Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಾವುದೇ ಸರ್ಕಾರ ಬಂದರೂ ಪೊಲೀಸರ ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬಾರದು: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಯಾವುದೇ ಸರ್ಕಾರ ಬಂದರೂ ಪೊಲೀಸರ ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬಾರದು: ಡಿಕೆಶಿ

Bengaluru City

ಯಾವುದೇ ಸರ್ಕಾರ ಬಂದರೂ ಪೊಲೀಸರ ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬಾರದು: ಡಿಕೆಶಿ

Public TV
Last updated: October 28, 2025 4:56 pm
Public TV
Share
4 Min Read
DK Shivakumar 1 7
SHARE

– ಯಾವುದೇ ಕಾರಣಕ್ಕೂ ರಾಜಕೀಯ ಹಿಂಬಾಲಕರಾಗಬೇಡಿ
– ಪೊಲೀಸರ ಯಶಸ್ಸಿನಲ್ಲೇ, ಸರ್ಕಾರದ ಯಶಸ್ಸು

ಬೆಂಗಳೂರು: ಯಾವುದೇ ಸರ್ಕಾರ ಬಂದರೂ ನಿಮ್ಮ ಆತ್ಮವಿಶ್ವಾಸ ಹಾಗೂ ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬಾರದು. ಒಂದು ವೇಳೆ ರಾಜಿ ಮಾಡಿಕೊಂಡರೆ ಸಂಪೂರ್ಣವಾಗಿ ವ್ಯವಸ್ಥೆ ಕುಸಿಯಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar), ಪೊಲೀಸ್ ಅಧಿಕಾರಿಗಳಿಗೆ ಕಿವಿಮಾತು ಹೇಳಿದ್ದಾರೆ.

DK Shivakumar 10

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮಂಗಳವಾರ ಪೊಲೀಸ್ ಸಿಬ್ಬಂದಿ ಪೀಕ್ ಕ್ಯಾಪ್ ಪರಿಚಯ ಮತ್ತು ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸಮಾಜ ಹಾಗೂ ಸರ್ಕಾರ ಪೊಲೀಸರ ಮೇಲೆ ಬಹಳ ವಿಶ್ವಾಸ ಇಟ್ಟಿರುತ್ತದೆ. ನೀವೇ ಸಮಾಜ ರಕ್ಷಕರು. ನಾವು ಅಧಿಕಾರಕ್ಕೆ ಬಂದು ಪ್ರಮಾಣ ವಚನ ಸ್ವೀಕಾರ ಮಾಡುವ ವೇಳೆ ನಾನು ಸ್ವಲ್ಪ ಖಾರವಾಗಿಯೇ ಮಾತನಾಡಿದ್ದೆ ಎಂದಿದ್ದಾರೆ.

ಇಂದು ನೀವೆಲ್ಲರೂ ನಿಮ್ಮ ಸಮವಸ್ತ್ರವನ್ನು ಶಿಸ್ತಿನಿಂದ ಧರಿಸಿ, ಆತ್ಮವಿಶ್ವಾಸದಲ್ಲಿ ಕೂತಿದ್ದೀರಿ. ಆದರೆ ಕಳೆದ ಸರ್ಕಾರದ ಅವಧಿಯಲ್ಲಿ ಆಯುಧಪೂಜೆ ಸಂದರ್ಭ ಕೆಲವರು ವಿಜಯಪುರ ಹಾಗೂ ಉಡುಪಿಯಲ್ಲಿ ಸಮವಸ್ತ್ರ ತೆಗೆದು ಕೇಸರಿ ವಸ್ತ್ರ ಧರಿಸಿದ್ದರು. ರಾಜಕೀಯ ಒತ್ತಡ ಅಥವಾ ಬೇರೆಯವರನ್ನು ಮೆಚ್ಚಿಸಲು ಈ ರೀತಿ ಮಾಡಿದರೆ ನಿಮ್ಮನ್ನು ನೀವು ಮಾರಿಕೊಂಡಂತೆ. ನಿಮ್ಮ ವ್ಯಕ್ತಿತ್ವ, ಇಲಾಖೆಗೆ ಇರುವ ಘನತೆ ನಾಶವಾಗುತ್ತದೆ. ನೀವುಗಳು ರಾಜಕೀಯ ಹಿಂಬಾಲಕರಾಗುತ್ತೀರಿ. ಆಗ ನಿಮ್ಮನ್ನು ಯಾರು ನಂಬುತ್ತಾರೆ? ಹೀಗಾಗಿ ಇಂತಹ ಪದ್ಧತಿಗೆ ನೀವು ಯಾವುದೇ ಕಾರಣಕ್ಕೂ ಅವಕಾಶ ಮಾಡಿಕೊಡಬೇಡಿ ಎಂದು ನುಡಿದಿದ್ದಾರೆ.

