ಬೆಂಗಳೂರು: ಬಿಜೆಪಿಯಲ್ಲಿ (BJP) ಸ್ವಾಭಿಮಾನಕ್ಕೆ ಧಕ್ಕೆಯಾದವರೆಲ್ಲರೂ ಕಾಂಗ್ರೆಸ್ (Congress) ಪಕ್ಷಕ್ಕೆ ಬರುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ತಿಳಿಸಿದರು.
ಜಗದೀಶ್ ಶೆಟ್ಟರ್ (Jagadish Shettar) ಕಾಂಗ್ರೆಸ್‌ಗೆ ಸೇರ್ಪಡೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆತ್ಮಗೌರವ ಹಾಗೂ ಸ್ವಾಭಿಮಾನಕ್ಕಾಗಿ ಅನೇಕರು ಕಾಂಗ್ರೆಸ್ ಪಕ್ಷವನ್ನು ಸೇರುತ್ತಿದ್ದಾರೆ. ಈ ರಾಜ್ಯದಲ್ಲಿ ಬದಲಾವಣೆ ತರಲು ಬರುತ್ತಿದ್ದಾರೆ. ಅನೇಕರು ಬರುತ್ತಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಮಹಾರಾಷ್ಟ್ರ ಭೂಷಣ ಪ್ರಶಸ್ತಿ ಸಮಾರಂಭದಲ್ಲಿ ಬಿಸಿಲಿನ ತಾಪಕ್ಕೆ 11 ಮಂದಿ ಸಾವು
ಶೆಟ್ಟರ್ ಅವರು ಪಕ್ಷಕ್ಕೆ ಸೇರ್ಪಡೆಯಾಗಲು ಯಾವುದೇ ಕಂಡಿಷನ್ ಅನ್ನು ಹಾಕಿಲ್ಲ. ಬಿಜೆಪಿ ಲಿಂಗಾಯತರನ್ನು ಕಡೆಗಣಿಸುತ್ತಿದೆ. ಇಡೀ ಲಿಂಗಾಯತ ಸಮುದಾಯವೇ ಕಾಂಗ್ರೆಸ್ ಸೇರ್ಪಡೆಯಾಗುತ್ತದೆ. ಈ ಬಾರಿಯ ಚುನಾವಣೆಯಲ್ಲಿ 150 ಸೀಟ್ ಕಾಂಗ್ರೆಸ್‌ಗೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಸಹಸ್ರಾರು ಮಂದಿ ಸಮೇತ ಸಚಿವ ಸುಧಾಕರ್ ಇಂದು ನಾಮಪತ್ರ ಸಲ್ಲಿಕೆ – ನಾಮಿನೇಷನ್‌ಗೂ ಮುನ್ನ ಟೆಂಪಲ್ ರನ್