Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚನ್ನಪಟ್ಟಣದ ಅಭ್ಯರ್ಥಿ ನಾನೇ: ಡಿ.ಕೆ.ಶಿವಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಚನ್ನಪಟ್ಟಣದ ಅಭ್ಯರ್ಥಿ ನಾನೇ: ಡಿ.ಕೆ.ಶಿವಕುಮಾರ್

Bengaluru City

ಚನ್ನಪಟ್ಟಣದ ಅಭ್ಯರ್ಥಿ ನಾನೇ: ಡಿ.ಕೆ.ಶಿವಕುಮಾರ್

Public TV
Last updated: August 30, 2024 4:47 pm
Public TV
Share
3 Min Read
DK SHIVAKUMAR
SHARE

ಬೆಂಗಳೂರು: ಚನ್ನಪಟ್ಟಣದ ಅಭ್ಯರ್ಥಿ ನಾನೇ. ಕಾಂಗ್ರೆಸ್ (Congress) ಪಕ್ಷದಿಂದ ಯಾರೇ ಅಭ್ಯರ್ಥಿ ಆದರೂ ನನಗೆ ಮತ ಹಾಕಿದಂತೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಅವರು ಪುನರುಚ್ಚರಿಸಿದರು.

ಚನ್ನಪಟ್ಟಣ ಉಪ ಚುನಾವಣೆ ಸಂಬಂಧ ಬಿಜೆಪಿ (BJP), ಜೆಡಿಎಸ್ (JDS) ಪಕ್ಷಗಳು ಚರ್ಚೆ ನಡೆಸಿರುವ ಬಗ್ಗೆ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗೆ ಶುಕ್ರವಾರ ಉತ್ತರಿಸಿದರು.

ಬಿ ಫಾರಂ ಬರೆಯುವುದು, ಅದಕ್ಕೆ ಸಹಿ ಹಾಕುವುದು ನಾನು. ನಿಮ್ಮನ್ನು (ಮಾಧ್ಯಮದವರನ್ನು) ನಿಲ್ಲಿಸಿದರೂ ನನಗೆ ವೋಟು ಎಂದು ಹೇಳಿದರು. ಇದನ್ನೂ ಓದಿ: ವಿದ್ಯಾರ್ಥಿ ಭವನ ಹೋಟೆಲ್‌ನಲ್ಲಿ ಮಸಾಲೆ ದೋಸೆ ಸವಿದ ಬ್ಯಾಡ್ಮಿಂಟನ್ ದಂತಕಥೆ ಪ್ರಕಾಶ್ ಪಡುಕೋಣೆ

ಎರಡು ವಿರೋಧ ಪಕ್ಷಗಳು ಒಂದಾಗಿವೆ ಎಂದು ಕೇಳಿದಾಗ, ಎಷ್ಟಾದರೂ ಆಗಲಿ ನಮಗೆ ಅದು ಸಂಬಂಧವಿಲ್ಲ. ನಾವು ಜನಸೇವೆ ಮಾಡುತ್ತೇವೆ. ಮಿಕ್ಕಿದ್ದು ಜನರ ತೀರ್ಮಾನಕ್ಕೆ ಬಿಟ್ಟಿದ್ದು ಎಂದರು.

ಸಿ.ಪಿ.ಯೋಗೇಶ್ವರ್ ಅವರು ಬಂದರೆ ಪಕ್ಷಕ್ಕೆ ಆಹ್ವಾನ ಮಾಡುವಿರಾ ಎಂದು ಕೇಳಿದಾಗ, ನೀವುಗಳು (ಮಾಧ್ಯಮ) ಏಕೆ ಇದರ ಬಗ್ಗೆ ಮಾತನಾಡುತ್ತೀರಾ? ನಮ್ಮ ಬಳಿಗೆ ಯಾರೂ ಬಂದಿಲ್ಲ, ಚರ್ಚೆಯನ್ನೂ ಮಾಡಿಲ್ಲ. ಅವರು ಮೈತ್ರಿ ಮಾಡಿಕೊಂಡಿರುವಾಗ ಏಕೆ ಅವರ ಬಗ್ಗೆ ಮಾತನಾಡಬೇಕು. ಮೊದಲು ನಮ್ಮ ಪಕ್ಷದ ಬಗ್ಗೆ ಮಾತನಾಡುತ್ತೇನೆ ಎಂದರು.

