Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸದ್ಯದಲ್ಲೇ ಬಿಜೆಪಿಯೊಂದಿಗೆ ಜೆಡಿಎಸ್‌ ವಿಲೀನ – ಡಿಕೆಶಿ ಹೊಸ ಬಾಂಬ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸದ್ಯದಲ್ಲೇ ಬಿಜೆಪಿಯೊಂದಿಗೆ ಜೆಡಿಎಸ್‌ ವಿಲೀನ – ಡಿಕೆಶಿ ಹೊಸ ಬಾಂಬ್‌

Bengaluru City

ಸದ್ಯದಲ್ಲೇ ಬಿಜೆಪಿಯೊಂದಿಗೆ ಜೆಡಿಎಸ್‌ ವಿಲೀನ – ಡಿಕೆಶಿ ಹೊಸ ಬಾಂಬ್‌

Public TV
Last updated: January 8, 2026 2:12 pm
Public TV
Share
4 Min Read
DK Dhivakumar 2
SHARE

– ಕುಮಾರಸ್ವಾಮಿಯಿಂದ ಕಲಿಯೋ ಅಗತ್ಯ ನನಗಿಲ್ಲ ಎಂದ ಡಿಸಿಎಂ

ಬೆಂಗಳೂರು: ರಾಜಕೀಯದಲ್ಲಿ ಕುಮಾರಸ್ವಾಮಿ (HD Kumaraswamy) ಅವರಿಗಿಂತ ಹೆಚ್ಚಿನ ಅನುಭವ ಇದೆ. ನಾನು ಸಿಎಂ ಆಗದೇ ಇರಬಹುದು. ಆದರೆ ಆಡಳಿತ ವಿಚಾರದಲ್ಲಿ ಅವರಿಗಿಂತ ಅನುಭವ ಹೊಂದಿದ್ದೇನೆ. ಅವರಿಂದ ಕಲಿಯುವ ಅಗತ್ಯ ನನಗಿಲ್ಲ ಎಂದು ಡಿಸಿಎಂ ಡಿಕೆಶಿ (DK Shivakumar) ತಿರುಗೇಟು ನೀಡಿದರು.

ಕೆಪಿಸಿಸಿ ಕಚೇರಿಯಲ್ಲಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮುಖಂಡ (JDS Leader) ಗೋವಿಂದರಾಜ್ ಅವರ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಇದೇ ವೇಳೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಜೊತೆ ನಡೆಸಿದ ಸಭೆಗೆ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿರುವ ಬಗ್ಗೆ ಮಾತನಾಡಿದ್ರು. ನಾನು ಬಹಳ ಕಾಲ ಸಚಿವನಾಗಿ ಕೆಲಸ ಮಾಡಿದ್ದೇನೆ. ಆಡಳಿತ ಹೇಗೆ ಮಾಡಬೇಕು? ಯಾರ ಜೊತೆ ಸಭೆ ಮಾಡಬೇಕು? ಮಾಡಬಾರದು ಎಂಬುದು ನನಗೆ ಚೆನ್ನಾಗಿ ಗೊತ್ತಿದೆ ಎಂದು ಕುಟುಕಿದರು.

ಕಾಂಗ್ರೆಸ್‌ ಶಕ್ತಿ – ದೇಶದ ಶಕ್ತಿ!

ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗವಹಿಸಿದೆ. ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಜೆಡಿಎಸ್‌ ಪಕ್ಷದ ನೂರಾರು ಮುಖಂಡರು ಹಾಗೂ ಕಾರ್ಯಕರ್ತರಿಗೆ ಆತ್ಮೀಯವಾಗಿ ಸ್ವಾಗತಿಸಿ, ಪಕ್ಷದ ಸಂಘಟನೆಗೆ ಒಗ್ಗಟ್ಟಾಗಿ ಕೆಲಸ ಮಾಡುವಂತೆ ತಿಳಿಸಿದೆ. pic.twitter.com/PT8BcVJKJu

