ಚಿಕ್ಕಬಳ್ಳಾಪುರ: ಮೊದಲು ಮಕ್ಕಳ ವಿದ್ಯಾಭ್ಯಾಸ ಅವರ ಭವಿಷ್ಯ ಮುಖ್ಯ. ರಾಜಕೀಯ ಆಮೇಲೆ ಎಂದು ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.
Advertisement
ದೆಹಲಿಯಿಂದ ಚಿಕ್ಕಬಳ್ಳಾಪುರಕ್ಕೆ ಆಗಮಿಸಿದ ಡಿಕೆಶಿವಕುಮಾರ್ ಅವರು ಹಿಜಬ್ ತೀರ್ಪು ಕುರಿತಂತೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿ, ತೀರ್ಪಿನ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಬೇಕಿದೆ. ಯಾವುದೇ ರಾಜಕೀಯ ಪಕ್ಷ ತೀರ್ಪುನ್ನು ತಮ್ಮದೇ ರೀತಿಯಲ್ಲಿ ವ್ಯಾಖ್ಯಾನ ಮಾಡಬಹುದು. ಆದರೆ ತೀರ್ಪು ತೀರ್ಪೆ. ತೀರ್ಪನ್ನು ಎಲ್ಲರೂ ಕೂಡ ಗೌರವದಿಂದ ಸ್ವೀಕಾರ ಮಾಡಬೇಕು ಎಂದಿದ್ದಾರೆ.
Advertisement
Advertisement
ತೀರ್ಪಿನಲ್ಲಿ ಮಾಡಿರುವ ಸಂಪೂರ್ಣವಾದ ಉಲ್ಲೇಖಗಳನ್ನು ನೋಡದೇ ನಾನು ರಾಜಕೀಯ ಪಕ್ಷದ ರಾಜ್ಯಾಧ್ಯಕ್ಷನಾಗಿ ಪ್ರತಿಕ್ರಿಯೆ ನೀಡಲಾರೆ. ನಮ್ಮ ಹಿರಿಯ ನಾಯಕರ ಜೊತೆ ಚರ್ಚೆ ಮಾಡಿ ಪ್ರತಿಕ್ರಿಯೆ ನೀಡುತ್ತೇನೆ. ನಮಗೆ ಶಾಂತಿ ಬೇಕು, ಮಕ್ಕಳ ವಿದ್ಯಾಭ್ಯಾಸ ಮುಖ್ಯವೇ ಹೊರತು ರಾಜಕೀಯ ಎಲ್ಲ ಆಮೇಲೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹಿಜಬ್ ಕುರಿತ ಹೈಕೋರ್ಟ್ ತೀರ್ಪನ್ನು ನಾನು ಒಪ್ಪಲ್ಲ: 15 ಟ್ವೀಟ್ ಮಾಡಿದ ಓವೈಸಿ
Advertisement
ಮತ್ತೊಂದೆಡೆ ಹಿಜಬ್ ಕುರಿತಂತೆ ಹೈಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಟ್ವೀಟ್ ಮಾಡಿರುವ ಅವರು, ಹಿಜಬ್ ವಿವಾದದಲ್ಲಿ ನನ್ನ ಪ್ರಮುಖ ಕಾಳಜಿ ಶಿಕ್ಷಣ, ಕಾನೂನು ಮತ್ತು ಸುವ್ಯವಸ್ಥೆಯಾಗಿದೆ. ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಆದರೆ ಶಿಕ್ಷಣ, ಕಾನೂನು ಮತ್ತು ಸುವ್ಯವಸ್ಥೆ, ಕೋಮು ಸೌಹಾರ್ದತೆಯ ಜವಾಬ್ದಾರಿ ಇನ್ನೂ ಕರ್ನಾಟಕ ಸರ್ಕಾರದ ಮೇಲಿದೆ ಎಂದಿದ್ದಾರೆ. ಇದನ್ನೂ ಓದಿ: ಕೋರ್ಟ್ ತೀರ್ಪು ಬೆನ್ನಲ್ಲೇ ಪರೀಕ್ಷೆ ಬಿಟ್ಟು ಹೊರ ನಡೆದ ವಿದ್ಯಾರ್ಥಿನಿಯರು
My greatest concern in the hijab controversy is education, and law and order.
The Karnataka High Court has given a judgement but the responsibility for education, law and order and communal harmony is still with the government of Karnataka. 1/2
— DK Shivakumar (@DKShivakumar) March 15, 2022
ನಾನು ಕರ್ನಾಟಕ ಸರ್ಕಾರಕ್ಕೆ ಪ್ರಬುದ್ಧ ನಾಯಕತ್ವವನ್ನು ಪ್ರದರ್ಶಿಸಲು ಮತ್ತು ಖಚಿತಪಡಿಸಿಕೊಳ್ಳಲು ಮನವಿ ಮಾಡುತ್ತೇನೆ.
1) ಶಾಲೆಗಳು ಮತ್ತು ಕಾಲೇಜುಗಳ ಸುತ್ತಮುತ್ತ ಕಾನೂನು ಮತ್ತು ಸುವ್ಯವಸ್ಥೆಯನ್ನು ನಿರ್ವಹಿಸಬೇಕಾಗುತ್ತದೆ.
2) ಧರ್ಮ ಮತ್ತು ಲಿಂಗದ ಲೆಕ್ಕದ ಮೇಲೆ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅಡ್ಡಿಯಾಗುವುದಿಲ್ಲ.
3) ಕೋಮು ಸೌಹಾರ್ದತೆ ಇದೆ.