ನವದೆಹಲಿ: ಇಡಿ ಬಂಧನ ಭೀತಿಯಲ್ಲಿರುವ ಜಲ ಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಸುಪ್ರೀಂಕೋರ್ಟ್ ವಕೀಲರ ಮನೆ ಬಾಗಿಲು ತಟ್ಟಿದ್ದಾರೆ. ಎಫ್ ಐಆರ್ ದಾಖಲಿಸಲು ಇಡಿ ಈಗಾಗಲೇ ಸಿದ್ಧತೆ ನಡೆಸಿಕೊಂಡಿದ್ದು ಯಾವುದೇ ಸಮಯದಲ್ಲೀ ಡಿಕೆ ಶಿವಕುಮಾರ್ ಬಂಧನದ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.
ಈ ಹಿನ್ನೆಲೆ ಡಿ.ಕೆ ಶಿವಕುಮಾರ್ ನವದೆಹಲಿಗೆ ತೆರಳಿದ್ದು ಸುಪ್ರೀಂಕೋರ್ಟ್ ವಕೀಲರೊಂದಿಗೆ ಕಾನೂನು ಹೋರಾಟ ಬಗ್ಗೆ ಚರ್ಚೆ ನಡೆಸಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕರು ಮತ್ತು ವಕೀಲರು ಆದ ಅಭಿಷೇಕ ಮನುಸಿಂಘ್ವಿ ಮತ್ತು ಕಪಿಲ್ ಸಿಬಲ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಅಲ್ಲದೆ ಇಲ್ಲಿಯ ವರೆಗಿನ ಕಾನೂನು ಹೋರಾಟಗಳ ಬಗ್ಗೆ ಸಮಗ್ರ ಚರ್ಚೆ ನಡೆಸಿದ್ದು ಬೆಂಗಳೂರು ವಕೀಲರಲಿಂದಲೂ ಫೋನ್ ಮೂಲಕ ಅಗತ್ಯ ಮಾಹಿತಿ ಕೊಡಿಸಿದ್ದಾರೆ.. ಬಂಧನ ಭೀತಿ ಇರುವ ಹಿನ್ನೆಲೆ ಜಾಮೀನು ಪಡೆದುಕೊಳ್ಳುವ ಬಗ್ಗೆ ಚರ್ಚೆ ನಡೆಸಿದ್ದಾರೆ ಅಂತಾ ಪಬ್ಲಿಕ ಟಿವಿಗೆ ಮೂಲಗಳು ತಿಳಿಸಿವೆ.
Advertisement
Advertisement
ಇಂದು ದೆಹಲಿಯಲ್ಲಿ ಇರುವ ಡಿಕೆ ಶಿವಕುಮಾರ್ ಮತ್ತು ಸಿಎಂ ಕುಮಾರಸ್ವಾಮಿ ಜೊತೆ ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿಯಾಗಲಿದ್ದಾರೆ. ಕೊಡಗಿನಲ್ಲಿ ಅತಿವೃಷ್ಟಿ ಮಳೆಯಿಂದ ಸಾಕಷ್ಟು ಪ್ರಮಾಣದ ಹಾನಿಯಾಗಿದ್ದು ಹೆಚ್ಚಿನ ಪ್ರಮಾಣದಲ್ಲಿ ಕೇಂದ್ರದಿಂದ ಪರಿಹಾರ ನೀಡುವಂತೆ ನಿಯೋಗ ಮನವಿ ಮಾಡಲಿದ್ದಾರೆ. ಬಳಿಕ ಅಹ್ಮದ್ ಪಟೇಲ್ ಸೇರಿದಂತೆ ಕಾಂಗ್ರೆಸ್ ಹಿರಿಯ ನಾಯಕರನ್ನ ಭೇಟಿಯಾಗಿ ಮಾತುಕತೆ ನಡೆಸುವ ಸಾಧ್ಯತೆ ಇದೆ.
Advertisement
ನಾನು ಅಕ್ರಮ ಹಣ ವರ್ಗಾವಣೆ ಮಾಡಿಲ್ಲ. ನನಗೆ ಯಾವುದೇ ಇಲಾಖೆಯಿಂದ ನೋಟಿಸ್ ಬಂದಿಲ್ಲ. ವಿದೇಶಕ್ಕೂ ಯಾವುದೇ ಹಣ ವರ್ಗಾವಣೆ ಮಾಡಿಲ್ಲ. ವಿದೇಶದಲ್ಲಿ ಯಾವುದೇ ಆಸ್ತಿಯೂ ಇಲ್ಲ. ಅಲ್ಲಿಂದ ನನಗೆ ಯಾವುದೇ ಹಣವೂ ಬಂದಿಲ್ಲ. ನನಗೆ ದೆಹಲಿಯಲ್ಲಿ 2 ನಿವಾಸ ಇರುವುದು ನಿಜ. ಅಲ್ಲಿ ಯಾವುದೇ ಹಣ ಪತ್ತೆಯಾಗಿಲ್ಲ. ನನ್ನ ಸ್ನೇಹಿತರ ಮನೆಯಲ್ಲಿ ಸಿಕ್ಕ ದುಡ್ಡಿಗೆ ಅವರು ಆದಾಯ ತೆರಿಗೆ ಇಲಾಖೆಗೆ ರಿಟನ್ರ್ಸ್ ಫೈಲ್ ಮಾಡಿದ್ದಾರೆ. ಇನ್ನು ಈ ಕುರಿತು ಯಾವುದೇ ನೋಟಿಸ್ ಬಂದರು ಕಾನೂನು ಮೂಲಕ ಎದುರಿಸುತ್ತೇನೆ. ಹೈಕಮಾಂಡ್‍ಗೂ ಈ ಕುರಿತು ಸ್ಪಷ್ಟಮನವರಿಕೆಯಾಗಿದೆ. ಪಕ್ಷ ನೀಡುವ ಜವಾಬ್ದಾರಿಯನ್ನು ಈಗಲೂ ಮುಂದುವರಿಸುತ್ತಿದ್ದೇನೆ ಎಂದು ಸ್ಪಷ್ಟನೆ ಡಿಕೆ ಶಿವಕುಮಾರ್ ಎರಡು ದಿನಗಳ ಹಿಂದೆಯೇ ನೀಡಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv