ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಚುನಾವಣಾ ಭಾಷಣಗಳಲ್ಲಿ ಮಂಗಳಸೂತ್ರವನ್ನು ಕಿತ್ತುಕೊಂಡರು ಎಂದು ಮಾತನಾಡುತ್ತಿದ್ದಾರೆ. ಮಂಗಳಸೂತ್ರವನ್ನು ಯಾರು ಕಿತ್ತುಕೊಂಡರು ಗೊತ್ತಿಲ್ಲ. ಆದರೆ ಪ್ರಧಾನಿ ಮೋದಿಯವರು ಇಂತಹ ಆಕ್ಷೇಪಾರ್ಹ ಹೇಳಿಕೆ ನೀಡಬಾರದು ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.
ಎಐಸಿಸಿ ಮಾಜಿ ಅಧ್ಯಕ್ಷ, ಸಂಸದ ರಾಹುಲ್ ಗಾಂಧಿ (Rahul Gandhi) ಸ್ಪರ್ಧಿಸಿರುವ ಉತ್ತರ ಪ್ರದೇಶದ ರಾಯ್ ಬರೇಲಿ ಕ್ಷೇತ್ರದಲ್ಲಿ ಪ್ರಚಾರ ಆರಂಭಿಸಿರುವ ಅವರು, ಬುಧವಾರ ಪ್ರಿಯಾಂಕಗಾಂಧಿ ಜೊತೆಗೆ ಚುನಾವಣಾ ಪ್ರಚಾರ ನಡೆಸಿದ್ದಾರೆ. ಪ್ರಚಾರದ ಬಳಿಕ ಇಂದು ಲಕ್ನೋದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಇದನ್ನೂ ಓದಿ: ಅಮಿತ್ ಶಾ ಪ್ರಧಾನಿ ಮಾಡಲು ಮೋದಿ ಮತ ಕೇಳುತ್ತಿದ್ದಾರೆ: ಕೇಜ್ರಿವಾಲ್
Advertisement
Advertisement
ಕಳೆದ ಚುನಾವಣೆಯಲ್ಲಿ ಕೇಂದ್ರ ಸರ್ಕಾರದಿಂದ ರೈತರ ಆದಾಯ ದ್ವಿಗುಣ ಮಾಡುವ ಭರವಸೆ ನೀಡಿದ್ದರು. ಆದರೆ ಆದಾಯ ಎಲ್ಲಿ ದ್ವಿಗುಣವಾಗಿದೆ ಎಂದು ನಾನು ಕೇಳಲು ಬಯಸುತ್ತೇನೆ. ನಾವು ನಮ್ಮ ಸರ್ಕಾರದ ಅವಧಿಯಲ್ಲಿ ರೈತರ ಸಾಲ ಮನ್ನಾ ಮಾಡಿದ್ದೇವೆ. 60 ಸಾವಿರ ಹುದ್ದೆಗಳಿಗೆ 6೦ ಲಕ್ಷ ಜನರು ಅರ್ಜಿ ಹಾಕಿದ್ದಾರೆ. ಇದು ನಿರುದ್ಯೋಗ ಸಮಸ್ಯೆಯ ತೀವ್ರತೆ ತೋರುತ್ತದೆ. ನಿಮ್ಮ ಭಾಗದ ಯುವಕರು ದೇಶದ ಬೇರೆ ಬೇರೆ ಭಾಗಕ್ಕೆ ಉದ್ಯೋಗ ಅರಸಿ ಹೊರಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
Advertisement
ಯಾವುದೇ ಕಾರಣಕ್ಕೂ ಸಂವಿಧಾನ ಬದಲಿಸುವುದಿಲ್ಲ ಎಂದು ಮೋದಿಯವರು ಹೇಳಿದ್ದಾರೆ. ನಾನು ಅದನ್ನು ಸ್ವಾಗತಿಸುತ್ತೇನೆ. ಆದರೆ ಸಂಸದರನ್ನು ಅವರ ಸ್ಥಾನದಿಂದ ಏಕೆ ಅನರ್ಹಗೊಳಿಸಲಾಗುತ್ತಿದೆ? ಇದು ಪ್ರಜಾಪ್ರಭುತ್ವ ವಿರೋಧಿ ನಡೆ ಅಲ್ಲವೇ ಎಂದು ಪ್ರಧಾನಿ ಮೋದಿ ಅವರನ್ನು ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.