ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒಳ್ಳೆ ನಾಯಕರು, ಹಿರಿಯರು ಹಾಗೂ ಒಳ್ಳೆಯ ಸಾಹಿತಿಗಳು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ದೊಡ್ಡ ರಾಜಕೀಯ ಕುಟುಂಬದ ಹಿನ್ನೆಲೆಯಿದೆ. ಅವರು ಹೋರಾಟ ಮಾಡಿಕೊಂಡೇ ಬಂದಿದ್ದಾರೆ. ಸಾಹಿತ್ಯ, ನಿರ್ದೇಶನ, ನಿರ್ಮಾಣ ಎಲ್ಲವೂ ಚೆನ್ನಾಗಿದೆ. ಮೋದಿ ಅವರಿಂದ ಪಂಚೆ ಉಡುವುದನ್ನು ಕಲಿತಿದ್ದೇನೆ ಎಂದಿದ್ದಾರೆ. ಅವರು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ಅದಕ್ಕೆ ಪ್ರತಿಕ್ರಿಯೆ ಕೊಡಬೇಕು, ಕೊಡುತ್ತಿದ್ದೇನೆ ಎಂದು ಟೀಕಿಸಿದರು.
Advertisement
Advertisement
ಮೇಕೆದಾಟು ಕುರಿತು ಟ್ವೀಟ್ ಮಾಡಿರುವ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಕಿಡಿಕಾರಿದ ಅವರು, ಎಚ್‌ಡಿಕೆ ಏನೇನು ಹೇಳುತ್ತಾರೋ ಹೇಳಲಿ. ನಾನು ಬಂಡೆ, ಮಣ್ಣು, ಕಬ್ಬಿಣ, ನೀರು, ಎಲ್ಲಾ ನುಂಗಿದ್ದೇನೆ. ಇವೆಲ್ಲಾ ಹಳೆಯ ವಿಷಯಗಳಾಗಿವೆ. ಎಚ್‌ಡಿಕೆ ದೆಹಲಿಗೆ ಹೋಗಿ ಏನು ಮಾಡಿ ಬಂದರು ಎನ್ನುವುದು ನನಗೆ ಗೊತ್ತು. ನನ್ನ ವಿರುದ್ಧ ದೆಹಲಿಯಲ್ಲಿ ಎರಡೂ ಪಕ್ಷಗಳು ಷಡ್ಯಂತ್ರ ರೂಪಿಸಿವೆ ಎನ್ನುವುದು ನನಗೆ ತಿಳಿದಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ನೀರಿನ ಮುಂದೆ ʼಕಪಟ ನಾಟಕʼ ಮಾಡುವ ಸಿದ್ದಹಸ್ತ, ಕಲ್ಲುಬಂಡೆಗಳನ್ನೇ ನುಂಗಿದ ʼರಕ್ಕಸ ರಾಜಕಾರಣ’
Advertisement
Advertisement
ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ನಾವು ಕೈಗೊಂಡಿರುವ ಹೋರಾಟ ಪಕ್ಷಾತೀತ. ಇದನ್ನು ಟೀಕೆ ಮಾಡುತ್ತಿರುವ ಹೆಚ್.ಡಿ.ಕುಮಾರಸ್ವಾಮಿ ಅವರೂ ಪಾದಯಾತ್ರೆಯಲ್ಲಿ ಭಾಗವಹಿಸಬಹುದು ಎಂದಿದ್ದಾರೆ ಕೆಪಿಸಿಸಿ ಅಧ್ಯಕ್ಷರು. ಅವರು ನನ್ನನ್ನೂ ಸೇರಿಸಿ 83 ತಾಲೂಕುಗಳ ಜನರಿಗೆ ಮೇಕೆದಾಟು ಮಕ್ಮಲ್ ಟೋಪಿ ಹಾಕಲು ಹೊರಟಿದ್ದಾರೆ ಎಂದು ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದರು. ಇದನ್ನೂ ಓದಿ: ಕರ್ನಾಟಕ ಬಂದ್ ದಿನಾಂಕ ಮುಂದೂಡಲು ವಾಟಾಳ್ ನಾಗರಾಜ್‌ಗೆ ಕರವೇ ಪತ್ರ