ರಾಮನಗರ: ಮೇಕೆದಾಟು ಪಾದಯಾತ್ರೆ ಕೈಗೊಂಡಿರುವ ಉದ್ದೇಶ ನೀರಿಗಾಗಿ, ಎರಡೂವರೆ ಕೋಟಿ ಜನರು ಈ ನೀರಿನಿಂದಲೇ ಬದುಕುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ಕರ್ನಾಟಕ ಕಾಂಗ್ರೆಸ್ ಪಕ್ಷ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆಗೆ ಭಾನುವಾರ ಚಾಲನೆ ನೀಡಿದ್ದು, ಗಣ್ಯ ವ್ಯಕ್ತಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್ ಕರ್ನಾಟಕದಲ್ಲಿ 26 ಅಣೆಕಟ್ಟುಗಳಿವೆ. ಆ ಪೈಕಿ 20 ಅಣೆಕಟ್ಟುಗಳನ್ನು ಕಾಂಗ್ರೆಸ್ ಸರ್ಕಾರ ಕಟ್ಟಿಸಿದೆ ಎಂದು ತಿಳಿಸಿದರು.
ನಮ್ಮ ನಾಯಕರಲ್ಲಿ ಹೋರಾಟದ ಛಲ ರಕ್ತಗತವಾಗಿ ಬಂದಿದೆ. ಮಹಾತ್ಮಗಾಂಧಿ, ನೆಹರೂ, ಇಂದಿರಾಗಾAಧಿ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅಧ್ಯಕ್ಷರಾಗಿದ್ದರು. ಕಾಂಗ್ರೆಸ್ ಶಕ್ತಿಯೇ ದೇಶದ ಶಕ್ತಿ. ಕಾಂಗ್ರೆಸ್ ಶಕ್ತಿಯೇ ಇತಿಹಾಸ. ನಮ್ಮ ಹೋರಾಟ ಅಧಿಕಾರಕ್ಕಾಗಿ ಅಲ್ಲ, ಬಡಜನರಿಗಾಗಿ ಎಂದರು. ಇದನ್ನೂ ಓದಿ: ರೈತ ಗೀತೆ ಮೂಲಕ ಮೇಕೆದಾಟು ಪಾದಯಾತ್ರೆಗೆ ಕಾಂಗ್ರೆಸ್ ಚಾಲನೆ
ರಾಜ್ಯದ ಉದ್ದಗಲಕ್ಕೂ ಹೋರಾಟ ನಡೆಯುತ್ತಿದೆ. ಪಾದಯಾತ್ರೆಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ನಮ್ಮ ಗುರಿ ಮುಟ್ಟಲು ಜನತೆಯ ಆಶೀರ್ವಾದ ಬೇಕು. ನಮ್ಮ ನೀರು ನಮ್ಮ ಹಕ್ಕು. ಮೇಕೆದಾಟು ಹೋರಟಕ್ಕೆ ಜಯವಾಗಲಿ ಎಂದು ಡಿಕೆಶಿ ಹೇಳಿದರು. ಇದನ್ನೂ ಓದಿ: ಸರ್ಕಾರ ಜನರಿಗೆ ತಪ್ಪು ಮಾಹಿತಿ ನೀಡುತ್ತಿದೆ: ಸಿದ್ದರಾಮಯ್ಯ ಕಿಡಿ