ಬಾಗಲಕೋಟೆ: ಜಿಲ್ಲೆಯ ಹುನಗುಂದ ತಾಲೂಕಿನಲ್ಲಿರುವ ಕೂಡಲಸಂಗಮದ ಸಂಗಮನಾಥ ದೇವಸ್ಥಾನಕ್ಕೆ ಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಹಣೆಗೆ ವಿಭೂತಿ ಧರಿಸಿ ಶರಣರಂತೆ ಸಂಗಮನಾಥ ದೇಗುಲದಲ್ಲಿ ಸಿಎಂ ಡಿಕೆಶಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ತ್ರಿವೇಣಿ ಸಂಗಮದಲ್ಲಿ ಬಾಗಿನ ಅರ್ಪಣೆ ಮಾಡಿದ್ದಾರೆ. ಇದೇ ವೇಳೆ, ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ್ ಕಾಶಪ್ಪನವರ್ ಹಾಗೂ ಕುಟುಂಬಸ್ಥರು ಸಿಎಂಗೆ ಬಸವಣ್ಣನವರ ಬೆಳ್ಳಿ ಮೂರ್ತಿ ಹಾಗೂ ಬೆಳ್ಳಿ ಗಧೆ ನೀಡಿ ಗೌರವಿಸಿದರು. ಇದನ್ನೂ ಓದಿ: ಉಡುಪಿಯಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ; ಹೂವಿನಿಂದ ಕಂಗೊಳಿಸಿದ ಕೃಷ್ಣ ಮಠ
ವಿಧಾನಸಭಾ ಉಪ ಸಭಾಧ್ಯಕ್ಷರಾದ ಮಂಕಾಳ ವೈದ್ಯ, ಸಂಸದರಾದ ಡಾ. ಜಿ.ಸಿ. ಚಂದ್ರಶೇಖರ್, ಮಾಜಿ ಸಚಿವರಾದ ಆರ್.ಬಿ ತಿಮ್ಮಾಪುರ, ಶಾಸಕರಾದ ಉಮೇಶ್ ಮೇಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
