ಬೆಂಗಳೂರು: ಟ್ರಬಲ್ ಶೂಟರ್ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ತಮ್ಮ ರಾಜಕೀಯ ಗುರು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣರನ್ನ ಭೇಟಿ ಮಾಡಿದ್ದಾರೆ.
ಸದಾಶಿವನಗರದ ಎಸ್.ಎಂ.ಕೃಷ್ಣ ನಿವಾಸದಲ್ಲಿ ಭೇಟಿಯಾಗಿ ಅರ್ಧಗಂಟೆ ಕಾಲ ಚರ್ಚೆ ನಡೆಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಆಯ್ಕೆ ಬಹುತೇಕ ಖಚಿತವಾಗಿದೆ. ಕೆಪಿಸಿಸಿ ಪಟ್ಟಾಭಿಷೇಕ ಖಚಿತವಾಗುತ್ತಿದ್ದಂತೆ ರಾಜಕೀಯ ಗುರುವಿನ ಭೇಟಿ ಮಾಡಿರುವುದು ಸಾಕಷ್ಟು ಮಹತ್ವ ಪಡೆದುಕೊಂಡಿದೆ.
Advertisement
ಆದರೆ ಎಸ್.ಎಂ.ಕೆ ಭೇಟಿಯ ಬಗ್ಗೆ ಡಿಕೆಶಿ ಯಾವುದೇ ಗುಟ್ಟು ಬಿಟ್ಟು ಕೊಟ್ಟಿಲ್ಲ. ಅದು ವೈಯುಕ್ತಿಕ ಭೇಟಿ ಅಷ್ಟೆ ಎಂದಿದ್ದಾರೆ.