Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಧಾನಿ ಮೋದಿಯನ್ನು ಭೇಟಿಯಾದ ಡಿಕೆಶಿ – ಬೆಂಗಳೂರು, ನೀರಾವರಿ ಅಭಿವೃದ್ಧಿಗೆ ಹೆಚ್ಚಿನ ಅನುದಾನಕ್ಕೆ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪ್ರಧಾನಿ ಮೋದಿಯನ್ನು ಭೇಟಿಯಾದ ಡಿಕೆಶಿ – ಬೆಂಗಳೂರು, ನೀರಾವರಿ ಅಭಿವೃದ್ಧಿಗೆ ಹೆಚ್ಚಿನ ಅನುದಾನಕ್ಕೆ ಮನವಿ

Latest

ಪ್ರಧಾನಿ ಮೋದಿಯನ್ನು ಭೇಟಿಯಾದ ಡಿಕೆಶಿ – ಬೆಂಗಳೂರು, ನೀರಾವರಿ ಅಭಿವೃದ್ಧಿಗೆ ಹೆಚ್ಚಿನ ಅನುದಾನಕ್ಕೆ ಮನವಿ

Public TV
Last updated: July 31, 2024 5:04 pm
Public TV
Share
3 Min Read
DK Shivakumar Narendra Modi
SHARE

ನವದೆಹಲಿ: ಗಿಫ್ಟ್ ಸಿಟಿ (Gift City) ಮಾದರಿಯಲ್ಲಿ ಬೆಂಗಳೂರನ್ನು (Bengaluru) ಪರಿಗಣಿಸಬೇಕು ಎಂದು ಈ ಹಿಂದೆ ಮನವಿ ಮಾಡಲಾಗಿತ್ತು. ಇದು ಸಾಧ್ಯವಾಗದ ಕಾರಣಕ್ಕೆ ಸುರಂಗ ರಸ್ತೆ, ಸಿಗ್ನಲ್ ಮುಕ್ತ ರಸ್ತೆ, ಪ್ರಮುಖ ರಸ್ತೆಗಳು ಮತ್ತು ಮಳೆ ನೀರುಗಾಲುವೆಗಳ ಅಭಿವೃದ್ಧಿ ಹಾಗೂ ನೀರಾವರಿಗೆ ಹೆಚ್ಚಿನ ಅನುದಾನ ನೀಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.

ಬುಧವಾರ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಭೇಟಿಯ ಬಳಿಕ ಮಾಧ್ಯಮಗಳನ್ನು ಉದ್ದೇಶಿಸಿ ದೆಹಲಿಯ ಕರ್ನಾಟಕ ಭವನದಲ್ಲಿ ಮಾತನಾಡಿದ ಅವರು, ಬೆಂಗಳೂರು ಅತಿ ಹೆಚ್ಚು ತೆರಿಗೆ ನೀಡುವ ನಗರವಾಗಿದೆ. ಈ ನಗರಕ್ಕೆ ಬಜೆಟ್‌ನಲ್ಲಿ ಏನೂ ದೊರೆತಿಲ್ಲ. ಮಹಾರಾಷ್ಟ್ರದಂತೆ ನಮ್ಮನ್ನು ಪರಿಗಣಿಸಬೇಕು. ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಜೆಎನ್ ನರ್ಮ್ ಯೋಜನೆ ಅಡಿ ಎಲೆಕ್ಟ್ರಾನಿಕ್ ಸಿಟಿ, ಹೆಬ್ಬಾಳ, ನೆಲಮಂಗಲ ಮೇಲ್ಸೇತುವೆ ನಿರ್ಮಾಣಕ್ಕೆ ಅನುದಾನ ನೀಡಲಾಗಿತ್ತು ಎಂದರು. ಇದನ್ನೂ ಓದಿ: ದೇವೇಗೌಡರ ಕುಟುಂಬಕ್ಕೆ ವಿಷ ಇಟ್ಟವನ ಜತೆ ವೇದಿಕೆ ಹಂಚಿಕೊಳ್ಳಲು ಸಾಧ್ಯವೇ?: ಕುಮಾರಸ್ವಾಮಿ ಕಿಡಿ

