ಬೆಂಗಳೂರು: ಸರ್ಕಾರದಲ್ಲಿ ಹಗರಣ (Scam) ಆಗಿದೆ ಅಂತ ಯಾರೂ ತಲೆ ತಗ್ಗಿಸಬೇಕಾಗಿಲ್ಲ. ಅಧಿಕಾರಿಗಳು ಇದರಲ್ಲಿ ಭಾಗಿಯಾಗಿದ್ದಾರೆ. ಅಧಿಕಾರಿಗಳ ತಪ್ಪಿನಿಂದಾಗಿ ಹೀಗಾಗಿದೆ. ಈ ಹಗರಣದಲ್ಲಿ ನಮ್ಮ ಶಾಸಕರ ಪಾತ್ರ ಇಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಕಾರ್ಯಕರ್ತರಿಗೆ ಧೈರ್ಯ ತುಂಬಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿಂದು ನಡೆದ\ ಬ್ಲಾಕ್ ಕಾಂಗ್ರೆಸ್ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಸಭೆಯಲ್ಲಿ ವಾಲ್ಮೀಕಿ ಹಾಗೂ ಮೂಡಾ ಹಗರಣ ವಿಚಾರ ಪ್ರತಿಧ್ವನಿಸಿತು. ಇದನ್ನೂ ಓದಿ: 24 ಗಂಟೆ ವಿದ್ಯುತ್ ಉಚಿತ, ಯುವಕರಿಗೆ ಉದ್ಯೋಗ ಖಚಿತ, ಮಹಿಳೆಯರಿಗೆ ಪ್ರತಿ ತಿಂಗಳು 1,000 ರೂ. – ʻಕೇಜ್ರಿವಾಲ್ ಕಿ ಗ್ಯಾರಂಟಿʼ ಘೋಷಣೆ!
ಈ ವೇಳೆ ಡಿಸಿಎಂ ಡಿಕೆಶಿ ಮಾತನಾಡಿ, ಸರ್ಕಾರದಲ್ಲಿ ಹಗರಣ ಆಗಿದೆ ಅಂತ ಯಾರೂ ತಲೆ ತಗ್ಗಿಸಬೇಕಾಗಿಲ್ಲ. ಅಧಿಕಾರಿಗಳು ಇದರಲ್ಲಿ ಭಾಗಿಯಾಗಿದ್ದಾರೆ. ಅಧಿಕಾರಿಗಳ ತಪ್ಪಿನಿಂದಾಗಿ ಹೀಗಾಗಿದೆ. ಈ ಹಗರಣದಲ್ಲಿ ನಮ್ಮ ಶಾಸಕರ ಪಾತ್ರ ಇಲ್ಲ. ನನ್ನ ಬಳಿ ಆಣೆ ಪ್ರಮಾಣ ಮಾಡಿ ಹೇಳಿದ್ದಾರೆ. ಯಾರೇ ತಪ್ಪು ಮಾಡಿದ್ದರೂ ಸುಮ್ಮನೆ ಬಿಡೋದಿಲ್ಲ. ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ತೇವೆ. ಹಗರಣ ಆಗಿದೆ ಅಂತ ಕಾರ್ಯಕರ್ತರು ತಲೆ ಕೆಡಿಸಿಕೊಳ್ಳಬೇಕಾದ ಅವಶ್ಯಕತೆ ಇಲ್ಲ ಎಂದು ಕಾರ್ಯಕರ್ತರಿಗೆ ಧೈರ್ಯ ತುಂಬಿದರು.
ಜಿಲ್ಲಾ ಕೇಂದ್ರಗಳಲ್ಲಿ ಪಕ್ಷದ ಕಚೇರಿಗಳಿರಬೇಕು:
ಮುಂದುರಿದು, ಜಿಲ್ಲಾ ಕೇಂದ್ರಗಳಲ್ಲಿ ಪಕ್ಷದ ಕಚೇರಿಗಳಿರಬೇಕು. ಸ್ವಂತ ಕಟ್ಟಡಗಳಿರುವಂತೆ ನೋಡಿಕೊಳ್ಳಬೇಕು. ಅದಕ್ಕೆ ಬೇಕಾದ ನೆರವು ಪಕ್ಷವೇ ಭರಿಸಲಿದೆ. ಬ್ಲಾಕ್ ಮಟ್ಟದಲ್ಲೂ ಕಚೇರಿಗಳಿರಬೇಕು. ಬಾಡಿಗೆ ಕಟ್ಟಡಗಳಲ್ಲಾದ್ರೂ ಕಚೇರಿ ಮಾಡಬೇಕು. ಬಗರ್ ಹುಕುಂ ಸಮಿತಿಗಳಲ್ಲಿ ಕಾರ್ತಕರ್ತರಿಗೆ ಅವಕಾಶ ನೀಡಬೇಕು ಎಂದು ಕಾರ್ಯಕರ್ತರಿಗೆ ಸೂಚಿಸಿದರು. ಇದನ್ನೂ ಓದಿ: `Public TV’ ಇಂಪ್ಯಾಕ್ಟ್: ಪ್ರವಾಹ ಪೀಡಿತ ಪ್ರದೇಶ ಕರಡಿಗೋಡು ಗ್ರಾಮಕ್ಕೆ ಸಚಿವ ಬೋಸರಾಜು ಭೇಟಿ
ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾರ್ಯಕರ್ತರು ಎಲ್ಲಾ ಕಮಿಟಿಗಳ ರಚನೆ ಮಾಡಬೇಕು. ಯಾವ ಶಾಸಕರು ಸಹ ತಮ್ಮ ಮನೆಗಳಲ್ಲಿ ಮೀಟಿಂಗ್ ಮಾಡಬಾರದು. ಕಾಂಗ್ರೆಸ್ ಕಚೇರಿ ಚಿಕ್ಕದಿದ್ದರೆ, ಕಲ್ಯಾಣ ಮಂಟಪದಲ್ಲಿ ಸಭೆ ಮಾಡಬೇಕು. ಶಾಸಕರ ಮನೆಯಲ್ಲಿ ಆಫೀಸ್ ನಡೆಸುವ ಹಾಗೆ ಆಗಬಾರದು. ನಾಮಿನೇಷನ್ ವಿಚಾರವಾಗಿ ಸೋಷಿಯಲ್ ಜಸ್ಟೀಸ್ ಇದೆ. ಆಸ್ಪತ್ರೆ, ಕೆಇಬಿ ಕಮಿಟಿ, ಸ್ಕೂಲ್ ಕಮಿಟಿ, ಆಶ್ರಮ ಕಮಿಟಿ ಅಂಬೇಡ್ಕರ್ ಕಮಿಟಿ ಇವೆಲ್ಲ ಸಮಿತಿಗಳು ಆಗಬೇಕು. ಸಾಮಾಜಿಕ ನ್ಯಾಯವನ್ನ ಗಮನದಲ್ಲಿ ಇಟ್ಟುಕೊಂಡು ಕೆಲಸ ಮಾಡುವಂತೆ ಹೇಳಿರುವುದಾಗಿ ತಿಳಿಸಿದರು. ಇದನ್ನೂ ಓದಿ: ಲೋಕಸಭಾ ಚುನಾವಣೆಗಾಗಿ ಬಿಬಿಎಂಪಿಯಲ್ಲಿ 2,000 ಕೋಟಿ ರೂ. ಟೆಂಡರ್ ಹಗರಣ – ಮಾಜಿ ಉಪಮೇಯರ್ ಹೊಸ ಬಾಂಬ್