ಬೆಂಗಳೂರು: ಇಲ್ಲಿನ ಫ್ರೀಡಂ ಪಾರ್ಕ್‌ನಲ್ಲಿ ನಿಗದಿಯಾಗಿದ್ದ ರಾಹುಲ್ ಗಾಂಧಿ (Rahul Gandhi) ನೇತೃತ್ವದ ಪ್ರತಿಭಟನಾ ರ‍್ಯಾಲಿ ಆಗಸ್ಟ್ 8ಕ್ಕೆ ಮುಂದೂಡಿಕೆಯಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ವಿರುದ್ಧ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತಗಳ್ಳತನ ಆರೋಪ ಮಾಡಿದ್ದರು. ಕೇಂದ್ರದ ಈ ಕ್ರಮ ವಿರೋಧಿಸಿ ಆಗಸ್ಟ್ 5ರಂದು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಿಗದಿಯಾಗಿತ್ತು. ಇದೇ ಸಮಯದಲ್ಲಿ ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈ ನಡುವೆ ಪ್ರತಿಭಟನಾ ರ‍್ಯಾಲಿ ಮುಂದೂಡಿರುವುದಾಗಿ ಡಿಸಿಎಂ ತಿಳಿಸಿದ್ದಾರೆ. ಇದನ್ನೂ ಓದಿ: ಯತ್ನಾಳ್ ವಿರುದ್ಧ ಮಾನನಷ್ಟ ಮೊಕದ್ದಮೆ ಕೇಸ್; ಸಚಿವ ಶಿವಾನಂದ ಪಾಟೀಲ್‌ಗೆ ಸುಪ್ರೀಂ ಚಾಟಿ
ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ರಣದೀಪ್ ಸುರ್ಜೇವಾಲ ಮಾತನಾಡಿದರು, ಶಿಬು ಸೊರೇನ್ ಅವರ ಮರಣದ ಹಿನ್ನೆಲೆಯಲ್ಲಿ ನಾಳೆ ಅಂತ್ಯ ಸಂಸ್ಕಾರ ನಡೆಯಲಿದೆ. ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅದರಲ್ಲಿ ಭಾಗವಹಿಸಿದ್ದಾರೆ. ಆದ್ದರಿಂದ ನಾಳೆಯ (ಆ.5) ಪ್ರತಿಭಟನೆ ಮುಂದೂಡಲಾಗಿದೆ. ಅದನ್ನ ಆ.8ಕ್ಕೆ ನಡೆಸಲು ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ರಷ್ಯಾದ ತೈಲ ಖರೀದಿ ಮೂಲಕ ಉಕ್ರೇನ್ ವಿರುದ್ಧದ ಯುದ್ಧಕ್ಕೆ ಭಾರತ ಫಂಡಿಂಗ್ – ಅಮೆರಿಕ
ಇನ್ನೂ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿ, ನಾಳೆ ಶಿಬು ಸೊರೇನ್ ಅಂತ್ಯಕ್ರಿಯೆಯಲ್ಲಿ ರಾಹುಲ್ ಗಾಂಧಿ ಭಾಗಿಯಾಗಲಿದ್ದಾರೆ. ಇಲ್ಲಿಗೆ ಬಂದು ಅಲ್ಲಿಗೆ ಹೋಗೋದು ಅಂತ ಮೊದಲು ಮಾತುಕತೆ ಆಗಿತ್ತು. ಆದ್ರೆ ಇದು ದೊಡ್ಡ ಸಂದೇಶ ಕೊಡುವ ದಿನ, ಆದ್ದರಿಂದ ಗಡಿಬಿಡಿ ತೀರ್ಮಾನ ಬೇಡ ಅಂತ ಪ್ರತಿಭಟನೆಯನ್ನು ಆಗಸ್ಟ್ 8ಕ್ಕೆ ಮುಂದೂಡಲಾಗಿದೆ. ಕೆಲವರಿಗೆಲ್ಲಾ ವರಮಹಾಲಕ್ಷ್ಮಿ ಹಬ್ಬ ಅಂತ ಇರುತ್ತದೆ. ಪಕ್ಷದ ಕಾರ್ಯಕ್ರಮದಲ್ಲಿ ಅದನ್ನೆಲ್ಲ ಲೆಕ್ಕದಲ್ಲಿ ಇಟ್ಟುಕೊಳ್ಳೋಕೆ ಆಗಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಮತಾಂತರ, ಮದುವೆ ಆಗಲು ನಿರಾಕರಿಸಿದ್ದಕ್ಕೆ ಹರಿಯಿತು ನೆತ್ತರು – ಹಿಂದೂ ಮಹಿಳೆಯ ಕ್ರೂರ ಹತ್ಯೆ