ಬೆಂಗಳೂರು: ಜಲಸಂಪನ್ಮೂಲ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಸಾಕ್ಷಾತ್ ಶ್ರೀ ಕೃಷ್ಣನಂತಿದ್ದಾರೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಜಯಾಮಾಲ ಹೇಳಿದ್ದಾರೆ.
ರಾಜ್ಯ ಸರ್ಕಾರ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾವುದೇ ಸಂಧಾನ ಬಂದರೂ, ಹಗಲು ರಾತ್ರಿ ಎನ್ನದೇ ಡಿ.ಕೆ.ಶಿವಕುಮಾರ್ ಸಿದ್ಧರಿರುತ್ತಾರೆ. ಅಲ್ಲದೇ ಖುದ್ದು ಮಧ್ಯಸ್ಥಿಕೆ ವಹಿಸುವ ಮೂಲಕ ಕಾರ್ಯ ನಿರ್ವಹಿಸುತ್ತಾರೆ. ಅಚ್ಚುಕಟ್ಟಾಗಿ ಯಾವುದೇ ಕೆಲಸವನ್ನು ಶಿಸ್ತಿನಿಂದ ನಿರ್ವಹಿಸುತ್ತಾರೆ. ಹೀಗಾಗಿ ಅವರು ಸಾಕ್ಷಾತ್ ಶ್ರೀ ಕೃಷ್ಣ ಎಂದು ವೇದಿಕೆ ಮೇಲೆ ಡಿಕೆಶಿಯವರನ್ನು ಹಾಡಿ ಹೊಗಳಿದ್ದಾರೆ.
Advertisement
Advertisement
ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಗರದ ರವೀಂದ್ರ ಕಲಾ ಕ್ಷೇತ್ರದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸಮಾರಂಭ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 63 ಸಾಧಕರಿಗೆ ರಾಜ್ಯ ಸರ್ಕಾರದ ವತಿಯಿಂದ ಗೌರವಿಸುತ್ತಿದೆ. ಸಾಧಕರಿಗೆ 24 ಗ್ರಾಂ ಚಿನ್ನದ ಪದಕ ಹಾಗೂ 1 ಲಕ್ಷ ರೂಪಾಯಿ ನಗದು ಬಹುಮಾನವನ್ನು ನೀಡಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಗೌರವಿಸಿದ್ದಾರೆ.
Advertisement
ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ, ಮಹಾಪೌರರಾದ ಗಂಗಾಬಿಕೆ ಮಲ್ಲಿಕಾರ್ಜುನ್, ಸಚಿವರಾದ ಡಿಕೆ ಶಿವಕುಮಾರ್, ಜಮೀರ್ ಅಹಮ್ಮದ್ ಹಾಗೂ ವಿಧಾನಪರಿಷತ್ ಸದಸ್ಯರು ಶರವಣ ಸೇರಿದಂತೆ ಗಣ್ಯಾತಿಗಣ್ಯರು ಪಾಲ್ಗೊಂಡಿದ್ದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv