ರಾಮನಗರ: ಹಬ್ಬಗಳ ಸಂದರ್ಭದಲ್ಲಿ ಪೊಲೀಸ್ ಠಾಣೆಯಲ್ಲೇ ಅಧಿಕಾರಿಗಳ ಸಮವಸ್ತ್ರದ ಬದಲು ಬಿಜೆಪಿಯ ಕೇಸರಿ ಸಮವಸ್ತ್ರ ಹಾಕಿಸಿದ್ದನ್ನ ಅಶೋಕ್ ಮರೆತುಬಿಟ್ಟಿದ್ದಾರಾ? ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಪ್ರಶ್ನಿಸಿದ್ದಾರೆ.
ಕನಕಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೊಲೀಸ್ ಠಾಣೆಗೇ ರಕ್ಷಣೆ ನೀಡುವ ಪರಿಸ್ಥಿತಿ ಬಂದಿದೆ ಎಂಬ ವಿರೋಧ ಪಕ್ಷದ ನಾಯಕ ಆರ್. ಅಶೋಕ್ (R. Ashoka) ಅವರ ಟೀಕೆಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಟೇಕಾಫ್ ಆಗಲು 20 ಗಂಟೆ ತಡ ಮಾಡಿದ ಏರ್ ಇಂಡಿಯಾ ವಿಮಾನ – ಎಸಿ ಇಲ್ಲದೇ ಮೂರ್ಛೆ ಹೋದ ಪ್ರಯಾಣಿಕರು
Advertisement
Advertisement
ಹಬ್ಬಗಳ ಸಂದರ್ಭದಲ್ಲಿ ಪೊಲೀಸ್ ಠಾಣೆಯಲ್ಲೇ ಅಧಿಕಾರಿಗಳ ಸಮವಸ್ತ್ರದ ಬದಲಿಗೆ ಬಿಜೆಪಿಯ ಕೇಸರಿ ಬಟ್ಟೆ ಹಾಕಿಸಿದ್ದನ್ನು ಅಶೋಕ್ ಮರೆತಿದ್ದಾರಾ? ಉಡುಪಿ, ಬಳ್ಳಾರಿಯಲ್ಲಿ ಪೊಲೀಸರಿಗೆ ಬಿಜೆಪಿಯ ಕೇಸರಿ ಸಮವಸ್ತ್ರ (Saffron Uniform) ಹಾಕಿಸಿದ್ರಿ. ನೀವು ನಮ್ಮ ಬಗ್ಗೆ ಮಾತಮಾಡ್ತಿರಾ? ಎಂದು ಪ್ರಶ್ನಿಸಿದ್ದಾರೆ.
Advertisement
ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಬಿಜೆಪಿ ಜೂನ್ 6ರ ವರೆಗೆ ಗಡುವು ನೀಡಿರುವ ವಿಚಾರ ಕುರಿತು ಮಾತನಾಡಿ, ಅವರು ಅಲ್ಲಿಯವರೆಗೂ ಕಾಯುವುದೇಕೆ? ಈಗಿನಿಂದಲೇ ಹೋರಾಟ ಮಾಡಲಿ. ಯಾಕೆ ಒಳ್ಳೆ ಮುಹೂರ್ತ ನೋಡಿ ಹೋರಾಟ ಮಾಡ್ತಾರಾ? ಅವರು ಯಾವ ವಿಚಾರಕ್ಕೆ ಬಾಯಿ ಬಿಡಬೇಕೋ ಅದರ ಬಗ್ಗೆ ಬಾಯಿ ಬಿಡದೇ ಸುಮ್ಮನೆ ಮಾತನಾಡ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ತಳಿಪರಂಬ ರಾಜರಾಜೇಶ್ವರ ದೇವಸ್ಥಾನದ ಬಳಿ ಶತ್ರು ಭೈರವಿ ಯಾಗ ನಡೆದಿಲ್ಲ – ಡಿಕೆಶಿ ಆರೋಪ ಸುಳ್ಳು ಎಂದ ಆಡಳಿತ ಮಂಡಳಿ
Advertisement
ಇನ್ನೂ ವಾಲ್ಮೀಕಿ ನಿಗಮದ ಅಭಿವೃದ್ಧಿ ಅಧಿಕಾರಿ ಆತ್ಮಹತ್ಯೆ ಪ್ರಕರಣದಲ್ಲಿ ನೈತಿಕ ಹೊಣೆಹೊತ್ತು ಸಚಿವ ನಾಗೇಂದ್ರ ರಾಜೀನಾಮೆ ನೀಡಬೇಕು ಎಂಬ ಈಶ್ವರಪ್ಪ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಈ ಬಗ್ಗೆ ನಾನು ಮತ್ತು ಸಿಎಂ ಪರಿಶೀಲನೆ ಮಾಡ್ತಿದ್ದೇವೆ. ಪ್ರಕರಣದ ತನಿಖೆಯಲ್ಲಿ ವಾಸ್ತವಾಂಶ ನೋಡಿ ಆಮೇಲೆ ಈ ಬಗ್ಗೆ ತೀರ್ಮಾನ ಮಾಡ್ತೇವೆ. ನಾವು ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಡಿಕೆಶಿ ತಿಳಿಸಿದರು. ಇದನ್ನೂ ಓದಿ: ಅಮೆರಿಕದಲ್ಲಿ ನಡೆದ ಸ್ಪೆಲ್ಲಿಂಗ್ ಬೀ ಸ್ಪರ್ಧೆಯಲ್ಲಿ 12 ವರ್ಷದ ಭಾರತೀಯ-ಅಮೆರಿಕನ್ ವಿಜೇತ