೆ ಎಂದರು. ಇದನ್ನೂ ಓದಿ: ನೂರು ಸಿಡಿ ಬರಲಿ, ನಾನು ಗಟ್ಟಿ ಇದ್ದೇನೆ: ಡಿಕೆಶಿಗೆ ಜಾರಕಿಹೊಳಿ ಟಾಂಗ್