ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಟ್ರಬಲ್ ಶೂಟರ್ ಸಚಿವ ಡಿ.ಕೆ.ಶಿವಕುಮಾರ್ ತೆಲಂಗಾಣದ ವಿಧಾನಸಭಾ ಚುನಾವಣೆಯಲ್ಲಿಯೂ ತಮ್ಮ ತಂತ್ರಗಾರಿಕೆಯನ್ನು ಪ್ರಯೋಗಿಸಿದ್ದಾರೆ. ತೆಲಂಗಾಣದಲ್ಲಿ ವಿಧಾನಸಭೆ ಚುನಾವಣೆ ಘೋಷಣೆಯಾಗಿದ್ದು, ಆರಂಭದಲ್ಲಿಯೇ ಕಾಂಗ್ರೆಸ್ ಗೆ ಬಂಡಾಯದ ಬಿಸಿ ತಟ್ಟಿತ್ತು. ಈ ಹಿನ್ನೆಲೆಯಲ್ಲಿ ಬಂಡಾಯ ಶಮನಕ್ಕಾಗಿ ಹೈಕಮಾಂಡ್ ಡಿ.ಕೆ.ಶಿವಕುಮಾರ್ ಅವರನ್ನು ನೇಮಿಸಿತ್ತು.
ಅಭ್ಯರ್ಥಿಗಳಿಗೆ ಟಿಕೆಟ್ ಹಂಚಿಕೆ ಮಾಡಿದ ನಂತರ ತೆಲಂಗಾಣದ ಐದು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆ ಬಂಡಾಯದ ಬಿಸಿ ತಟ್ಟಿತ್ತು. ಹೀಗಾಗಿ ತೆಲಂಗಾಣಕ್ಕೆ ತೆರಳಿದ್ದ ಡಿ.ಕೆ.ಶಿವಕುಮಾರ್ ವಾರಂಗಲ್, ಸೆರಿಲಿಂಗಮ್ ಕ್ಷೇತ್ರದ ಬಂಡಾಯ ಶಮನಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಾರಂಗಲ್ ಕ್ಷೇತ್ರದಲ್ಲಿ ನಯಿನಿ ರಾಜ್ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು, ಇತ್ತ ಸೆರಿಲಿಂಗಮ್ ಪಲ್ಲಿ ಕ್ಷೇತ್ರದ ಭಿಕ್ಷಾಪತಿ ಅವರನ್ನು ಪಕ್ಷದಲ್ಲಿ ಉಳಿಸುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
Advertisement
Advertisement
ಗುರುವಾರ ತೆಲಂಗಾಣದಿಂದ ಬಂದಿರುವ ಡಿ.ಕೆ.ಶಿವಕುಮಾರ್ ಬೆಳಗಾವಿಯಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಇಂದು ಮಧ್ಯಾಹ್ನ ಮತ್ತೆ ತೆಲಂಗಾಣಕ್ಕೆ ತೆರಳಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆಯೂ ಡಿಕೆ ಶಿವಕುಮಾರ್ ಹಾಜರಾಗಲಿದ್ದಾರೆ. ಮೂರು ದಿನ ಬಿಟ್ಟು ತೆಲಂಗಾಣದಲ್ಲೇ ತಂಗಲಿರುವ ಶಿವಕುಮಾರ್ ಪ್ರಚಾರದ ಸಂಪೂರ್ಣ ಹೊಣೆ ಹೊರಲಿದ್ದಾರೆ ಎಂಬ ಮಾಹಿತಿಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿವೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv