ಗಂಡಸುತನದ ಬಗ್ಗೆ ಮಾತನಾಡಿದವರು ದೊಡ್ಡವರು ಅವರಿಗೆ ಜನರೆ ಉತ್ತರ ಕೊಡುತ್ತಾರೆ: ಡಿಕೆಶಿ

Public TV
1 Min Read
DK SHIVAKUMAR 9

ಬೆಂಗಳೂರು: ಗಂಡಸುತನದ ಬಗ್ಗೆ ಮಾತನಾಡಿದವರು ದೊಡ್ಡವರು ಅವರಿಗೆ ಜನರೆ ಉತ್ತರ ಕೊಡುತ್ತಾರೆ ಎನ್ನುವ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟಾಂಗ್ ನೀಡಿದ್ದಾರೆ.

Kumaraswamy1

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಲಾಲ್ ವಿಚಾರವಾಗಿ ಮುಖ್ಯಮಂತ್ರಿಗಳಿಗೆ ಗಂಡಸ್ತನ ಇಲ್ಲ, ಕಾಂಗ್ರೆಸ್‍ಗೆ ತಾಕತ್ತಿಲ್ಲ ಎಂದು ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಹೇಳಿದ್ದಾರೆ. ಕುಮಾರಣ್ಣ ಬಹಳ ಹಿರಿಯರಿದ್ದಾರೆ. ಅಶ್ವಥ್ ನಾರಾಯಣ ಅವರು ಗಂಡಸ್ತನದ ಬಗ್ಗೆ ಮಾತನಾಡುತ್ತಾರೊ, ಬೇರೆಯವರು ಏನು ಮಾತನಾಡುತ್ತಾರೋ ಆ ಬಗ್ಗೆ ಉತ್ತರ ನೀಡುವುದಿಲ್ಲ. ಸದ್ಯ ನಾವು ಪಕ್ಷದ ಸದಸ್ಯತ್ವ ಮಾಡುತ್ತಿದ್ದು, ಇಂದು ಕಡೆ ದಿನವಾಗಿದ್ದು ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸುವಂತೆ ನೋಡಿಕೊಳ್ಳುತ್ತಿದ್ದೇವೆ ನಮ್ಮ ಮನೆ ನಾವು ಕಟ್ಟಿಕೊಳ್ಳುವ ಪ್ರಯತ್ನದಲ್ಲಿದ್ದೇವೆ. ಇಂತಹ ವಿಚಾರಗಳಿಗೆ ಜನ ಉತ್ತರ ನೀಡುತ್ತಾರೆ ಎಂದು ಉತ್ತರಿಸಿದ್ದಾರೆ. ಇದನ್ನೂ ಓದಿ: ನಿಮಗೆ ಗಂಡಸ್ತನ ಇದ್ದರೆ, ಏನು ಗೊತ್ತಿಲ್ಲದಂತೆ ಮೌನವಾಗಿರಬೇಡಿ: ಸಿಎಂಗೆ ಹೆಚ್‍ಡಿಕೆ ಸವಾಲ್

DK SHIVAKUMAR AND RAHUL GANDHI

ರಾಹುಲ್ ಗಾಂಧಿ ಅವರು ನಮ್ಮ ರಾಜ್ಯಕ್ಕೆ ಆಗಮಿಸುತ್ತಿದ್ದು, ಅಕ್ಷರ, ಅನ್ನ ದಾಸೋಹ ನೀಡಿರುವ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲಿದ್ದು, ಡಾ. ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆಗೆ ನಮಿಸಲಿದ್ದಾರೆ. ಇಂದಿರಾ ಗಾಂಧಿ ಅವರಿಂದ ಹಿಡಿದು ರಾಜೀವ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರು ನಮ್ಮ ರಾಜ್ಯದ ಎಲ್ಲ ಸಮುದಾಯಗಳ ಮಠದ ಬಗ್ಗೆ ಅಪಾರ ಗೌರವ ಇಟ್ಟುಕೊಂಡಿದ್ದು, ಅವರೆಲ್ಲರೂ ಇಲ್ಲಿನ ಮಠಗಳಿಗೆ ಭೇಟಿ ಕೊಟ್ಟ ಪರಂಪರೆ ಇದೆ. ಈಗ ಅದನ್ನು ರಾಹುಲ್ ಗಾಂಧಿ ಅವರು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ರಾಹುಲ್ ಗಾಂಧಿ ಅವರು ನಾಳೆ ಬೆಳಗ್ಗೆ 10.30ಕ್ಕೆ ಪಕ್ಷದ ನಾಯಕರನ್ನು ಭೇಟಿ ಮಾಡಲಿದ್ದು, ಶಾಸಕರು, ಸಂಸದರು, ಪರಾಜಿತ ಅಭ್ಯರ್ಥಿಗಳು, ಮಾಜಿ ಶಾಸಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಮಧ್ಯಾಹ್ನ ಯುವ, ವಿದ್ಯಾರ್ಥಿ ಹಾಗೂ ಮಹಿಳಾ ಘಟಕಗಳ ಜೊತೆ ಸಭೆ ನಡೆಸಲಿದ್ದಾರೆ ಎಂದು ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: ಗಂಡಸ್ತನ ಪದ ಬಳಕೆಗೆ ಹೆಚ್‌.ಡಿ.ಕುಮಾರಸ್ವಾಮಿ ವಿಷಾದ

Share This Article
Leave a Comment

Leave a Reply

Your email address will not be published. Required fields are marked *