ಬೆಂಗಳೂರು: ಕೊಯಮತ್ತೂರಿನ ಇಶಾ ಫೌಂಡೇಶನ್‌ನಲ್ಲಿ (Isha Foundation) ನಡೆಯುತ್ತಿರುವ ಶಿವರಾತ್ರಿ (Maha Shivratri) ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಜೊತೆ ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ವೇದಿಕೆ ಹಂಚಿಕೊಂಡಿದ್ದಕ್ಕೆ ಕಾಂಗ್ರೆಸ್‌ನಲ್ಲಿ ಅಪಸ್ವರ ವ್ಯಕ್ತವಾಗಿದೆ.
ಸೋಶಿಯಲ್ ಮೀಡಿಯಾದಲ್ಲಿ ಏನೇನೋ ಹಾಕುತ್ತಾರೆ ಎಂದು ಡಿಕೆಶಿ ಹೇಳಿಕೆ ಬೆನ್ನಲ್ಲೇ ಎಐಸಿಸಿ ಕಾರ್ಯದರ್ಶಿ ಕೇರಳದ ಮಾಜಿ ಉಸ್ತುವಾರಿ ಪಿ.ವಿ.ಮೋಹನ್ (PV Mohan) ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ. ಪಕ್ಷದ ತತ್ವ ಸಿದ್ದಾಂತ ಹಾಗೂ ರಾಹುಲ್ ಗಾಂಧಿ (Rahul Gandhi) ಅವರ ತತ್ವಕ್ಕೆ ವಿರುದ್ದವಾದ ನಡೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ವಿಶ್ವ ದಾಖಲೆಯೊಂದಿಗೆ ಅತಿದೊಡ್ಡ ಅಧ್ಯಾತ್ಮಿಕ ಮೇಳಕ್ಕೆ ವಿದ್ಯುಕ್ತ ತೆರೆ – 45 ದಿನದಲ್ಲಿ 65 ಕೋಟಿ ಭಕ್ತರ ಪುಣ್ಯಸ್ನಾನ
Advertisement
ಪೋಸ್ಟ್‌ನಲ್ಲಿ ಏನಿದೆ?
ನಮ್ಮ ನಾಯಕ ರಾಹುಲ್ ಗಾಂಧೀಜಿ ಅವರನ್ನು ಅಪಹಾಸ್ಯ ಮಾಡುವ, ಯಾವಾಗಲೂ ಆರ್‌ಎಸ್‌ಎಸ್‌ನ ನಿರೂಪಣೆಗಳೊಂದಿಗೆ ಹೊಂದಿಕೆಯಾಗುವ ವ್ಯಕ್ತಿಗೆ ಜಾತ್ಯತೀತ ಪಕ್ಷದ ಅಧ್ಯಕ್ಷನಾಗಿ ಮತ್ತು ಜಾತ್ಯತೀತ ಸರ್ಕಾರದ ಡಿಸಿಎಂ ಆಗಿ ಸಾರ್ವಜನಿಕವಾಗಿ ಧನ್ಯವಾದ ಹೇಳುವುದು ಮತ್ತು ಕೃತಜ್ಞತೆಯನ್ನು ವ್ಯಕ್ತಪಡಿಸುವುದು ಪಕ್ಷದ ಕಾರ್ಯಕರ್ತರಿಗೆ ತಪ್ಪು ಸಂದೇಶವನ್ನು ರವಾನಿಸುತ್ತದೆ.
Advertisement
ಪಕ್ಷದ ಪ್ರಗತಿ ಮತ್ತು ಬೆಳವಣಿಗೆಗೆ ರಾಜಿಯಾಗಬಾರದು. ದೃಢನಿಶ್ಚಯಕ್ಕೆ ಬದ್ಧತೆ ಬಹಳ ಮುಖ್ಯ, ಇದನ್ನು ನಿರ್ಲಕ್ಷಿಸಿದರೆ ಪಕ್ಷದ ಸೈದ್ಧಾಂತಿಕ ನೆಲೆ ದುರ್ಬಲಗೊಳ್ಳಬಹುದು. ಕಾರ್ಯಕ್ರಮಕ್ಕೆ ಆರ್‌ಎಸ್‌ಎಸ್ ಹಿನ್ನೆಲೆಯ ಹಲವಾರು ವ್ಯಕ್ತಿಗಳಿಗೆ ಆಹ್ವಾನ ನೀಡಿರುವುದು ಆತಂಕದ ವಿಚಾರ. ಈ ಕಾರ್ಯಕ್ರಮಕ್ಕೆ ಅಮಿತ್ ಶಾ ಅವರನ್ನೂ ಆಹ್ವಾನಿಸಲಾಗಿದೆ.
Advertisement
ನಮ್ಮ ಪಕ್ಷದ ಅಧ್ಯಕ್ಷರು ವೇದಿಕೆಯನ್ನು ಹಂಚಿಕೊಂಡು ಅಮಿತ್ ಶಾ ಅವರೊಂದಿಗೆ ಇಡೀ ರಾತ್ರಿ ಕಳೆಯುತ್ತಿದ್ದಾರೆ ಎನ್ನುವುನ್ನು ಗ್ರಹಿಸಲು ಕಷ್ಟವಾಗುತ್ತಿದೆ.
Advertisement