ನವದೆಹಲಿ: ಇಂಧನ ಸಚಿವ ಡಿ.ಕೆ ಶಿವಕುಮಾರ್ ಅವರಿಗೆ ಬಿಜೆಪಿ ಸೇರಲು ಆಹ್ವಾನ ನೀಡಲಾಗಿದೆ ಎಂಬ ವಿಚಾರ ಹಲವು ದಿನಗಳಿಂದ ಕೇಳಿ ಬರುತ್ತಿದ್ದು, ಇಂದು ಸ್ವತಃ ಸಿಎಂ ಸಿದ್ದರಾಮಯ್ಯ ಅವರು ಡಿಕೆಶಿ ಅವರಿಗೆ ಬಿಜೆಪಿ ಪಕ್ಷ ಸೇರಲು ಐಟಿ ಅಧಿಕಾರಿಗಳಿಂದ ಒತ್ತಡ ಹಾಕಲಾಗಿದೆ ಎಂದು ಆರೋಪಿಸಿದ್ದರು. ಈ ಕುರಿತು ಸಚಿವ ಡಿ.ಕೆ ಶಿವಕುಮಾರ್ ಅವರು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ್ದು, ನಾನು ಈ ಕುರಿತು ಕಾಮೆಂಟ್ ಮಾಡುವುದಿಲ್ಲ. ಸೂಕ್ತ ಸಮಯದಲ್ಲಿ ಹಲವರಿಗೆ ಈ ಕುರಿತು ಮಾಹಿತಿ ನೀಡಬೇಕಿದೆ ಎಂದು ಹೇಳಿದ್ದಾರೆ.
ನಾನು ಅಂತಿಮ ವರ್ಷದ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಸಂದರ್ಭದಲ್ಲಿ ರಾಜೀವ್ ಗಾಂಧಿ, ವೀರಪ್ಪ ಮೊಯ್ಲಿ ಹಾಗೂ ಚಂದ್ರಶೇಖರ ಮೂರ್ತಿ ಅವರಂತಹ ನಾಯಕರು ಕರೆದು ಚುನಾವಣೆಯಲ್ಲಿ ಎಚ್.ಡಿ ದೇವೇಗೌಡ ಅವರ ವಿರುದ್ಧ ಸ್ಪರ್ಧಿಸಲು ಅವಕಾಶ ನೀಡಿದ್ದರು. ಕಾಂಗ್ರೆಸ್ ವಿದ್ಯಾರ್ಥಿ ಘಟಕದ ಸ್ಥಾನದಿಂದ ಈ ಹಂತದ ವರೆಗೆ ಬೆಳೆದು ಬಂದಿದ್ದೇನೆ. ನಂತರ ಸಮಯದಲ್ಲಿ ಹಲವು ಕಾರಣಗಳಿಂದ ನಾನು ಸ್ವಾತಂತ್ರ್ಯ ಅಭ್ಯರ್ಥಿಯಾಗಿ ಸ್ಪರ್ಧಿಸಬೇಕಾಯಿತು. ಈ ಸಮಯದಲ್ಲಿ ಇದರ ಕುರಿತು ಮಾತನಾಡುವುದು ಸರಿಯಲ್ಲ. ಸೂಕ್ತ ಸಮಯದಲ್ಲಿ ಹಲವು ವಿಚಾರಗಳ ಬಗ್ಗೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: Exclusive: ಡಿಕೆ ಶಿವಕುಮಾರ್ ಮಗಳು ಐಶ್ವರ್ಯಗೆ ಐಟಿ ಕೇಳಿದ ಪ್ರಶ್ನೆಗಳು ಏನು?
ಇನ್ನು ಡಿ.ಕೆ ಶಿವಕುಮಾರ್ ಹಾಗೂ ಅವರ ಸಹೋದರ ಸಂಸದ ಡಿ.ಕೆ ಸುರೇಶ್ ರನ್ನು ಬಿಜೆಪಿ ಸೆಳೆಯಲು ಕೇಂದ್ರ ಸರ್ಕಾರವು ಐಟಿ ಅಧಿಕಾರಿಗಳ ಮೂಲಕ ಬೆದರಿಕೆ ಹಾಕುತ್ತಿದೆ. ಡಿಕೆಶಿ ಕಾಂಗ್ರೆಸ್ ಪಕ್ಷದಿಂದ ಬೆಳೆದು ಬಂದವರು. ಯಾರು ಎಷ್ಟೇ ಒತ್ತಡ ಹಾಕಿದರೂ ಅವರು ಸೊಪ್ಪು ಹಾಕುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆರೋಪ ಮಾಡಿದ್ದರು.
ಇದನ್ನೂ ಓದಿ: Exclusive: ಡಿಕೆ ಶಿವಕುಮಾರ್ ಪತ್ನಿ ಉಷಾಗೆ ಐಟಿ ಕೇಳಿದ ಪ್ರಶ್ನೆಗಳು ಏನು?
ಸಿಎಂ ಸಿದ್ದರಾಮಯ್ಯ ಅವರ ಆರೋಪ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿ, ನಾವು ಯಾರಿಗೂ ಆಹ್ವಾನವನ್ನು ನೀಡಿಲ್ಲ. ಸಿಎಂ ಗೊಂದಲ ಹೇಳಿಕೆಗಳನ್ನು ನೀಡುವ ಮೂಲಕ ಜನರ ದಿಕ್ಕು ತಪ್ಪಿಸುವ ಪ್ರಯತ್ನವನ್ನು ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.
ಇಂಧನ ಸಚಿವ ಡಿಕೆ ಶಿವಕುಮಾರ್ ಕುಟುಂಬದವರನ್ನು ಸೋಮವಾರ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ವಿಚಾರಣೆ ನಡೆಸಿ ಪ್ರಶ್ನೆ ಕೇಳಿದ್ದರು. ತಾಯಿ ಗೌರಮ್ಮ, ಪತ್ನಿ ಉಷಾ, ಪುತ್ರಿ ಐಶ್ವರ್ಯ ಮಧ್ಯಾಹ್ನ ಕ್ವೀನ್ಸ್ ರಸ್ತೆಯಲ್ಲಿರುವ ಕಚೇರಿಯಲ್ಲಿ ಪ್ರತ್ಯೇಕವಾಗಿ ವಿಚಾರಣೆಗೆ ಹಾಜರಾಗಿ ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸಿದ್ದಾರೆ.
ಇದನ್ನೂ ಓದಿ: ನಾನು ತೆರೆದ ಪುಸ್ತಕ, ಯಾವುದಕ್ಕೂ ಭಯಪಡಲ್ಲ: ಡಿಕೆ ಶಿವಕುಮಾರ್
ಇದನ್ನೂ ಓದಿ: Exclusive: ಡಿಕೆ ಶಿವಕುಮಾರ್ ತಾಯಿ ಗೌರಮ್ಮಗೆ ಐಟಿ ಕೇಳಿದ ಪ್ರಶ್ನೆಗಳು ಏನು..?
ಇದನ್ನೂ ಓದಿ: ಡಿಕೆಶಿ ಮೇಲೆ ಐಟಿ ದಾಳಿಗೆ ಪ್ಲ್ಯಾನ್ ನಡೆದಿದ್ದು ಹೀಗೆ