ಕೋಲಾರ: ಚನ್ನಪಟ್ಟಣ ಶಾಸಕ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್‍ಗೆ ರಾಜೀನಾಮೆ ನೀಡಿದ ವಿಚಾರವಾಗಿ ಇಂಧನ ಸಚಿವ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
Advertisement
ಇಂದು ಕೋಲಾರದ ಕುರುಡುಮಲೆ ದೇವಾಲಯದಲ್ಲಿ ಪೂಜೆ ನಂತರ ಮಾತನಾಡಿದ ಡಿಕೆ ಶಿವಕುಮಾರ್, ನಮ್ಮ ಸರ್ಕಾರ ಯೋಗೀಶ್ವರ್ ಅವರಿಗೆ ಕೊಟ್ಟಷ್ಟು ಅವಕಾಶ ಹಾಗೂ ಸ್ವಾತಂತ್ರ್ಯ ಹಿಂದೆ ಯಾರೂ ಕೊಟ್ಟಿಲ್ಲ, ಮುಂದೆಯೂ ಕೊಡಲು ಸಾಧ್ಯವಿಲ್ಲ. ಜಿಲ್ಲಾ ಪಂಚಾಯ್ತಿ ಮತ್ತು ತಾಲೂಕು ಪಂಚಾಯ್ತಿಯಲ್ಲಿ ಸಂಪೂರ್ಣ ಸಹಕಾರ ನೀಡಲಾಗಿತ್ತು. ಕಾಂಗ್ರೆಸ್ ಗೆ ಯಾರೂ ಏನು ಮಾಡಲು ಸಾಧ್ಯವಿಲ್ಲ ಅಂತ ಹೇಳಿದ್ರು.
Advertisement
ಕೇರಳದಲ್ಲಿ ಕೆ.ಸಿ.ವೇಣುಗೋಪಾಲ್ ಪ್ರಕರಣದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅದೊಂದು ರಾಜಕೀಯ ಪ್ರೇರಿತ ಅಂದ್ರು.
Advertisement
Advertisement
ಇಂದು ಶಾಸಕ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ರಾಮನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಯೋಗೇಶ್ವರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಹ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ವಿಚಾರವನ್ನು ತಿಳಿಸಿದರು.
ಇನ್ನು ಮುಂದೆ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದಲ್ಲಿ ಭಾವಚಿತ್ರ ಹೆಸರು ಬಳಸುವುದು ಬೇಡ. ಕಾಂಗ್ರೆಸ್ ಪಕ್ಷದ ವರಿಷ್ಟರು ಕಳೆದ ನಾಲ್ಕು ವರ್ಷಗಳಿಂದ ಯಾವುದೇ ಸಾರ್ವಜನಿಕ ಬದುಕಿನಲ್ಲಿ ನನ್ನನ್ನು ಸರಿಯಾಗಿ ಬಳಕೆ ಮಾಡಲಿಲ್ಲ. ನಾಯಕರಿಗೆ ನನ್ನ ಅವಶ್ಯಕತೆ ಇಲ್ಲ ಎನ್ನುವುದು ನನ್ನ ಭಾವನೆ. ಜಿಲ್ಲೆಯಲ್ಲಿ ಏಳೆಂಟು ಜನ ನಾಯಕರುಗಳ ಬಲಿಷ್ಠತ್ವ ಕಾಂಗ್ರೆಸ್ ಪಕ್ಷಕ್ಕಿದೆ ಎಂದು ತಿಳಿಸಿದರು. ಇದೇ ವೇಳೆ ಸಚಿವ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ರು.
ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಶಾಸಕ ಸಿ.ಪಿ.ಯೋಗೇಶ್ವರ್-ಡಿಕೆಶಿ ವಿರುದ್ಧ ತೀವ್ರ ವಾಗ್ದಾಳಿ https://t.co/zk5asKxYr7#DKShivakumar #CPYogeshwar pic.twitter.com/5kY1F1ENzv
— PublicTV (@publictvnews) October 14, 2017
ನಾನು ತಪ್ಪು ಮಾಡಿದ್ರೆ, ಸಾರ್ವಜನಿಕ ಜೀವನದಿಂದ ನಿವೃತ್ತಿ: ವೇಣುಗೋಪಾಲ್ https://t.co/TGZwXQ1M36#Kerala #SolarScam #KCVenugopal #Congress pic.twitter.com/hvT1SVRmPB
— PublicTV (@publictvnews) October 14, 2017