ಡಿಕೆಶಿಯವರು ಉಡಾಫೆ ಬಿಟ್ಟು ರಾಜ್ಯದ ಅಭಿವೃದ್ಧಿ ಕಡೆ ಗಮನ ಕೊಡಲಿ – ನಿಖಿಲ್ ಕುಮಾರಸ್ವಾಮಿ

Public TV
1 Min Read
Nikhil kumaraswamy dk shivakumar

ಬೆಂಗಳೂರು: ಡಿಕೆ ಶಿವಕುಮಾರ್ (DK Shivakumar) ಅವರು ಉಡಾಫೆ ಬಿಟ್ಟು ರಾಜ್ಯದ ಅಭಿವೃದ್ಧಿ ಕಡೆ ಗಮನ ಕೊಡಲಿ ಎಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ವಾಗ್ದಾಳಿ ನಡೆಸಿದ್ದಾರೆ.

ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಅವರು, ಜೆಡಿಎಸ್ ಪಕ್ಷದ ಕಾಲ ಮುಗಿಯಿತು ಎಂಬ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.ಇದನ್ನೂ ಓದಿ: ಡಿ-ಬಾಸ್ ಫ್ಯಾನ್ಸ್‌ನಿಂದ ಅಶ್ಲೀಲ ಮೆಸೇಜ್ – ನಟಿ ರಮ್ಯಾ ಬೆಂಬಲಕ್ಕೆ ನಿಂತ ದೊಡ್ಮನೆ ಕುಟುಂಬ

ಎಕ್ಸ್‌ನಲ್ಲಿ ಏನಿದೆ?
ಶಿವಕುಮಾರಣ್ಣ, ಪ್ರಾದೇಶಿಕ ಪಕ್ಷ ಕಟ್ಟುವುದು, ಯಾರೋ ಗೆದ್ದ ಕಪ್ ಹಿಡಿದು ಮುತ್ತಿಟ್ಟು, ರೀಲ್ಸ್ ಮಾಡುವಷ್ಟು ಸುಲಭವಲ್ಲ. ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದು ಎರಡು ವರ್ಷ ಕಳೆದರೂ ಕೂಡ ನಿಗಮ ಮಂಡಳಿಗಳಲ್ಲಿ ನಿಮ್ಮ ಕಾರ್ಯಕರ್ತರಿಗೆ ಅಧಿಕಾರ ಕೊಡುವ ಯೋಗ್ಯತೆ ಇಲ್ಲ. ಆದರೂ ನಮ್ಮ ಕಾರ್ಯಕರ್ತರನ್ನು ಪಕ್ಷಕ್ಕೆ ಕರೆಯುತ್ತಿದ್ದಾರೆ. ಇದೇ ಉತ್ಸಾಹ ಬೆಂಗಳೂರಿನ ರಸ್ತೆಗಳ ಗುಂಡಿ ಮುಚ್ಚುವ ಬಗ್ಗೆ ಇದ್ದಿದ್ದರೆ ಸ್ವಲ್ಪ ಮರ್ಯಾದೆಯಾದರೂ ಉಳಿಯುತ್ತಿತ್ತು. ಉಡಾಫೆ ಬಿಟ್ಟು ರಾಜ್ಯದ ಅಭಿವೃದ್ಧಿಯ ಬಗ್ಗೆ ಗಮನ ಹರಸಿ ಎಂದು ಕಿಡಿಕಾರಿದ್ದಾರೆ.

Nikhil Kumaraswamy Tweet
Nikhil Kumaraswamy Tweet

ತಾಯಿ ಚಾಮುಂಡೇಶ್ವರಿಯ ಆಶೀರ್ವಾದ, ಮಾನ್ಯ ಮಾಜಿ ಪ್ರಧಾನ ಮಂತ್ರಿಗಳಾದ ಹೆಚ್.ಡಿ.ದೇವೇಗೌಡ ಅವರು ಮತ್ತು ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರಾಗಿರುವ ಕುಮಾರಣ್ಣನವರ ವರ್ಚಸ್ಸಿನ ಮುಂದೆ ನಿಮ್ಮ ಮಾತುಗಳಿಗೆ ಕವಡೆಕಾಸಿನ ಕಿಮ್ಮತ್ತು ಕೊಡುವವರು ಯಾರು ಇಲ್ಲ. `ಗ್ಯಾರಂಟಿ’ ಅನುಷ್ಠಾನ ಸಮಿತಿ ಹೆಸರಿನಲ್ಲಿ, ರಾಜ್ಯದ ಜನರ ತೆರಿಗೆ ಹಣದಲ್ಲಿ `ಗೌರವ’ ಧನ ಪಡೆದು ಕೆಲಸ ಮಾಡುತ್ತಿರುವ ಗಂಜಿ ಗಿರಾಕಿ ಕಾಂಗ್ರೆಸ್ ಕಾರ್ಯಕರ್ತರ ರೀತಿಯಲ್ಲ ನಮ್ಮವರು. ಜೆಡಿಎಸ್‌ನ ಕಾರ್ಯಕರ್ತರು ನಿಷ್ಠಾವಂತರು ಎಂದು ಹೇಳಿದ್ದಾರೆ.ಇದನ್ನೂ ಓದಿ: Operation Sindoor Debate | ಹೋರಾಡಿದ್ದು ಸೇನೆ, ಕ್ರೆಡಿಟ್‌ ಬಯಸುತ್ತಿರೋದು ಮೋದಿ – ಪ್ರಿಯಾಂಕಾ ಗಾಂಧಿ ಕಿಡಿ

Share This Article