– ರಾಮನಗರ ಹೆಸ್ರು ಬದಲಾವಣೆ ಮಾಡಿಯೇ ತೀರುತ್ತೇನೆ; ಡಿಸಿಎಂ ಶಪಥ
ಮೈಸೂರು: ಟೌನ್‌ಶಿಪ್ ಪಿತಾಮಹ ದೇವೇಗೌಡ (H D Devegowda) ಹಾಗೂ ಕುಮಾರಸ್ವಾಮಿ ಅವರು. ಯಾರು ಏನೇ ಹೇಳಿದ್ರು ಗ್ರೇಟರ್ ಬೆಂಗಳೂರು (Greater Bengaluru) ಮಾಡೇ ಮಾಡುತ್ತೇವೆ. ಬೆಂಗಳೂರಿಗಿಂತ (Bengaluru) ಚೆನ್ನಾಗಿ 10 ಸಾವಿರ ಎಕ್ರೆಯಲ್ಲಿ ಉತ್ತಮ ಸಿಟಿ ಮಾಡುತ್ತೇವೆ. ಇದು ಮಾಡೆಲ್ ಸಿಟಿ ಆಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D K Shivakumar) ಹೇಳಿದ್ದಾರೆ.
ಬಿಡದಿ ಟೌನ್‌ಶಿಪ್‌ಗೆ (Bidadi Township) ರೈತರ ಭೂಮಿ ಕೈಬಿಡುವಂತೆ ಸಿಎಂಗೆ ಮಾಜಿ ಪ್ರಧಾನಿ ದೇವೇಗೌಡ ಅವರು ಪತ್ರ ಬರೆದಿರುವ ವಿಚಾರವಾಗಿ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕುಮಾರಸ್ವಾಮಿ ಕಾಲದಲ್ಲೇ 7 ಟೌನ್‌ಶಿಪ್ ಮಾಡಬೇಕು ಎಂದು ತೀರ್ಮಾನ ಆಗಿತ್ತು. ಅದಕ್ಕಾಗಿ 300 ಕೋಟಿ ರೂ. ಹಣ ಕೊಟ್ಟಿದ್ದರು. ಟೌನ್‌ಶಿಪ್ ಪ್ಲಾನ್ ಅವರ ಕಾಲದಲ್ಲೇ ಆಗಿದ್ದು. ನಾನು ಡೈನೋಟಿಫಿಕೇಶ್ ಮಾಡಲು ಹೋಗಲ್ಲ ಎಂದರು. ಇದನ್ನೂ ಓದಿ: ಹಿಂದೂಗಳ ನರಮೇಧ ನಡೆಸಿದ ಉಗ್ರರಿಗೆ ತಕ್ಕ ಶಿಕ್ಷೆ – ಇಬ್ಬರು ಭಯೋತ್ಪಾದಕರ ಮನೆಗಳು ಬ್ಲಾಸ್ಟ್!
ಈ ಹಿಂದೆ ನನ್ನ ಮೇಲೆ ಏನೆಲ್ಲಾ ಹೇಳಿದ್ರು, ಅದೆಲ್ಲಾ ಇತಿಹಾಸ. ಟೌನ್‌ಶಿಪ್ ಪಿತಾಮಹ ದೇವೇಗೌಡ ಹಾಗೂ ಕುಮಾರಸ್ವಾಮಿ ಅವರು. ಯಾರು ಏನೇ ಹೇಳಿದ್ರು ಗ್ರೇಟರ್ ಬೆಂಗಳೂರು ಮಾಡೇ ಮಾಡುತ್ತೇವೆ. ಬೆಂಗಳೂರಿಗಿಂತ ಚೆನ್ನಾಗಿ 10 ಸಾವಿರ ಎಕ್ರೆಯಲ್ಲಿ ಉತ್ತಮ ಸಿಟಿ ಮಾಡುತ್ತೇವೆ. ಇದು ಮಾಡೆಲ್ ಸಿಟಿ ಆಗುತ್ತದೆ. ರೈತರು ಜಮೀನಿನ ಬದಲಾಗಿ ದುಡ್ಡು ತೆಗೆದುಕೊಳ್ಳಬಹುದು. ಇಲ್ಲದಿದ್ದರೆ ಅಭಿವೃದ್ದಿ ಪಡಿಸಿದ ಲ್ಯಾಂಡ್ ತೆಗೆದುಕೊಳ್ಳಬಹುದು ಎಂದು ಹೇಳಿದರು. ಇದನ್ನೂ ಓದಿ: ನಾನು ಒಂದು ಧರ್ಮದ ಪರ ಅಲ್ಲ: ಸಿದ್ದರಾಮಯ್ಯ
2 ಬಾರಿ ಕುಮಾರಸ್ವಾಮಿ ಸಿಎಂ ಆದ್ರೂ, ಯಾಕೆ ರೈತರ ಭೂಮಿ ಸ್ವಾಧೀನದಿಂದ ಕೈ ಬಿಡಲಿಲ್ಲ. ಈ ಬಗ್ಗೆ ದೇವೇಗೌಡರೇ ಹೇಳಲಿ. ಇದರಲ್ಲಿ ರಾಜಕೀಯ ಬೇಡ. ಇದೆಲ್ಲಾ ನಿಮ್ಮ ಮಗನೇ ಮಾಡಿದ್ದು, ನಿಮ್ಮ ಕಾಲದಲ್ಲೇ ಆಗಿದ್ದು ಎಂದು ಟಾಂಗ್ ಕೊಟ್ಟರು. ಇದನ್ನೂ ಓದಿ: ಉಗ್ರರ ದಾಳಿ ನಡೆದ ಪಹಲ್ಗಾಮ್‌ನಲ್ಲಿ ನಿಮ್ಮ ʻPublic TVʼ; ಬೈಸರನ್ ವ್ಯಾಲಿಯಿಂದ ಕನ್ನಡದ ಏಕೈಕ ಚಾನಲ್ ಪ್ರತ್ಯಕ್ಷ ವರದಿ..!
ರಾಮನಗರ ಹೆಸರು ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿ, ಅದನ್ನು ಹೇಗೆ ಮಾಡಬೇಕು ಅಂತಾ ನನಗೆ ಗೊತ್ತು. ಅದನ್ನು ಮಾಡೇ ಮಾಡುತ್ತೇನೆ. ನಾವೇನು ಹೊರಗಿನಿಂದ ಬಂದವರಲ್ಲ. ನಮ್ಮ ಭೂಮಿ ನಮ್ಮ ನೆಲದ ಬಗ್ಗೆ ನಮಗೆ ಗೊತ್ತು. ಯಾರು ಅಪ್ಪ ಅಮ್ಮನ ಹೆಸರು ಬದಲಾಯಿಸಲ್ಲ. ಅಫಿಡೆವಿಟ್ ಮಾಡಿಸಿಕೊಳ್ಳಬಹುದು ಅಷ್ಟೇ ಎಂದರು.