ಬೆಂಗಳೂರು: ಬಿಜೆಪಿಗರು (BJP Leader) ಭ್ರಷ್ಟಾಚಾರದ ಪಿತಾಮಹರು. ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರ ಕಾಲದಲ್ಲಿ ಹಲವಾರು ನಿಗಮಗಳ ಸುಮಾರು 300 ಕೋಟಿ ರೂ. ಗಿಂತಲೂ ಹೆಚ್ಚು ಅಕ್ರಮ ನಡೆದಿದೆ. ಇದನ್ನು ನಾವು ಸದನದ ಮೂಲಕ ಜನರಿಗೆ ತಿಳಿಸುತ್ತೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಬಾಂಬ್ ಸಿಡಿಸಿದ್ದಾರೆ.
Advertisement
ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ (BJP Government) ಅವಧಿಯಲ್ಲಿ ಭೋವಿ ನಿಗಮದ 87 ಕೋಟಿ ರೂ., ಎಪಿಎಂಸಿಯ 47 ಕೋಟಿ ರೂ., 2019 ರಲ್ಲಿ ಅಂಗವಿಕಲ ಕಲ್ಯಾಣ ಇಲಾಖೆಯ 22 ಕೋಟಿ ರೂ., 2018ರ ಜೂನ್ನಲ್ಲಿ ಅಂಬೇಡ್ಕರ್ ನಿಗಮದ 5 ಕೋಟಿ ರೂ., ದೇವರಾಜ್ ಅರಸು ನಿಗಮದ 47 ಕೋಟಿ ರೂ., ಮಾಲಿನ್ಯ ನಿಯಂತ್ರಣ ಮಂಡಳಿಯ 10 ಕೋಟಿ ರೂ. ಹಾಗೂ ಕೆಐಡಿಬಿಯ ಹಣ ಸೇಲಂಗೆ ಅಕ್ರಮವಾಗಿ ವರ್ಗಾವಣೆಯಾಗಿದೆ ಎಂದು ಬಾಂಬ್ ಸಿಡಿಸಿದರು. ಇದನ್ನೂ ಓದಿ: Microsoft Outage: ದೇಶಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಅಲ್ಲೋಲ ಕಲ್ಲೋಲ; ಇದು ಸೈಬರ್ ದಾಳಿಯಲ್ಲ – ಕ್ರೌಡ್ಸ್ಟ್ರೈಕ್ ಸಿಇಒ ಸ್ಪಷ್ಟನೆ!
Advertisement
Advertisement
ಬಿಜೆಪಿಯ ಒಂದೊಂದು ಅಕ್ರಮಗಳನ್ನೂ ತನಿಖೆ ನಡೆಸುತ್ತೇವೆ. ಎಲ್ಲವೂ ದಾಖಲೆಯಲ್ಲಿ ಇರಬೇಕು ಅನ್ನೋ ಕಾರಣಕ್ಕೆ ಸದನದಲ್ಲಿ ಎಲ್ಲಾ ದಾಖಲೆಗಳನ್ನು ಬಯಲು ಮಾಡುತ್ತೇವೆ. ಅಕ್ರಮಗಳ ಹಿಂದಿರುವ ಮಂತ್ರಿ ಯಾರು? ಅಧ್ಯಕ್ಷರು ಯಾರು, ಮುಖ್ಯಮಂತ್ರಿ ಆಗಿದ್ದವರು ಯಾರು? ಎಲ್ಲವನ್ನೂ ಜನರಿಗೆ ತಿಳಿಸುತ್ತೇವೆ. ಸಿಎಂ ಹುದ್ದೆಗೆ 2,500 ಕೋಟಿ ರೂ. ಕೊಡಬೇಕು, ಮಂತ್ರಿ ಸ್ಥಾನಕ್ಕೆ 100 ಕೋಟಿ ರೂ. ಕೊಡಬೇಕು ಅನ್ನೋ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ಆರೋಪ, ಭೋವಿ ನಿಗಮದ ಅಕ್ರಮದ ಬಗ್ಗೆ ಗೂಳಿಹಟ್ಟಿ ಶೇಖರ್ ಮಾಡಿದ ಆರೋಪಗಳ ಮೇಲೆ ಏಕೆ ಬಿಜೆಪಿ ತನಿಖೆ ನಡೆಸಲಿಲ್ಲ ಎಲ್ಲವನ್ನೂ ಬಯಲಿಗೆಳೆಯುತ್ತೇನೆ ಎಂದು ಎಚ್ಚರಿಸಿದರು.