DK Shivakumar Narendra Modi 1

ದೇಶಕ್ಕೆ ಒಂದೇ ಗಿಫ್ಟ್ ಸಿಟಿ ಮಾಡಲು ಸಾಧ್ಯ. ಎರಡು ಪ್ರದೇಶಗಳನ್ನು ಮಾಡಲು ಸಾಧ್ಯವಿಲ್ಲ ಎಂದು ಪ್ರಧಾನಿ ತಿಳಿಸಿದರು. ರಾಜ್ಯ ರಾಜಧಾನಿಯಲ್ಲಿ ನೂತನವಾಗಿ ಒಂದಷ್ಟು ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಸರ್ಕಾರ ಯೋಜನೆ ರೂಪಿಸುತ್ತಿದೆ. ಆದ ಕಾರಣ ಈ ಯೋಜನೆಗಳಿಗೂ ಕೇಂದ್ರ ಸರ್ಕಾರ ನೆರವಾಗಬೇಕು ಎಂದು ಕೇಳಲಾಗಿದೆ. ಬೆಂಗಳೂರಿಗೆ ಹೊರಗಿನಿಂದ ಹೆಚ್ಚಿನ ಜನ ಬರುತ್ತಿದ್ದಾರೆ. ಜೊತೆಗೆ ನಗರದ ಮೂಲಸೌರ್ಕಯಗಳ ಅಭಿವೃದ್ಧಿಗೆ ಹೆಚ್ಚಿನ ಗಮನ ಕೊಡಬೇಕಿದೆ. ಇದಕ್ಕೆ ಅನುದಾನದ ಅವಶ್ಯಕತೆಯಿದೆ ಎಂದು ಪ್ರಧಾನಿಗಳಿಗೆ ತಿಳಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: 2024ರ ಕೇಂದ್ರ ಬಜೆಟ್‌ನಲ್ಲಿ ಯುವಜನತೆಗಾಗಿ ಹೊಸ ಇಂಟರ್ನ್‌ಶಿಪ್‌ ಯೋಜನೆ; ಏನಿದು ಸ್ಕೀಮ್?‌

ಭದ್ರಾ ಮೇಲ್ದಂಡೆ ಯೋಜನೆ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪ:
ಕಳೆದ ಬಜೆಟ್ ವೇಳೆ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಅನುದಾನ ಘೋಷಣೆ ಮಾಡಲಾಗಿತ್ತು. ಈ ಬಾರಿಯ ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರ ಪ್ರಸ್ತಾಪಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಮಳೆ ವಿಚಾರ, ತಮಿಳುನಾಡಿಗೆ 40 ಟಿಎಂಸಿ ನೀರು ಬಿಡಬೇಕಿತ್ತು. 84 ಟಿಎಂಸಿಗಿಂತ ಹೆಚ್ಚು ನೀರು ಬಿಡಲಾಗಿದೆ ಎಂದು ತಿಳಿಸಿದೆವು. ಒಂದು ಸಭೆ ನಡೆಸಿ ಮಹದಾಯಿ ಯೋಜನೆ ಸಮಸ್ಯೆ ಬಗೆಹರಿಸಬಹುದು ಎಂದು ಅವರ ಗಮನಕ್ಕೆ ತಂದೆವು. ಮೇಕೆದಾಟು ವಿಚಾರವಾಗಿ ನೀವುಗಳೇ ಸಮಸ್ಯೆಗಳನ್ನು ಬಗೆಹರಿಸಿಕೊಂಡರೆ ಉತ್ತಮ ಎಂದು ಸಲಹೆ ನೀಡಿದರು. ಈ ವಿಚಾರದಲ್ಲಿ ಕೇಂದ್ರ ಮಧ್ಯಸ್ತಿಕೆ ವಹಿಸಬೇಕು ಎಂದು ಮನವಿ ಸಲ್ಲಿಸಲಾಗಿದೆ ಎಂದರು. ಇದನ್ನೂ ಓದಿ: Wayanad Landslide |ಮೃತಪಟ್ಟ ಕನ್ನಡಿಗರಿಗೆ ತಲಾ 5 ಲಕ್ಷ ರೂ. ಪರಿಹಾರ : ಸಿಎಂ ಘೋಷಣೆ

ಈ ಬಾರಿಯ ಬಜೆಟ್‌ನಲ್ಲಿ ಕರ್ನಾಟಕದ ಪಾಲಿಗೆ ಅನುದಾನವೇ ಬಂದಿಲ್ಲ. ಅದರಲ್ಲೂ ನೀರಾವರಿಗೆ ಕೊಂಚವೂ ಅನುದಾನ ಬಂದಿಲ್ಲದ ಕಾರಣ ಇವುಗಳನ್ನು ಪ್ರಧಾನಿಗಳ ಗಮನಕ್ಕೆ ತರುವ ಸಲುವಾಗಿ ಭೇಟಿ ಮಾಡಲಾಯಿತು. ಉತ್ತಮವಾಗಿ ಮಳೆ ಬಂದು ತಮಿಳುನಾಡಿಗೆ ಹೆಚ್ಚುವರಿ ನೀರು ಹರಿಯುತ್ತಿರುವ ವಿಚಾರ ಕೇಂದ್ರ ಜಲಶಕ್ತಿ ಸಚಿವರ ಗಮನಕ್ಕೆ ಬಂದಿದೆ. ನಾವು ಸಹ ವಾಸ್ತವಾಂಶವನ್ನು ಸಚಿವರಿಗೆ ಅರ್ಥ ಮಾಡಿಸುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: Wayanad Landslide | ಒಂದೇ ಕುಟುಂಬದ 9 ಜನ ಕನ್ನಡಿಗರು ನಾಪತ್ತೆ – ಕಣ್ಣೀರಿಟ್ಟ ಸಂಬಂಧಿಕ

ತಮಿಳುನಾಡಿಗೆ ಇತಿಹಾಸದಲ್ಲೇ ಹೆಚ್ಚಿನ ನೀರು ಬಿಡುಗಡೆ:
2 ಲಕ್ಷದ 25 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಮಂಗಳವಾರದ ತನಕ ಹರಿಸಲಾಗಿದೆ. ಮೊದಲ ಬಾರಿಗೆ ಇಷ್ಟು ಪ್ರಮಾಣದ ನೀರನ್ನು ಹರಿಸಲಾಗಿದೆ. ಮಳೆ ಸ್ವಲ್ಪ ತಗ್ಗಿದ ಕಾರಣಕ್ಕೆ ಒಂದು ಮುಕ್ಕಾಲು ಲಕ್ಷ ಕ್ಯೂಸೆಕ್ ನೀರನ್ನು ಹರಿಸುತ್ತಿದ್ದೇವೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕೇರಳದಲ್ಲೂ ಉತ್ತಮ ಮಳೆಯಾಗುತ್ತಿರುವ ಕಾರಣಕ್ಕೆ ಕಬಿನಿ ಹಾಗೂ ಕೆಆರ್‌ಎಸ್ ಅಣೆಕಟ್ಟಿನಲ್ಲಿ ನೀರನ್ನು ಸಂಗ್ರಹ ಮಾಡದೆ ಬಿಡಲಾಗುತ್ತಿದೆ. ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರಬೇಕು. ನದಿ ಹತ್ತಿರ ಹೋಗಬಾರದು. ಎಚ್ಚರಿಕೆಯಿಂದ ಇರಬೇಕು ಎಂದು ಜನರಲ್ಲಿ ಮನವಿ ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: Wayanad Landslide | ಜನರ ರಕ್ಷಣೆಗೆ ಕೇಂದ್ರ ಸರ್ಕಾರದಿಂದ ಸಂಪೂರ್ಣ ಸಹಕಾರ: ಪ್ರಹ್ಲಾದ್ ಜೋಶಿ

ಮುಡಾ ಪಾದಯಾತ್ರೆ; ನಾವು ತಯಾರಿ ಮಾಡಿಕೊಂಡಿದ್ದೇವೆ:
ಮುಡಾ ಅಕ್ರಮ ವಿಚಾರವಾಗಿ ಬಿಜೆಪಿ ಪಾದಯಾತ್ರೆಗೆ ಜೆಡಿಎಸ್ ಬೆಂಬಲ ನೀಡುವುದಿಲ್ಲ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಈ ವಿಚಾರ ನನಗೆ ತಿಳಿದಿಲ್ಲ. ಇದಕ್ಕೆ ನಾವು ಏನು ಸಿದ್ಧತೆ ಮಾಡಿಕೊಳ್ಳಬೇಕೋ ಅದನ್ನು ಮಾಡಿಕೊಂಡಿದ್ದೇವೆ. ಈ ವಿಷಯದ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಮಾಡಿ ಮಾತನಾಡುತ್ತೇನೆ ಎಂದರು. ಇದನ್ನೂ ಓದಿ: ಕೆಲಸ ಸಿಕ್ಕಿದೆ, ಪಾರ್ಟಿ ಕೊಡಿಸ್ತೀನಿ ಬಾ ಅಂತ ಕರೆದು ಸಾಫ್ಟ್‌ವೇರ್ ಎಂಜಿನಿಯರ್‌ ಯುವತಿ ಮೇಲೆ ರೇಪ್‌!

TAGGED:bengalurubjpcongressDK Shivakumarnarendra modiNew Delhiಕಾಂಗ್ರೆಸ್ಡಿಕೆ ಶಿವಕುಮಾರ್ನರೇಂದ್ರ ಮೋದಿನವದೆಹಲಿಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

pawan kalyan
ಮೋದಿ ಬಳಿಕ ಉಡುಪಿ ಶ್ರೀಕೃಷ್ಣ ಮಠಕ್ಕೆ ಇಂದು ಪವನ್ ಕಲ್ಯಾಣ್ ಭೇಟಿ – ಗೀತೋತ್ಸವ ಸಮರೋಪದಲ್ಲಿ ಭಾಗಿ
Cinema Districts Karnataka Latest Top Stories Udupi
DARSHAN PRADOSH
ದರ್ಶನ್‌ಗೆ ಜೈಲಿನಲ್ಲಿದ್ದರೂ ತಪ್ಪದ ಸಂಕಷ್ಟ – ಅತ್ಯಾಪ್ತನ ಹೇಳಿಕೆಯೇ ಮುಳುವಾಯ್ತಾ?
Bengaluru City Cinema Crime Districts Karnataka Latest Main Post Sandalwood
Captains room locked Will Sudeep give Gilli a severe punishment
ಕ್ಯಾಪ್ಟನ್ ರೂಂಗೆ ಬೀಗ; ಗಿಲ್ಲಿಗೆ ಸುದೀಪ್ ನೀಡ್ತಾರಾ ಕಠಿಣ ಶಿಕ್ಷೆ?
Latest Sandalwood South cinema
time fix for the kiccha sudeep mark movie trailer
ಕಿಚ್ಚನ ಮಾರ್ಕ್ ಸಿನಿಮಾ ಟ್ರೈಲರ್‌ಗೆ ಟೈಮ್ ಫಿಕ್ಸ್
Cinema Latest Sandalwood South cinema Top Stories

You Might Also Like

car falls into lake after driver loses control in ripponpet
Crime

ಚಾಲಕನ ನಿಯಂತ್ರಣ ತಪ್ಪಿ ಕೆರೆಗುರುಳಿದ ಕಾರು – ಸ್ಥಳೀಯರ ಸಮಯಪ್ರಜ್ಞೆಯಿಂದ ಉಳಿದ ಮೂವರ ಜೀವ

Public TV
By Public TV
40 seconds ago
Goa Fire 2
Crime

ಅಗ್ನಿ ದುರಂತದಲ್ಲಿ 25 ಮಂದಿ ಬಲಿ – ಗೋವಾ ನೈಟ್‌ಕ್ಲಬ್‌ ಮ್ಯಾನೇಜರ್‌ ಅರೆಸ್ಟ್‌, ಮಾಲೀಕನ ವಿರುದ್ಧ ವಾರಂಟ್‌

Public TV
By Public TV
16 minutes ago
congress workers murder case in sakarayapattana five arrested
Chikkamagaluru

ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಕೇಸ್‌ – ಐವರು ಅರೆಸ್ಟ್‌, ಮೂವರಿಗಾಗಿ ಶೋಧ

Public TV
By Public TV
36 minutes ago
RCB Team
Bengaluru City

RCB ಫ್ಯಾನ್ಸ್‌ಗೆ ಗುಡ್‌ನ್ಯೂಸ್ ಕೊಟ್ಟ ಡಿಕೆಶಿ – 2026ರ IPL ಬೆಂಗಳೂರಿನಲ್ಲೇ ಫಿಕ್ಸ್‌: ಖುದ್ದು ಡಿಸಿಎಂ ಘೋಷಣೆ

Public TV
By Public TV
39 minutes ago
Elephant
Chikkamagaluru

ಬಾಳೆಹೊನ್ನೂರಲ್ಲಿ ಕಾಡಾನೆ ದಾಳಿ – ಕಾರ್ಮಿಕನ ಸ್ಥಿತಿ ಗಂಭೀರ

Public TV
By Public TV
41 minutes ago
Dharwad Online Game Suicide
Crime

ಫೈನಾನ್ಸ್‌ನ 3 ಲಕ್ಷಕ್ಕೂ ಅಧಿಕ ಹಣ ಆನ್‌ಲೈನ್ ಗೇಮ್‌ಗೆ ಬಳಕೆ – ದುಡ್ಡು ವಾಪಸ್ ಕಟ್ಟಲಾಗದೇ ಯುವಕ ಆತ್ಮಹತ್ಯೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?