ಬೆಳಗಾವಿ: ಬೆಳಗಾವಿಯಿಂದಲೇ (Belagavi) ಚುನಾವಣೆ ರಣಕಹಳೆ ಮೊಳಗಿಸಲಿರುವ ರಾಹುಲ್ ಗಾಂಧಿ (Rahul Gandhi) ಮಾರ್ಚ್ 20ರಂದು ಜಿಲ್ಲೆಗೆ ಆಗಮಿಸಲಿದ್ದಾರೆ. ಗುರುವಾರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ.
ಬೆಳಗಾವಿ ವಿಭಾಗದ 9 ಸಂಘಟನಾತ್ಮಕ ಜಿಲ್ಲೆಗಳ ಕಾರ್ಯಕರ್ತರ ಸಮಾವೇಶವನ್ನು ರಾಹುಲ್ ಗಾಂಧಿ ನಡೆಸಲಿದ್ದು, ಬೆಳಗಾವಿಯಲ್ಲಿ ಪೂರ್ವಭಾವಿ ಸಭೆಯನ್ನು ಡಿಕೆಶಿ ಕರೆದಿದ್ದಾರೆ. ಡಿಕೆಶಿ ನೇತೃತ್ವದಲ್ಲಿ ಬೆಳಗಾವಿ ವಿಭಾಗದ 9 ಸಂಘಟನಾತ್ಮಕ ಜಿಲ್ಲೆಗಳ ನಾಯಕರ ಸಭೆ ನಡೆಯಲಿದ್ದು, ಬೆಳಗಾವಿ ನಗರ, ಬೆಳಗಾವಿ ಗ್ರಾಮಾಂತರ, ಚಿಕ್ಕೋಡಿ, ಹುಬ್ಬಳ್ಳಿ ನಗರ, ಧಾರವಾಡ ಗ್ರಾಮಾಂತರ, ಬಾಗಲಕೋಟೆ, ವಿಜಯಪುರ, ಗದಗ, ಹಾವೇರಿ ಜಿಲ್ಲಾ ಕಾಂಗ್ರೆಸ್ ನಾಯಕರಿಗೆ ಆಹ್ವಾನ ನೀಡಲಾಗಿದೆ. ಇದನ್ನೂ ಓದಿ: ರಾಜಕೀಯವಾಗಿ ಬೆಳೆಯಬಾರದೆಂದು ನನ್ನ ಮೇಲೆ ದಾಳಿ: ಎಂಎಲ್‌ಸಿ ಆರ್.ಶಂಕರ್
Advertisement
Advertisement
Advertisement
9 ಸಂಘಟನಾತ್ಮಕ ಜಿಲ್ಲೆಗಳ ಶಾಸಕರು, ಮಾಜಿ ಸಂಸದರು, ಮಾಜಿ ಸಚಿವರು, ಮಾಜಿ ಶಾಸಕರು ಹಾಗೂ 2019ರ ಲೋಕಸಭಾ ಚುನಾವಣೆ ಅಭ್ಯರ್ಥಿಗಳು, 2018ರ ವಿಧಾನಸಭೆ ಚುನಾವಣೆ ಅಭ್ಯರ್ಥಿಗಳು, 2023ರ ವಿಧಾನಸಭೆ ಚುನಾವಣೆ ಟಿಕೆಟ್ ಆಕಾಂಕ್ಷಿಗಳು ಸೇರಿ ಮುಂಚೂಣಿ ನಾಯಕರಿಗೆ ಪೂರ್ವಭಾವಿ ಸಭೆಗೆ ಆಗಮಿಸುವಂತೆ ಪತ್ರದ ಮುಖಾಂತರ ಡಿಕೆಶಿ ಆಹ್ವಾನ ನೀಡಿದ್ದಾರೆ. ಇದನ್ನೂ ಓದಿ: ಸೋಮಣ್ಣ ನಮ್ಮ ಕುಟುಂಬಕ್ಕೆ ಹಿರಿಯ ಸೋದರರಿದ್ದಂತೆ: ಡಿ.ಕೆ ಸುರೇಶ್