Advertisement
ಯಾವುದೇ ಭ್ರಷ್ಟಾಚಾರ ಪ್ರಕರಣದ ಮೇಲೆ ತನಿಖೆ ನಡೆಯುತ್ತಿದ್ದರೆ, ಆ ವಿಚಾರವನ್ನ ವಿಧಾನಸಭೆಯಲ್ಲಿ ಚರ್ಚೆ ನಡೆಸಲು ಅವಕಾಶವಿಲ್ಲ. ಆದರೆ ನಾವು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಬೆಲೆಕೊಟ್ಟು ಸದನದಲ್ಲಿ ಚರ್ಚೆ ಅವಕಾಶ ಮಾಡಿಕೊಟ್ಟಿದ್ದೇವೆ. ಅಕ್ರಮ ಎಸಗಿದ್ದರೆ ಯಾವುದೇ ಅಧಿಕಾರಿ, ಮಂತ್ರಿ, ಶಾಸಕ, ಯಾರೇ ಆಗಿರಲಿ ಅವರನ್ನು ರಕ್ಷಿಸುವ ಉದ್ದೇಶ ನಮಗಿಲ್ಲ ಎಂದು ವಿಪಕ್ಷಗಳಿಗೆ ತಿರುಗೇಟು ನೀಡಿದರು. ಇದನ್ನೂ ಓದಿ: ಕಾವೇರಿ ಕೊಳ್ಳದಲ್ಲಿ ಪ್ರವಾಹದ ಭೀತಿ; ಮಂಡ್ಯ ಜಿಲ್ಲಾಡಳಿತದಿಂದ ಸಹಾಯವಾಣಿ ಆರಂಭ
ವಾಲ್ಮೀಕಿ ನಿಗಮದ 89 ಕೋಟಿ ರೂ. ಹಣ ತೆಲಂಗಾಣಕ್ಕೆ ಅಕ್ರಮವಾಗಿ ವರ್ಗಾವಣೆಯಾದ ತನಿಖೆ ನಡೆಸಲು ಎಸ್ಐಟಿ ರಚನೆ ಮಾಡಿದ್ದೇವೆ. ತನಿಖಾ ತಂಡವು ಸುಮಾರು 36 ಕೋಟಿ ರೂ.ಗಳಷ್ಟು ಹಣವನ್ನ ವಶಕ್ಕೆ ಪಡೆದುಕೊಂಡಿದೆ. ಬ್ಯಾಂಕ್ ಅಧಿಕಾರಿ ಒಂದೇ ದಿನದಲ್ಲಿ ಕೋಟ್ಯಂತರ ರೂಪಾಯಿ ಸಾಲ ಮಂಜೂರು ಮಾಡಿದ್ದಾನೆ. ಇದಕ್ಕೆ ಕೇಂದ್ರ ಹಣಕಾಸು ಸಚಿವರನ್ನು ಹೊಣೆಗಾರರನ್ನಾಗಿ ಮಾಡಲು ಆಗುತ್ತದೆಯೇ? ನಾವು ಪ್ರತಿಪಕ್ಷಗಳಿಗೆ ಈ ವಿಚಾರವಾಗಿ ಉತ್ತರ ಕೊಡಬೇಕಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದೇಶದ ಪ್ರಪ್ರಥಮ ʻಗ್ರೀನ್ ಹೈಡ್ರೋಜನ್ ಎಲೆಕ್ಟ್ರೋಲೈಜರ್ ಗಿಗಾ ಫ್ಯಾಕ್ಟರಿʼ ದೊಡ್ಡಬಳ್ಳಾಪುರದಲ್ಲಿ ಉದ್ಘಾಟನೆ