ಬೆಂಗಳೂರು: ರಾಜ್ಯದ 7 ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ (Yettinahole Project) ಏತ ಕಾಮಗಾರಿಗಳಿಗೆ ಗೌರಿ ಹಬ್ಬದಂದು (ಸೆ.6ರ೦ದು) ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ತಿಳಿಸಿದರು.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ (Bengaluru Rural), ರಾಮನಗರ, ತುಮಕೂರು, ಹಾಸನ ಜಿಲ್ಲೆಗಳು ಈ ಯೋಜನೆಯನ್ನು ಎದುರುನೋಡುತ್ತಿವೆ. ಅನೇಕ ನಾಯಕರು ಈ ಯೋಜನೆಗೆ ಹೋರಾಟ ಮಾಡಿದ್ದು, ಅನೇಕ ಪಕ್ಷಗಳು ಇದಕ್ಕೆ ಸಹಕಾರ ನೀಡಿವೆ. ಕಳೆದ ಒಂದು ವರ್ಷದಿಂದ ಈ ಯೋಜನೆಯನ್ನು ಸವಾಲಾಗಿ ಸ್ವೀಕರಿಸಿದ್ದೆ. ಈಗಾಗಲೇ ಯೋಜನೆಯ ಕಾಮಗಾರಿಗಳ ಪರೀಕ್ಷಾರ್ಥ ಕಾರ್ಯಾಚರಣೆ ಮಾಡಿದ್ದೇನೆ ಎಂದು ವಿವರಿಸಿದರು. ಇದನ್ನೂ ಓದಿ: ಧರೆಗುರುಳಿದ ಶಿವಾಜಿ ಪ್ರತಿಮೆ; ಮಹಾರಾಷ್ಟ್ರ ಸರ್ಕಾರದ ವಿರುದ್ಧ `ಚಪ್ಪಲಿ ಸೇವೆ’ ಪ್ರತಿಭಟನೆ ನಡೆಸಿದ ವಿಪಕ್ಷಗಳು
ಈ ಯೋಜನೆ ಮೂಲಕ ನೀರನ್ನು ಕಾಲುವೆಗಳಿಗೆ ಹರಿಸುತ್ತಿದ್ದೇವೆ. ಈ ಯೋಜನೆ ಮಾರ್ಗದ ಮಧ್ಯೆ ಅರಣ್ಯ ಇಲಾಖೆಗೆ (Forest Department) ಸಂಬಂಧಿಸಿದ ಜಾಗಗಳಲ್ಲಿ ಸ್ವಲ್ಪ ಸಮಸ್ಯೆ ಇದ್ದು, ಅವುಗಳನ್ನು ಬಗೆಹರಿಸಿದ್ದೇವೆ. ಜಾಗ ಹಸ್ತಾಂತರವಾದ ಬಳಿಕ ಪ್ರಮುಖ ಕಾಲುವೆಗಳಿಗೆ ನೀರು ಹರಿಯಲಿವೆ. ಈಗ ತಾತ್ಕಾಲಿಕವಾಗಿ ವಾಣಿ ವಿಲಾಸ ಅಣೆಕಟ್ಟೆಗೆ ನೀರು ಹರಿಸಲಾಗುತ್ತಿದೆ. ಯೋಜನೆಯ 7 ವಿಯರ್‌ಗಳು ನೀರನ್ನು ಎತ್ತುತ್ತಿವೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಹಮಾಸ್ ಬಂಡುಕೋರರ ದಾಳಿ- ಒತ್ತೆಯಾಳುಗಳ 6 ಶವ ಪತ್ತೆಹಚ್ಚಿ ವಶಪಡಿಸಿಕೊಂಡ ಇಸ್ರೇಲ್
ಜನ ಈಗಾಗಲೇ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ. ಜಾಗ ಕಿರಿದಾಗಿರುವ ಕಡೆ ಪೊಲೀಸರಿಗೆ ಹೇಳಿ ಜನರು ನೀರು ತೆಗೆದುಕೊಂಡು ಹೋಗಲು ವ್ಯವಸ್ಥೆ ಮಾಡಲಾಗಿದೆ. ಉದ್ಘಾಟನಾ ಕಾರ್ಯಕ್ರಮಕ್ಕೆ ಪಕ್ಷಬೇಧ ಮರೆತು ಎಲ್ಲ ನಾಯಕರು, ರೈತರಿಗೆ ಆಹ್ವಾನಿಸಲಿದ್ದೇವೆ. ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರಿಗೂ ಆಹ್ವಾನ ನೀಡುವಂತೆ ನನ್ನ ಕಚೇರಿ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಈ ಪವಿತ್ರ ಕಾರ್ಯಕ್ಕೆ ಎಲ್ಲರೂ ಸಾಕ್ಷಿಯಾಗಬೇಕು ಎಂದು ಡಿಕೆಶಿ ಕರೆ ನೀಡಿದರು. ಇದನ್ನೂ ಓದಿ: ಪಬ್ಲಿಕ್ ಟಿವಿ ವಿದ್ಯಾಮಂದಿರ ಶೈಕ್ಷಣಿಕ ಮೇಳಕ್ಕೆ 2ನೇ ದಿನವೂ ಉತ್ತಮ ಸ್ಪಂದನೆ – ಸಂಜೆ 6 ಗಂಟೆವರೆಗೂ ಇರಲಿದೆ ಮೇಳ
ಇದೇ ವೇಳೆ ಸಿಎಂ ನಿವಾಸದಲ್ಲಿ ನಡೆದ ಭೋಜನ ಕೂಟದಲ್ಲಿ ಏನೆಲ್ಲಾ ವಿಷಯ ಚರ್ಚೆಯಾಯ್ತು ಎಂಬ ಪತ್ರಕರ್ತರ ಪ್ರಶ್ನೆಗೆ ಅವರು ಉತ್ತರಿಸಿದರು. ಮಹಾತ್ಮಾ ಗಾಂಧೀಜಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಬೆಳಗಾವಿಯಲ್ಲಿ ನಡೆದ ಎಐಸಿಸಿ ಅಧಿವೇಶನಕ್ಕೆ ನೂರು ವರ್ಷಗಳು ಪೂರ್ಣಗೊಂಡಿವೆ. ಈಗ ಆ ಸ್ಥಾನದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಕೂತಿದ್ದಾರೆ. ಗಾಂಧೀಜಿ ಅವರು ಹಾಕಿಕೊಟ್ಟಿರುವ ಮಾರ್ಗದರ್ಶನವನ್ನು ವಿಶ್ವವೇ ಗಮನಿಸಿದೆ. ಇದನ್ನು ಮುಂದಿನ ಪೀಳಿಗೆಗೆ ತಿಳಿಸಬೇಕಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ವತಿಯಿಂದ ಯಾವ ರೀತಿ ಕಾರ್ಯಕ್ರಮ ರೂಪಿಸಬೇಕು ಎಂಬುದರ ಬಗ್ಗೆ ಚರ್ಚೆ ಮಾಡಲಾಯಿತು. ಮುಂದಿನ ಒಂದುವಾರದಲ್ಲಿ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ವರದಿ ನೀಡುವಂತೆ ಸಚಿವರಿಗೆ ತಿಳಿಸಲಾಗಿದೆ. ಪಕ್ಷದ ವತಿಯಿಂದಲೂ ಕಾರ್ಯಕ್ರಮ ಮಾಡಲಾಗುತ್ತಿದ್ದು, ಆ ಬಗ್ಗೆ ಪಕ್ಷದ ಕಚೇರಿಯಲ್ಲಿ ಚರ್ಚೆ ಮಾಡಿದ್ದೆವು ಎಂದು ತಿಳಿಸಿದರು.
ಇದೇ ವೇಳೆ ಕೋವಿಡ್ ಹಗರಣದ ವರದಿ ಕುರಿತು ಮಾತನಾಡಿ, ಕುನ್ಹಾ ಅವರ ವರದಿಯಲ್ಲಿ ಏನಿದೆ ಅಂತ ಗೊತ್ತಿಲ್ಲ. ಸುಧಾಕರ್ ಅವರ ಹೇಳಿಕೆಯ ಬಗ್ಗೆಯೂ ಮಾಹಿತಿ ಇಲ್ಲ. ಈ ವಿಚಾರವಾಗಿ ಸಂಪೂರ್ಣ ಮಾಹಿತಿ ಪಡೆದು ಮಾತನಾಡುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: SSLC ವಿದ್ಯಾರ್ಥಿನಿಗೆ ತನ್ನ ಬೆತ್ತಲೆ ಫೋಟೋ ಕಳಿಸಿ ಕಿರುಕುಳ – ಕಾಮುಕ ಶಿಕ್ಷಕನ ವಿರುದ್ಧ ಕೇಸ್