— DK Shivakumar (@DKShivakumar) January 8, 2026

ಜೆಡಿಎಸ್, ಬಿಜೆಪಿ ಜೊತೆ ವಿಲೀನ ಸಾಧ್ಯತೆ
ಕುಮಾರಸ್ವಾಮಿ ಅವರ ಧೋರಣೆ ನೋಡುತ್ತಿದ್ದರೆ, ಸದ್ಯದಲ್ಲೇ ಜೆಡಿಎಸ್ ಪಕ್ಷ ಬಿಜೆಪಿ (BJP) ಜೊತೆ ವಿಲೀನವಾಗುವ ಸಾಧ್ಯತೆ ಇದೆ. ವಿಲೀನವಾದರೆ ನಮಗೂ ಒಳ್ಳೆಯದೇ. ನಾವೂ ನೇರವಾಗಿ ಬಿಜೆಪಿ ಜೊತೆ ಹೋರಾಟ ಮಾಡಬಹುದು. ಆಗ ಆಟಕ್ಕೆ ಮೂರು ಪಕ್ಷ, ಲೆಕ್ಕಕ್ಕೆ ಮಾತ್ರ 2 ಪಕ್ಷ ಎಂಬ ಗೊಂದಲ ಇರುವುದಿಲ್ಲ ಎಂದು ವ್ಯಂಗ್ಯವಾಡಿದರು.

ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿರುವ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮಾಜಿ ಕಾರ್ಪೊರೇಟರ್ ಗೋವಿಂದರಾಜ್ ಹಾಗೂ ಅವರ ಧರ್ಮಪತ್ನಿ ಗೌರಮ್ಮ, ಚಂದ್ರಶೇಖರ್, ಜೆಡಿಎಸ್ ಅಧ್ಯಕ್ಷರಾಗಿದ್ದ ಡೇವಿಡ್ ಸೇರಿದಂತೆ ನೂರಾರು ಮುಖಂಡರನ್ನ ಸ್ವಾಗತಿಸುತ್ತೇನೆ. ಗೋವಿಂದರಾಜು ಅವರು ಕುಟುಂಬ ಸ್ನೇಹಿತರು, ನನಗೆ ಮೊದಲಿನಿಂದಲೂ ಪರಿಚಯಸ್ಥರು. ಅವರು ಜೆಡಿಎಸ್ ಪಕ್ಷ ಸಂಘಟಿಸಿ ಅಭ್ಯರ್ಥಿಯೂ ಆಗಿದ್ದರು. ಆದರೆ ಈಗ ಬಿಜೆಪಿ ಹಾಗೂ ಜೆಡಿಎಸ್ ಮಾಡಿಕೊಂಡಿರುವ ಹೊಂದಾಣಿಕೆ ಒಪ್ಪಿಕೊಳ್ಳಲು ಸಾಧ್ಯವಾಗದೇ ಇಂದು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ ಎಂದರು.

ನಮ್ಮದು ಜಾತ್ಯಾತೀತ ಸಿದ್ಧಾಂತ. ಹೀಗಾಗಿ ಜಮೀರ್ ಅಹ್ಮದ್ ಖಾನ್ ಅವರ ಮುಖಂಡತ್ವದಲ್ಲಿ ಕಾಂಗ್ರೆಸ್ ಪಕ್ಷದ ಜೊತೆ ಗುರುತಿಸಿಕೊಳ್ಳಲು ಅವರು ಈ ತೀರ್ಮಾನಕ್ಕೆ ಬಂದಿದ್ದಾರೆ. ಬಿಜೆಪಿ, ಜೆಡಿಎಸ್ ಬೇಗ ವಿಲೀನವಾದಷ್ಟೂ ನಮಗೇ ಒಳ್ಳೆಯದು. ಅವರು ಬೇಗ ತೀರ್ಮಾನ ಮಾಡಿದರೆ ನಾವು ನಮ್ಮ ತೀರ್ಮಾನ ಮಾಡಿಕೊಳ್ಳಬಹುದು. ಈಗ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಆಡುತ್ತಿದ್ದಾರೆ ಎಂದು ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ನಾಯಕರೇ ಹೇಳುತ್ತಿದ್ದಾರೆ ಎಂದರು.

DK Dhivakumar

ಅನೇಕ ಕ್ಷೇತ್ರಗಳಲ್ಲಿ ಬಹಳ ಗೊಂದಲಗಳಿವೆ. ನಮ್ಮ ಭವಿಷ್ಯ ಏನು ಎಂಬ ಪ್ರಶ್ನೆಯಲ್ಲಿದ್ದಾರೆ. ಬೆಂಗಳೂರು ನಗರದಲ್ಲಿ ಚುನಾವಣೆ ಸಮೀಪಿಸುತ್ತಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಅನೇಕರು ಉತ್ಸುಕರಾಗಿದ್ದಾರೆ. ಬೆಂಗಳೂರು ಪಶ್ಚಿಮ ಪಾಲಿಕೆಯಲ್ಲಿ 247, ಬೆಂಗಳೂರು ಉತ್ತರದಲ್ಲಿ 199, ಬೆಂಗಳೂರು ದಕ್ಷಿಣದಲ್ಲಿ 129, ಬೆಂಗಳೂರು ಕೇಂದ್ರದಲ್ಲಿ 106, ಬೆಂಗಳೂರು ಪೂರ್ವದಲ್ಲಿ 78 ಅರ್ಜಿಗಳನ್ನ ತೆಗೆದುಕೊಳ್ಳಲಾಗಿದೆ. ಒಟ್ಟು 779 ಟಿಕೆಟ್ ಆಕಾಂಕ್ಷಿಗಳು ನಮ್ಮ ಅರ್ಜಿ ಸ್ವೀಕರಿಸಿದ್ದಾರೆ. ಅರ್ಜಿ ತೆಗೆದುಕೊಂಡವರು ಕೊನೇ ದಿನದವರೆಗೂ ಕಾಯಬೇಡಿ. 2-3 ದಿನಗಳಲ್ಲೇ ಸಲ್ಲಿಕೆ ಮಾಡಿ. ನಾವು ಕೂಡ ಪಕ್ಷದ ಅಭ್ಯರ್ಥಿ ಆಯ್ಕೆಗೆ ವಿಮರ್ಷೆ ಮಾಡಬೇಕಿದೆ. ಕೊನೇ ಘಳಿಗೆಯಲ್ಲಿ ಸಲ್ಲಿಕೆಯಾದರೆ ವಿಮರ್ಷೆ ಮಾಡುವುದು ಕಷ್ಟವಾಗುತ್ತದೆ. ಜ.10 ರ ಒಳಗಾಗಿ ಅರ್ಜಿ ಕೊಟ್ಟರೆ ನಾವು ನಮ್ಮ ತಂಡವನ್ನು ಕಳುಹಿಸಿ ವರದಿ ಪಡೆಯಬಹುದು. ಯಾರು ವಾರ್ಡ್ ಗಳಲ್ಲಿ ಕೆಲಸ ಮಾಡಿದ್ದಾರೆ, ಯಾರು ಮಾಡಿಲ್ಲ, ಯಾರು ಪಕ್ಷಕ್ಕೆ ನಿಷ್ಠರಾಗಿದ್ದಾರೆ ಎಂದು ಪರಿಶೀಲನೆ ಮಾಡಬಹುದು” ಎಂದು ತಿಳಿಸಿದರು.

ಸರ್ಕಾರದ ಕೆಲಸಕ್ಕೆ ಬಿಜೆಪಿ ನಾಯಕರಿಂದಲೇ ಸ್ವಾಗತ
ಬೆಂಗಳೂರು ನಗರದಲ್ಲಿ ನಮ್ಮ ಸರ್ಕಾರ ಮಾಡುತ್ತಿರುವ ಕೆಲಸವನ್ನು ಬಿಜೆಪಿ ನಾಯಕರೇ ಸ್ವಾಗತಿಸುತ್ತಿದ್ದಾರೆ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲಾಗಿದೆ, ರಸ್ತೆಗಳನ್ನು ನಿರ್ಮಿಸಲಾಗುತ್ತಿದೆ. ಖಾತಾ ಪರಿವರ್ತನೆ, ಆಸ್ತಿ ದಾಖಲೆಗಳನ್ನು ಸರಿಪಡಿಸುತ್ತಿರುವುದನ್ನು ನೋಡಿದರೆ, ನಮಗೆ ಭವಿಷ್ಯವಿಲ್ಲ ಎಂದು ಬಿಜೆಪಿ ನಾಯಕರೇ ನಮ್ಮ ಬಳಿ ಹೇಳಿಕೊಂಡಿದ್ದಾರೆ. ಹೀಗಾಗಿ ತಮ್ಮ ಅಸ್ಥಿತ್ವ ಉಳಿಸಿಕೊಳ್ಳಲು ಮೊನ್ನೆ ದಳದವರು ನಾವು ಫ್ರೆಂಡ್ಲಿ ಫೈಟ್ ಮಾಡುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ. ದಯವಿಟ್ಟು ಫ್ರೆಂಡ್ಲಿ ಫೈಟ್ ಬೇಡ, ನೇರವಾಗಿ ಹೋರಾಟ ಮಾಡಿ. ನೀವು ಒಟ್ಟಾಗಿ ಸೀಟು ಹಂಚಿಕೊಂಡು ಹೋರಾಟ ಮಾಡಿ. ನಿಮ್ಮ ಫ್ರೆಂಡ್ಲಿ ಫೈಟ್ ನಿಂದ ನಿಮ್ಮ ಕಾರ್ಯಕರ್ತರಿಗೆ ಗೊಂದಲವಾಗುತ್ತದೆ. ನೇರವಾಗಿ ಹೋರಾಟ ಮಾಡಲು ನಾವು ಸಿದ್ಧವಿದ್ದೇವೆ ಎಂದು ಸವಾಲು ಹಾಕಿದರು.

ಬೆಂಗಳೂರಿನ ಆಡಳಿತ ಸರಿಪಡಿಸಲು 5 ಪಾಲಿಕೆಯಾಗಿ ವಿಂಗಡಿಸಿರುವ ನಮ್ಮ ತೀರ್ಮಾನವನ್ನು ಇಡೀ ದೇಶ ನೋಡುತ್ತಿದೆ. ಚಾಮರಾಜಪೇಟೆ, ಬಹಳ ಇತಿಹಾಸವಿರುವ ಕ್ಷೇತ್ರ. ನಾವು ಎಲ್ಲರನ್ನು ಸಮಾನವಾಗಿ ತೆಗೆದುಕೊಂಡು ಹೋಗುವ ಕೆಲಸ ಮಾಡುತ್ತಿದ್ದೇವೆ. ಇನ್ನು ಅನೇಕ ಕ್ಷೇತ್ರಗಳಲ್ಲಿ ಪಕ್ಷ ಸೇರ್ಪಡೆಯಾಗಲು ಬಯಸಿರುವವರು ನಮ್ಮ ಸಂಪರ್ಕದಲ್ಲಿ ಇದ್ದಾರೆ. ಆದಷ್ಟು ಬೇಗ ಪಾಲಿಕೆ ಚುನಾವಣೆ ಒಳಗೆ ಸೇರ್ಪಡೆ ಮಾಡಿಕೊಳ್ಳಲಾಗುವುದು. ತಡವಾಗಿ ಬಂದರೆ ತೀರ್ಮಾನ ಮಾಡುವುದು ಕಷ್ಟವಾಗುತ್ತದೆ. ಹೀಗಾಗಿ ಆದಷ್ಟು ಬೇಗ ತೀರ್ಮಾನ ಮಾಡಿ ಎಂದರು.

ಇದು ಚುನಾವಣಾ ವರ್ಷ
ರಾಜಕಾರಣದಲ್ಲಿ ಗೆಲುವು ಸೋಲು ಇದ್ದೇ ಇರುತ್ತದೆ. ಆದರೆ ನಾವು ಗೆಲ್ಲುತ್ತೀವೋ, ಸೋಲುತ್ತೀವೋ. ಆದರೆ ಪಾಲಿಕೆ ಚುನಾವಣೆ ಮಾಡುವ ಬಗ್ಗೆ ಸರ್ಕಾರ ಈಗಾಗಲೇ ನ್ಯಾಯಾಲಯದಲ್ಲಿ ಅಫಿಡವಿಟ್ ಸಲ್ಲಿಸಿದೆ. ಇದರ ಜೊತೆಗೆ ಈ ವರ್ಷವನ್ನ ಚುನಾವಣಾ ವರ್ಷ ಎಂದು ಪರಿಗಣಿಸಲಾಗಿದ್ದು, ಈ ವರ್ಷವೇ ಇತರೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುವುದು. ಈ ಬಗ್ಗೆ ಸಿಎಂ ಗ್ರಾಮೀಣಾಭಿವೃದ್ಧಿ ಸಚಿವರ ಜೊತೆ ಚರ್ಚಿಸಿ ಇರುವ ಕಾನೂನು ಅಡೆತಡೆ ನಿವಾರಣೆಗೆ ತೀರ್ಮಾನಿಸಿದ್ದಾರೆ. ಹೀಗಾಗಿ ಕಾರ್ಯಕರ್ತರು ಚುನಾವಣೆಗೆ ಸಿದ್ಧರಾಗಬೇಕು ಎಂದು ತಿಳಿಸಿದ್ದಾರೆ.

ಜೆಡಿಎಸ್‌ ವೈಯಕ್ತಿಕ ಆಸ್ತಿ
ಪಕ್ಷಕ್ಕೆ ಬರುವುದು, ವಾಪಸ್ ಹೋಗುವುದು ಮಾಡಬೇಡಿ. ಜೆಡಿಎಸ್ ಪಕ್ಷವನ್ನು ಅವರು ತಮ್ಮ ವೈಯಕ್ತಿಕ ಆಸ್ತಿಯಂತೆ ಮಾಡಿಕೊಂಡಿದ್ದಾರೆ. ಜೆಡಿಎಸ್ ಪಕ್ಷಕ್ಕೆ ಒಂದು ಸಿದ್ಧಾಂತ, ನೀತಿ ಇಲ್ಲ. ನೀವು ಬಂದ ಮೇಲೆ ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಿ, ಜನರ ಸೇವೆ ಮಾಡಿ. ನಿಮ್ಮ ಸರ್ಕಾರ ಆಡಳಿತದಲ್ಲಿದ್ದು, ಇದನ್ನು ಉಪಯೋಗಿಸಿಕೊಳ್ಳಿ ಎಂದು ತಿಳಿಸಿದರು.

TAGGED:bengalurubjpcongressDK Shivakumarhd kumaraswamyjdsಕಾಂಗ್ರೆಸ್ಜೆಡಿಎಸ್ಡಿಕೆ ಶಿವಕುಮಾರ್ಬಿಜೆಪಿಬೆಂಗಳೂರುಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Shirin Sharmin Chaudhury
Latest

ಬಾಂಗ್ಲಾದ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Public TV
By Public TV
3 minutes ago
Iran Power Plants
Latest

ಟ್ರಂಪ್‌ಗೆ ಟೆನ್ಷನ್‌ ಕೊಟ್ಟ ಇರಾನ್‌ – ವಿದ್ಯುತ್‌ ಸ್ಥಾವರಗಳ ಸುತ್ತ ಮಾನವ ಸರಪಳಿ ನಿರ್ಮಿಸಲು ದೇಶದ ಯುವ ಸಮೂಹಕ್ಕೆ ಕರೆ

Public TV
By Public TV
19 minutes ago
Illicit Relations
Bengaluru City

ಅನೈತಿಕ ಸಂಬಂಧಕ್ಕೆ ಅಡ್ಡಿ – ಪ್ರೇಯಸಿಯ ಪತಿಯ ಹತ್ಯೆ

Public TV
By Public TV
38 minutes ago
Auto Gas
Bengaluru City

ಗ್ಯಾಸ್ ಅಭಾವದಿಂದ ನಲುಗಿದ ಆಟೋ ಚಾಲಕರು – ಸಚಿವ ಮುನಿಯಪ್ಪ ಮನೆಗೆ ಮುತ್ತಿಗೆ.. ಮನವಿ

Public TV
By Public TV
1 hour ago
America China AI
Latest

ಯುಎಸ್ ಸೇನೆ ಮಾಹಿತಿ ಇರಾನ್‌ಗೆ ಮಾರಿದ ಚೀನಾ: ಅಮೆರಿಕ

Public TV
By Public TV
1 hour ago
Tolll
Latest

ಏ.10 ರಿಂದ ಟೋಲ್‌ಗಳಲ್ಲಿ ನಗದು ಸ್ವೀಕಾರ ಸಂಪೂರ್ಣ ಬಂದ್‌!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?