ಶಿವಮೊಗ್ಗ: ನಮ್ಮದು 3 ಬಾಗಿಲು ಆದರೆ, ಬಿಜೆಪಿಯವರದ್ದು (BJP) ಮನೆಯೊಂದು 12 ಬಾಗಿಲು ಆಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಟೀಕಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ (Nalin Kumar Kateel) ಹೇಳಿಕೆಗೆ ತಿರುಗೇಟು ನೀಡಿದರು. ಅವರ ಮನೆ ಅವರು ಮೊದಲು ರಿಪೇರಿ ಮಾಡಿಕೊಳ್ಳಲಿ. ಅವರ ಸರ್ಕಾರವೇ ಕಲುಷಿತವಾಗಿದೆ. ಬಿಜೆಪಿ, ಕಾಂಗ್ರೆಸ್ (Congress) , ಜೆಡಿಎಸ್ (JDS) ಮೂರು ಸೇರಿ ಸರ್ಕಾರ ರಚನೆ ಆಗಿದೆ ಎಂದು ವಾಗ್ದಾಳಿ ನಡೆಸಿದರು.
Advertisement
Advertisement
ದೇಶದಲ್ಲಿ ಎಲ್ಲಾ ಕಡೆ ಆಪರೇಷನ್ ಕಮಲ ನಡೆಯುತ್ತಿದೆ. ತೆಲಂಗಾಣದಲ್ಲಿ ಆಪರೇಷನ್ ಕಮಲ ಬಹಿರಂಗವಾಗಿದೆ. ಇನ್ನೂ ರಾಜ್ಯದಲ್ಲಿ ಆಪರೇಷನ್ ಕಮಲ ಮೂಲಕ ಸರ್ಕಾರ ಅಧಿಕಾರಕ್ಕೆ ಬಂದಿದೆ. ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶಿಸಿ ಈ ಬಗ್ಗೆ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಳ್ಳಬೇಕು. ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಒಬ್ಬಳ ಹಿಂದೆ ಬಿದ್ದ ಇಬ್ಬರು ಹುಡುಗ್ರು – ಪ್ರೀತಿ ವಿಚಾರಕ್ಕೆ ನಡೀತು ಎರಡು ಗ್ಯಾಂಗ್ ಮಧ್ಯೆ ಗುದ್ದಾಟ
Advertisement
Advertisement
ಈಶ್ವರಪ್ಪನಿಂದಾಗಿ ಶಿವಮೊಗ್ಗದಲ್ಲಿ ಗಲಾಟೆ ಆಗುತ್ತಿದೆ. ಶಿವಮೊಗ್ಗದ ಗಲಾಟೆಯಿಂದಾಗಿ ಇಲ್ಲಿ ಯಾರು ಹೂಡಿಕೆ ಮಾಡಲು ಮುಂದೆ ಬರುತ್ತಿಲ್ಲ. ತಾಕತ್ ಇದ್ದರೆ ಶಿವಮೊಗ್ಗದಲ್ಲಿ ಉದ್ದಿಮೆದಾರರನ್ನು ಕರೆತಂದು ಹೂಡಿಕೆ ಮಾಡಲಿ. ಚುನಾವಣೆಗೆ ನಾವು ಯಾವಾಗಲೂ ಸಿದ್ಧರಾಗಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಬಿಜೆಪಿ ತೊಲಗಿಸಬೇಕು ಎಂಬುದೇ ಬಿಜೆಪಿಯವರ ಸಂಕಲ್ಪ: ಸಿದ್ದರಾಮಯ್ಯ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅ.6 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಖರ್ಗೆ ಅವರಿಗೆ ಅದ್ಧೂರಿ ಸ್ವಾಗತಕ್ಕೆ ಎಲ್ಲಾ ತಯಾರಿ ನಡೆಸುತ್ತಿದ್ದೇನೆ. ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಖರ್ಗೆ ಸ್ವಾಗತಕ್ಕೆ ಬೆಂಗಳೂರಿಗೆ ಬರಬೇಕು. ಇನ್ನು 3 ದಿನದಲ್ಲಿ ಚುನಾವಣೆ ದೃಷ್ಟಿಯಿಂದ ಮಹತ್ವದ ನಿರ್ಣಯ ಪ್ರಕಟಿಸುತ್ತೇನೆ ಎಂದು ತಿಳಿಸಿದರು.