ಕರ್ನಾಟಕ ಪೊಲೀಸರಿಗೆ ಪೀಕ್‌ ಕ್ಯಾಪ್‌ ಮುಕುಟ

ಕರ್ನಾಟಕ ರಾಜ್ಯ ಪೊಲೀಸ್‌ ಸಿಬ್ಬಂದಿಯ ಪೀಕ್‌ ಕ್ಯಾಪ್‌ ವಿತರಣೆ ಹಾಗೂ ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ ಉದ್ಘಾಟನೆ ಮತ್ತು ಸನ್ಮಿತ್ರ ಕೈಪಿಡಿ ಬಿಡುಗಡೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಗೃಹಸಚಿವರಾದ ಜಿ.ಪರಮೇಶ್ವರ್‌ ಅವರೊಂದಿಗೆ ಭಾಗವಹಿಸಿದೆ. ಈ ವೇಳೆ ಹಳೇ ಕಾಲದ ಸ್ಲೋಚ್‌ ಹ್ಯಾಟ್… pic.twitter.com/0ZRV3snWzS

— DK Shivakumar (@DKShivakumar) October 28, 2025

ನಗರದ ಮನೆಗೆಲಸದವರ ನೋಂದಣಿ, ದಾಖಲೆ ಬಗ್ಗೆ ಗಮನ
ಫೋನ್ ಬಂದ ಬಳಿಕ ಸೈಬರ್ ಅಪರಾಧ ಹೆಚ್ಚಾಗಿವೆ. ಇದನ್ನು ಹತೋಟಿಗೆ ತರಲು, ಮೇಲಾಧಿಕಾರಿಗಳು ಮಾತ್ರವಲ್ಲ, ಕೆಳ ಹಂತದ ಅಧಿಕಾರಿಗಳು ತಯಾರಾಗಬೇಕು. ಬೆಂಗಳೂರು ನಗರ ಹಾಗೂ ಇತರೇ ನಗರ ಪ್ರದೇಶಗಳಲ್ಲಿ ಪ್ರತಿ ಮನೆಯಲ್ಲಿ ಮನೆಗೆಲಸದವರು, ಚಾಲಕರು, ಕಾವಲುಗಾರರ ನೋಂದಣಿ ಇಟ್ಟುಕೊಳ್ಳಬೇಕು. ಆಗ ಎಷ್ಟೋ ಮಟ್ಟಿಗೆ ಅಪರಾಧ ನಿಯಂತ್ರಣಕ್ಕೆ ಬರುತ್ತದೆ ಎಂದು ತಿಳಿಸಿದ್ದಾರೆ.

ನಮ್ಮ ನೆರೆ ಮನೆಯವರಾದ ಆದಿಕೇಶವಲು ಎಂಬುವವರ ಮನೆಯಲ್ಲಿ ಕಳ್ಳತನವಾಗಿ ಎಷ್ಟೋ ದಿನಗಳಾದರೂ ಅವರಿಗೆ ಗೊತ್ತಾಗಿರಲಿಲ್ಲ. ಆಭರಣ ಮಾರಾಟವಾಗಿ ಬೇರೆಯವರು ಧರಿಸಿದ್ದನ್ನು ನೋಡಿದ ಬಳಿಕ ಮನೆಯಲ್ಲಿ ಬಂದು ಹುಡುಕುತ್ತಾರೆ. ಮೂರು ವರ್ಷಗಳ ಬಳಿಕ ಕಳ್ಳತನವಾಗಿದೆ ಎಂದು ತಿಳಿಯಿತು. ಹೀಗಾಗಿ ನೀವು ಪ್ರತಿ ಮನೆಯಲ್ಲಿ ಕೆಲಸ ಮಾಡುವವರ ದಾಖಲೆ ಇಟ್ಟುಕೊಳ್ಳಿ. ಈ ಬಗ್ಗೆ ಆಲೋಚನೆ ಮಾಡಿ ಎಂದು ಸಲಹೆ ನೀಡಿದ್ದಾರೆ.

ಪೊಲೀಸರ ಯಶಸ್ಸಿನಲ್ಲೇ, ಸರ್ಕಾರದ ಯಶಸ್ಸು
ಪೊಲೀಸ್ ಅಧಿಕಾರಿಗಳಿಗೆ ಆತ್ಮವಿಶ್ವಾಸ ಮೂಡಿಸಲು ಐತಿಹಾಸಿಕ ತೀರ್ಮಾನ ಮಾಡಲಾಗಿದೆ. ನಿಮಗೆಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಗಡಿಯಲ್ಲಿ ಸೈನಿಕ, ಗಡಿಯೊಳಗೆ ಆರಕ್ಷಕ. ಇವರಿಬ್ಬರೂ ನಮ್ಮ ನಾಡಿಗೆ ರಕ್ಷಣೆ ನೀಡುತ್ತಿದ್ದಾರೆ ಎಂದು ನುಡಿದಿದ್ದಾರೆ.

ರಾಜ್ಯ ಪೊಲೀಸ್ ಇಲಾಖೆ ಎಂದರೆ ಬಹಳ ಗೌರವ ಪಡೆದಿದೆ. ನಾನು ಇತ್ತೀಚೆಗೆ ಹಿರಿಯ ವಕೀಲರು, ನ್ಯಾಯಾಧೀಶರನ್ನು ಭೇಟಿ ಮಾಡಿದಾಗ ನಮ್ಮ ರಾಜ್ಯದ ಅನೇಕ ಘಟನೆಗಳ ವಿಚಾರವಾಗಿ ಸರ್ಕಾರ ಎಸ್‌ಐಟಿ ರಚನೆ ಮಾಡಿ ಅವರು ತೆಗೆದುಕೊಂಡಿರುವ ನಿರ್ಧಾರ, ವರದಿ ಹಾಗೂ ನ್ಯಾಯಾಲಯ ಕೊಟ್ಟಿರುವ ತೀರ್ಪು ನೋಡಿ ಅವರು ಬಹಳ ಪ್ರಶಂಸೆ ವ್ಯಕ್ತಪಡಿಸಿದ್ದರು. ನಮ್ಮ ಪೊಲೀಸ್ ಅಧಿಕಾರಿಗಳು ಎಷ್ಟು ಸಮರ್ಥರಿದ್ದಾರೆ ಎಂಬುದಕ್ಕೆ ಇದೇ ಸಾಕ್ಷಿ. ನಾನು ಈ ಹಿಂದೆ ಮೈಸೂರು ಪರೇಡ್‌ಗೆ ಹೋಗಿದ್ದೆ. ನಿಮ್ಮ ಕಾರ್ಯಕ್ರಮದಲ್ಲಿ ಎಷ್ಟು ಸುಧಾರಣೆ ಕಂಡಿದೆ ಎಂದರೆ ರಾಷ್ಟ್ರಮಟ್ಟದ ಕಾರ್ಯಕ್ರಮಗಳ ರೀತಿ ನಡೆಯುತ್ತಿದೆ. ಪೊಲೀಸರ ಯಶಸ್ಸಿನಲ್ಲೇ, ನಾವು ಸರ್ಕಾರದ ಯಶಸ್ಸು ಕಾಣುತ್ತೇವೆ ಎಂದಿದ್ದಾರೆ.

ನಮ್ಮ ರಾಜ್ಯದ ಪೊಲೀಸ್ ಸಿಬ್ಬಂದಿ ಯಾವುದರಲ್ಲೂ ಕಡಿಮೆ ಇಲ್ಲ. 1988ರಲ್ಲಿ ನಾನು ವಿದ್ಯಾರ್ಥಿ ನಾಯಕನಾಗಿದ್ದಾಗ ವಿಶ್ವ ಯುವ ಸಮ್ಮೇಳನಕ್ಕೆ ಉತ್ತರ ಕೊರಿಯಾದ ಪ್ಯೋಂಗ್‌ಯಾಂಗ್‌ಗೆ ತೆರಳಿದ್ದೆ. ಆಗ ಅಲ್ಲಿನ ಪ್ರಮುಖ ವೃತ್ತವೊಂದರಲ್ಲಿ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಏಕಾಂಗಿಯಾಗಿ ಸಂಚಾರ ದಟ್ಟಣೆಯನ್ನು ನಿಭಾಯಿಸುತ್ತಿದ್ದರು. ನಾನು ಅವರ ಜೊತೆ ಮಾತನಾಡಿ ನಿಮಗೆ ಸಂಬಳ ಎಷ್ಟು ಎಂದು ಕೇಳಿದೆ. ಆಗ ಅವರು ಕೋಪಗೊಂಡು ನಾನು ದೇಶಕ್ಕಾಗಿ ಕೆಲಸ ಮಾಡುತ್ತಿದ್ದೇನೆ, ಸಂಬಳಕ್ಕಾಗಿ ಅಲ್ಲ ಎಂದು ಹೇಳಿದರು ಎಂದು ಮೆಲುಕು ಹಾಕಿದ್ದಾರೆ.

ಪರಮೇಶ್ವರ್ (Parameshwar) ಅವರು ಈ ಇಲಾಖೆಯ ಜವಾಬ್ದಾರಿ ತೆಗೆದುಕೊಂಡ ಬಳಿಕ ಹೊಸ ರೂಪ ನೀಡಿದ್ದು, ನನಗೆ ಬಹಳ ಸಂತೋಷವಿದೆ. ನಿಮ್ಮ ಹಿತಕ್ಕಾಗಿ ವಸತಿ ನಿಲಯ, ಸೇವೆ ವೇಳೆ ಮೃತರಾದರೆ ಪರಿಹಾರ, ಸನ್ಮಿತ್ರ ಕಾರ್ಯಕ್ರಮ ತರಲಾಗುತ್ತಿದೆ. ನಿಮಗೆ ನಿಮ್ಮ ಕುಟುಂಬಕ್ಕಾಗಿ ಅನೇಕ ಯೋಜನೆ ತರಲಾಗಿದೆ. ನಿಮ್ಮ ಮೇಲೆ ಸರ್ಕಾರಕ್ಕೆ ಅಪಾರ ವಿಶ್ವಾಸವಿದೆ. ನಿಮ್ಮ ಯಶಸ್ಸಿನಲ್ಲಿ ಸರ್ಕಾರದ ಯಶಸ್ಸು ಅಡಗಿದೆ. ಆಯುಕ್ತರಾದ ಸಲೀಂ ಅವರು ಸಂಚಾರ ದಟ್ಟಣೆ ವಿಚಾರವಾಗಿ ಬಹಳ ಅರಿವಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ (Bengaluru) 1.40 ಕೋಟಿ ಜನರಿದ್ದಾರೆ. 1.23 ಕೋಟಿ ವಾಹನಗಳಿವೆ. ನಾವು ಎಷ್ಟೇ ಪ್ರಯತ್ನಪಟ್ಟರೂ ಜನ ಸಾರ್ವಜನಿಕ ಸಾರಿಗೆಗಿಂತ ವೈಯಕ್ತಿಕ ಸಾರಿಗೆ ಮೇಲೆ ಆಸಕ್ತಿ ಹೊಂದಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ರಸ್ತೆ ಅಗಲೀಕರಣ ಕಷ್ಟವಾಗಿದೆ. ನಮ್ಮ ಸರ್ಕಾರ ಮೊದಲ ಬಾರಿಗೆ ದೊಡ್ಡ ಪ್ರಮಾಣದಲ್ಲಿ ಬಿಬಿಸಿ ರಸ್ತೆ, ಟನಲ್ ರಸ್ತೆ, ಎಲಿವೇಟೆಡ್ ಕಾರಿಡಾರ್, ಡಬಲ್ ಡೆಕ್ಕರ್ ಸೇರಿದಂತೆ ಅನೇಕ ಯೋಜನೆ ಹಮ್ಮಿಕೊಂಡಿದ್ದೇವೆ. ಸಂಚಾರ ದಟ್ಟಣೆ ನಿವಾರಣೆಗೆ ಇರುವ ಸಲಹೆಗಳನ್ನು ನೀವೇ ಸರ್ಕಾರಕ್ಕೆ ಸಲ್ಲಿಸಿ ಎಂದಿದ್ದಾರೆ.

TAGGED:bengaluruDK ShivakumarPeak Cappoliceಡಿಕೆ ಶಿವಕುಮಾರ್ಪೀಕ್‌ ಕ್ಯಾಪ್‌ಪೊಲೀಸ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
3 minutes ago
Ramesh Kumar
Districts

63 ಎಕ್ರೆ ಅರಣ್ಯ ಭೂಮಿ ಒತ್ತುವರಿ ಪ್ರಕರಣ – ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಹಿನ್ನಡೆ

Public TV
By Public TV
6 minutes ago
CRIME
Districts

ಸರ್ಕಾರಿ ಕಚೇರಿಯಲ್ಲಿ ದಲಿತ ಮಹಿಳೆಯ ವಿವಸ್ತ್ರಗೊಳಿಸಿ ವಿಕೃತಿ – 8 ಗಂಟೆ ನಿಲ್ಲಿಸಿದ್ದ ಅಧಿಕಾರಿಗಳ ವಿರುದ್ಧ ದೂರು

Public TV
By Public TV
24 minutes ago
ಸಾಂದರ್ಭಿಕ ಚಿತ್ರ
Bagalkot

ಇನ್ಮುಂದೆ ಬುಕ್‌ ಮಾಡಿದ ದಿನವೇ ಗೃಹ ಬಳಕೆ ಸಿಲಿಂಡರ್ ವಿತರಣೆ – ಗ್ಯಾಸ್ ಏಜೆನ್ಸಿಗಳಿಗೆ ಸೂಚನೆ

Public TV
By Public TV
38 minutes ago
MQ 4C Triton
Latest

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ 1,859 ಕೋಟಿ ಮೌಲ್ಯದ MQ-4C ಟ್ರೈಟಾನ್ ಡ್ರೋನ್ ನಾಪತ್ತೆ

Public TV
By Public TV
59 minutes ago
kalaburagi train
Kalaburagi

ಪಂಢರಪುರ-ತಿರುಪತಿ, ಬೆಂಗಳೂರು ಕಂಟೋನ್ಮೆಂಟ್-ಕಲಬುರಗಿ, SMVT ಬೆಂಗಳೂರು-ಬೀದರ್ ವಿಶೇಷ ರೈಲುಗಳ ಸೇವೆ ಮುಂದುವರಿಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?