ಟಿಕೆಟ್ ಸಿಗದಿದ್ದರೆ ಪಕ್ಷೇತರನಾಗಿ ಸ್ಪರ್ಧಿಸುತ್ತೇನೆ ಎನ್ನುವ ಸಿ.ಪಿ.ಯೋಗೇಶ್ವರ್ (CP Yogeshwar) ಹೇಳಿಕೆ ಬಗ್ಗೆ ಕೇಳಿದಾಗ, ನನಗೆ ನಿಮ್ಮ (ಮಾಧ್ಯಮ) ಮಾತಿನ ಮೇಲೆ ನಂಬಿಕೆ ಇಲ್ಲ ಎಂದು ಹೇಳಿದರು. ಇದನ್ನೂ ಓದಿ: ಜೆಡಿಎಸ್ ಕಾರ್ಯಾಧ್ಯಕ್ಷೆ ಎಂದು ಹೇಳಿ 8 ಮದುವೆಯಾಗಿ ಕೋಟಿ ಕೋಟಿ ವಂಚನೆ – ಖತರ್ನಾಕ್ ಲೇಡಿ ವಿರುದ್ಧ ಕೇಸ್

ಉಪಚುನಾವಣೆ ತಯಾರಿಗಾಗಿ ಚನ್ನಪಟ್ಟಣದಲ್ಲಿ ಉದ್ಯೋಗ ಮೇಳ ಮಾಡಲಾಗುತ್ತಿದೆಯೇ ಎಂಬ ಪ್ರಶ್ನೆಗೆ, ಸೇವೆ ಮಾಡಲು ನಮಗೆ ಅಧಿಕಾರ, ಅವಕಾಶ ನೀಡಿದ್ದಾರೆ. ನಾವು ನಮ್ಮ ಅಧಿಕಾರ ಬಳಸಿಕೊಂಡು ಜನರಿಗಾಗಿ ಯಾವ ರೀತಿ ಒಳ್ಳೆಯದು ಮಾಡಬೇಕು ಎಂಬುದು ನಮ್ಮ ಸರ್ಕಾರದ ಚಿಂತನೆ. ಗುರುವಾರ ಎತ್ತಿನಹೊಳೆ ಯೋಜನೆ ಪರೀಕ್ಷಾರ್ಥ ಕಾರ್ಯಾಚರಣೆ ವೀಕ್ಷಣೆಗೆ ಹೋಗಿದ್ದೆ. ಕೆಲವರು ಮೂಗು, ಬಾಯಿ, ಕಿವಿ ಕತ್ತರಿಸಿಕೊಳ್ಳುತ್ತೇನೆ ಎಂದು ಹೇಳುತ್ತಿದ್ದರು. ಆದರೆ ನಾನು ಏತ ಕಾಮಗಾರಿ ಪರೀಕ್ಷಾರ್ಥ ಕಾರ್ಯಾಚರಣೆ ಚಾಲನೆ ನೀಡಿದ್ದು, ಸದ್ಯದಲ್ಲೇ ಶುಭ ಮುಹೂರ್ತ ನೋಡಿ ಉದ್ಘಾಟನಾ ದಿನಾಂಕ ನಿಗದಿ ಮಾಡಲಿದ್ದೇವೆ. ಈ ಬಗ್ಗೆ ಸಿಎಂ ಜತೆ ಚರ್ಚೆ ಮಾಡಿದ್ದೇನೆ. ಇದು ನಮ್ಮ ಕೆಲಸದ ವೈಖರಿ ಎಂದರು.

ಅದೇ ರೀತಿ ಉದ್ಯೋಗ ಮೇಳ ಮೂಲಕ ನಮ್ಮ ಭಾಗದ ಯುವಕರಿಗೆ ಉದ್ಯೋಗ ಸಿಗುವಂತೆ ಮಾಡುತ್ತಿದ್ದೇವೆ. ನಾನು ಜಿಲ್ಲೆಗೆ ಹೋದಾಗಲೆಲ್ಲಾ ಕೆಲಸ ಕೊಡಿಸಿ ಎಂದು ಯುವಕರು ಅರ್ಜಿ ನೀಡುತ್ತಿದ್ದರು. ನಮಗೆ ಅರ್ಜಿ ಕೊಟ್ಟವರನ್ನು ಕರೆಸುತ್ತಿದ್ದೇವೆ. ಎಷ್ಟು ಜನರಿಗೆ ಉದ್ಯೋಗ ಸಿಗುತ್ತೋ ಸಿಗಲಿ. ನಾವು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ದುಬೈನಲ್ಲಿ ಕಾರು-ಲಾರಿ ಡಿಕ್ಕಿ: ಬೆಳಗಾವಿ ಮೂಲದ ಒಂದೇ ಕುಟುಂಬದ ನಾಲ್ವರ ಸಜೀವ ದಹನ

ರಾಜಭವನ ಚಲೋ ಬಗ್ಗೆ ಕೇಳಿದಾಗ, ಶನಿವಾರ ರಾಜ್ಯಪಾಲರು (Governor) ಭೇಟಿ ಮಾಡಲು ನಮಗೆ ಅವಕಾಶ ನೀಡಿದ್ದಾರೆ. ಇತ್ತೀಚೆಗೆ ನಡೆದ ನಿಶ್ಚಿತಾರ್ಥ (Engagement) ಕಾರ್ಯಕ್ರಮವೊಂದರಲ್ಲಿ ಅವರನ್ನು ಭೇಟಿ ಮಾಡಿದ್ದೆ. ಅವರು ಭೇಟಿಗೆ ಕಾಲಾವಕಾಶ ನೀಡಿದ್ದು, ನಾವು ನಮ್ಮ ಮನವಿ ಸಲ್ಲಿಸುತ್ತೇವೆ ಎಂದು ಹೇಳಿದರು.

ಯಡಿಯೂರಪ್ಪ (Yadiyurappa) ಅವರ ಮೇಲಿನ ಪೋಕ್ಸೋ ಕೇಸ್ ತೀರ್ಪಿನ ಕುರಿತು ಮಾತನಾಡಿ, ಅದು ನ್ಯಾಯಾಲಯದ ವಿಚಾರ. ನನಗೆ ಗೊತ್ತಿಲ್ಲ. ನ್ಯಾಯಾಲಯ ತೀರ್ಪು ನೀಡುವುದು ಗೊತ್ತು. ಅದು ಬಂದ ಮೇಲೆ ಮಾತನಾಡುತ್ತೇವೆ ಎಂದರು. ಇದನ್ನೂ ಓದಿ:  ಕಾಣೆಯಾಗಿದ್ದವಳು 3 ದಿನ ಬಾವಿಯಲ್ಲಿ – ಗದಗ ಮಹಿಳೆಯ ರೋಚಕ ಕಥೆ ಓದಿ

TAGGED:bengaluruDK Shivakumarಡಿ.ಕೆ.ಶಿವಕುಮಾರ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

Shakti Scheme Aadhar card
Bengaluru City

ಮಗಳ ಆಧಾರ್ ಬಳಸಿ ಅಮ್ಮ ಬಸ್‌ನಲ್ಲಿ ಉಚಿತ ಪ್ರಯಾಣ

Public TV
By Public TV
14 minutes ago
Ishan kishan and Suryakumar yadav
Cricket

ಪಾಕ್‌ ವಿರುದ್ಧ ವಿಶಿಷ್ಟ ಸಾಧನೆ ಬರೆದ ಭಾರತ

Public TV
By Public TV
24 minutes ago
Byrati Basavaraj 1
Bengaluru City

ಬಿಕ್ಲು ಶಿವ ಕೊಲೆ ಕೇಸ್‌ – ಶಾಸಕ ಬೈರತಿ ಬಸವರಾಜ್ 7 ದಿನ ಸಿಐಡಿ ಕಸ್ಟಡಿಗೆ

Public TV
By Public TV
1 hour ago
Chamarajanagar Hills
Chamarajanagar

ಬಿಳಿಗಿರಿರಂಗನ ಬೆಟ್ಟದಲ್ಲಿ ಅನುಮಾನಾಸ್ಪದವಾಗಿ ಹುಲಿ ಸಾವು

Public TV
By Public TV
1 hour ago
Ishan Kishan
Cricket

ಅಂದು ಅಭಿಷೇಕ್‌ ಇಂದು ಇಶಾನ್‌ ಕಿಶನ್‌ – ಅಫ್ರಿದಿಗೆ ಬಿಸಿ ಮುಟ್ಟಿಸಿದ ಓಪನರ್ಸ್‌

Public TV
By Public TV
1 hour ago
Kalaburagi
Districts

ಕಲಬುರಗಿ ಕೋಟೆಯೊಳಗಡೆ ಶಿವಲಿಂಗ ಪೂಜೆಗೆ ಮುಂದಾಗಿದ್ದ ಹಿಂದೂ ಕಾರ್ಯಕರ್ತರು ಪೊಲೀಸರ ವಶಕ್ಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?