ಬೆಂಗಳೂರು: ಜಾರಿ ನಿರ್ದೇಶನಾಲಯ ಬಂಧನ ಭೀತಿಯಿಂದ ತಪ್ಪಿಸಿಕೊಳ್ಳಲು ಸಚಿವ ಡಿ.ಕೆ.ಶಿವಕುಮಾರ್ ಮಾಸ್ಟರ್ ಪ್ಲಾನ್ ಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
ಒಂದು ವೇಳೆ ಇಡಿ ವಿಚಾರಣೆಗೆ ಕರೆದ್ರೆ, ಯಾವ ರೀತಿ ಉತ್ತರ ನೀಡಬೇಕು ಅನ್ನೋದರ ಬಗ್ಗೆ ಹಿರಿಯ ವಕೀಲರಿಂದ ಸಲಹೆ ಪಡೆದುಕೊಳ್ಳುತ್ತಿದ್ದಾರೆ. ಒಂದು ವೇಳೆ ಇಡಿ ಬಂಧಿಸಲು ಮುಂದಾದ್ರೆ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸುವ ಸಾಧ್ಯತೆಗಳಿವೆ. ಇಡಿಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಹಿರಿಯ ವಕೀಲರಿಗೆ ಯಾವಾಗ ಏನು ಬೇಕಾದರೂ ಆಗುವ ಸಾಧ್ಯತೆಗಳಿವೆ. ಕಾನೂನಾತ್ಮಕವಾಗಿ ಎಲ್ಲದಕ್ಕೂ ಸಿದ್ಧರಾಗಿರಿ ಎಂದು ಆಪ್ತ ವಕೀಲರಿಗೆ ಡಿ.ಕೆ.ಶಿವಕುಮಾರ್ ಸಂದೇಶ ರವಾನಿದ್ದಾರೆ ಎಂದು ಮೂಲಗಳು ತಿಳಿಸಿವೆ.
Advertisement
ಬುಧವಾರ ಡಿ.ಕೆ.ಶಿವಕುಮಾರ್ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸುವ ಸಾಧ್ಯತೆಗಳಿವೆ. ಈ ಸಂಬಂಧ ಘಟಾನುಘಟಿ ವಕೀಲರೊಂದಿಗೆ ಸಚಿವರು ನಿರಂತರ ಸಂಪರ್ಕದಲ್ಲಿದ್ದಾರೆ ಎನ್ನಲಾಗುತ್ತಿದೆ. ಇಂದು ಮಧ್ಯಾಹ್ನ ಕನಕಪುರದಲ್ಲಿ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಸಚಿವರು ಭಾಗಿಯಾಗಬೇಕಿತ್ತು. ಆದ್ರೆ ಸಚಿವರು ಕಾರ್ಯಕ್ರಮಕ್ಕೆ ಡಿ.ಕೆ.ಸಹೋದರರು ಗೈರಾಗಿದ್ದಾರೆ.
Advertisement
Advertisement
ಡಿಕೆಶಿಗೆ ಫುಡ್ ಪಾಯ್ಸನ್:
ಕಲಬುರಗಿಯಲ್ಲಿ ಪ್ರವಾಸ ಮುಗಿಸಿದ ಬಳಿಕ ಡಿ.ಕೆ.ಶಿವಕುಮಾರ್ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಡಿದ್ದು, ಬೆಂಗಳೂರಿಗೆ ಬಂದ ಬಳಿಕ ತೀವ್ರವಾಗಿ ವಾಂತಿ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕನಕಪುರ ಕಾರ್ಯಕ್ರಮ ರದ್ದುಗೊಳಿಸಿ, ಕಗ್ಗಲೀಪುರ ಪ್ರಾಥಾಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಸದ್ಯ ಸಚಿವರಿಗೆ ಕನಕಪುರದ ಸ್ವಗೃಹದಲ್ಲಿ ಐವರು ವೈದ್ಯಾಧಿಕಾರಿಗಳಿಂದ ತಪಾಸಣೆ ನಡೆಸಲಾಗುತ್ತಿದೆ. ಹೈದರಾಬಾದ್ ನಿಂದ ಹೊರಡಿದ್ದ ವಿಮಾನದಲ್ಲಿ ಸ್ಯಾಂಡ್ ವಿಚ್ ತಿಂದ ಪರಿಣಾಮ ಸಚಿವರ ಆರೋಗ್ಯದಲ್ಲಿ ಏರುಪೇರಾಗಿದೆ. ನಿತ್ರಾಣಗೊಂಡಿರುವ ಶಿವಕುಮಾರ್ ಅವರಿಗೆ ವೈದ್ಯರು ಗ್ಲುಕೋಸ್ ಹಾಕಿ, ಚಿಕಿತ್ಸೆ ನೀಡುತ್ತಿದ್ದಾರೆ ಎನ್ನುವ ವಿಚಾರ ತಿಳಿದು ಬಂದಿದೆ.
Advertisement
ಏನಿದು ಪ್ರಕರಣ?
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‍ಎ) ಅಡಿಯಲ್ಲಿ ಜಾರಿ ನಿರ್ದೇಶನಾಲಯ ಡಿ.ಕೆ.ಶಿವಕುಮಾರ್ ವಿರುದ್ಧ ಕೇಸ್ ದಾಖಲಿಸಿಕೊಂಡಿದೆ. ಸದ್ಯ ಡಿಕೆಶಿಗೆ ಬಂಧನದ ಭೀತಿ ಎದುರಾಗಿದ್ದು, ಹಿರಿಯ ವಕೀಲರ ಜೊತೆ ಕಾನೂನು ಪ್ರಕ್ರಿಯೆಯ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಶಿವಕುಮಾರ ಜೊತೆಗೆ ಸಚಿನ್ ನಾರಾಯಣ್, ಶರ್ಮ ಟ್ರಾವೆಲ್ಸ್‍ನ ಸುನೀಲ್ ಕುಮಾರ್ ಶರ್ಮ, ದೆಹಲಿಯ ಕರ್ನಾಟಕ ಭವನದ ಸಿಬ್ಬಂದಿ ಆಂಜನೇಯ ಹನುಮಂತಯ್ಯ ಮತ್ತು ರಾಜ್ಯ ಸರಕಾರದ ನಿವೃತ್ತ ಸಿಬ್ಬಂದಿ ರಾಜೇಂದ್ರ ಅವರನ್ನು ಆರೋಪಿಯನ್ನಾಗಿಸಿ ಕೇಸ್ ದಾಖಲಾಗಿದೆ.
ದೆಹಲಿ ನಿವಾಸದಲ್ಲಿ ಪತ್ತೆಯಾದ 8.5 ಕೋಟಿ ರೂ. ಸಿಕ್ಕ ಹಣದ ಸಂಬಂಧ ಆದಾಯ ತೆರಿಗೆ ಇಲಾಖೆ ಆರ್ಥಿಕ ಅಪರಾಧ ನ್ಯಾಯಾಲಯಕ್ಕೆ ದೂರು ನೀಡಿತ್ತು. ಆದಾಯ ತೆರಿಗೆ ಇಲಾಖೆಯ ದಾಳಿ ವೇಳೆ ಸಿಕ್ಕ ಮಾಹಿತಿ ಆಧರಿಸಿ ನೀಡಿರುವ ದೂರಿನಲ್ಲಿ ಹವಾಲ ಹಣದ ವಿವರವನ್ನು ಉಲ್ಲೇಖಿಸಿತ್ತು. ಇಲಾಖೆಗೆ ಸುಳ್ಳು ಮಾಹಿತಿ ನೀಡಿದ ಆರೋಪದಡಿ ಐಟಿ ಇಲಾಖೆ ಹಿರಿಯ ಅಧಿಕಾರಿಗಳು ಈ ಹಿಂದೆ ಆರ್ಥಿಕ ಅಪರಾಧ ನ್ಯಾಯಾಲಯಕ್ಕೆ ದೂರು ನೀಡಿದ್ದರು. ಆದಾಯ ತೆರಿಗೆ ಇಲಾಖೆಯ ದಾಳಿ ವೇಳೆ ಸಿಕ್ಕ ಮಾಹಿತಿ ಆಧರಿಸಿ ನೀಡಿರುವ ದೂರಿನಲ್ಲಿ ಹವಾಲ ಹಣದ ವಿವರವನ್ನು ಉಲ್ಲೇಖಿಸಿದ್ದಾರೆ. ಈ ದೂರಿನಲ್ಲಿ ಹವಾಲ ಹಣದ ಮೂಲಕ ಕೋಟಿ ಕೋಟಿ ಹಣವನ್ನು ಕಾಂಗ್ರೆಸ್ ಹೈಕಮಾಂಡ್ ಡಿಕೆ ಶಿವಕುಮಾರ್ ಕಳುಹಿಸಿಕೊಟ್ಟಿದ್ದಾರೆ ಎಂಬ ಆರೋಪಗಳನ್ನು ಮಾಡಲಾಗಿದೆ.
ಐಟಿ ದಾಳಿಯಾದ ಬಳಿಕ ಪತ್ತೆಯಾದ ಡೈರಿಯಲ್ಲಿರುವ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಡಿಕೆ ಶಿವಕುಮಾರ್ ಮತ್ತು ಆರೋಪಿಗಳನ್ನು ವಿಚಾರಣೆ ನಡೆಸಿದ್ದರು. ಕೆಜಿ ಎಂಬ ಕೋಡ್ ವರ್ಡ್ ಬಳಸಿ ನಗದು ವ್ಯವಹಾರ ನಡೆಸುತ್ತಿದ್ದಾರೆ ಎನ್ನುವ ಅನುಮಾನದ ಮೇರೆಗೆ ಅಧಿಕಾರಿಗಳು ಆರೋಪಿಗಳಿಗೆ ಪ್ರಶ್ನೆ ಕೇಳಿದ್ದಾರೆ. ಆದರೆ ಈ ಪ್ರಶ್ನೆಗಳಿಗೆ ಆರೋಪಿಗಳಿಂದ ಸರಿಯಾದ ಉತ್ತರ ಸಿಕ್ಕಿರಲಿಲ್ಲ ಎನ್ನುವ ಮಾಹಿತಿ ಮೂಲಗಳಿಂದ ಸಿಕ್ಕಿತ್ತು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv