ಬೆಂಗಳೂರು: ಬಿಜೆಪಿ ಸರ್ಕಾರ ಪರಿಶಿಷ್ಟರು, ಹಿಂದುಳಿದವರು ಹಾಗೂ ಮಹಿಳೆಯರಿಗೆ ಮೋಸ ಮಾಡಿದೆ. ಮೋಸಕ್ಕೆ ಮತ್ತೊಂದು ಹೆಸರೇ ಬಿಜೆಪಿ ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Advertisement
ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ಚುನಾವಣೆಯ ಮೀಸಲಾತಿ ಪಟ್ಟಿಯನ್ನು ಜನಸಂಖ್ಯೆಗೆ ಅನುಗುಣವಾಗಿ ಮಾಡಬೇಕಿತ್ತು. ಆದರೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಬಾರದು ಎಂಬ ಕಾರಣಕ್ಕೆ, ಬಿಜೆಪಿ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಸಾಮಾಜಿಕ ನ್ಯಾಯ ಗಾಳಿಗೆ ತೂರಿ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಜಲಜೀವನ್ ಮಿಷನ್ ಸೇರಿ ಕೇಂದ್ರದ ಯೋಜನೆಗಳ ಚುರುಕಿನ ಜಾರಿಗೆ ಸಿಎಂ ತಾಕೀತು
Advertisement
Advertisement
ಬಿಜೆಪಿಯವರು ಏನೇ ಮಾಡಲಿ, ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಾನೂನು ಹೋರಾಟ ಮಾಡುತ್ತೇವೆ. ಸರ್ಕಾರ ನಿರ್ಧಾರ ಖಂಡಿಸಿ ಕಾಂಗ್ರೆಸ್ ನಾಯಕರು ನಗರಾಭಿವೃದ್ಧಿ ಕಚೇರಿಗೆ ಹೋಗಿ ಅಲ್ಲಿ ‘ಬಿಜೆಪಿ ಕಚೇರಿ’ ಎಂದು ನಾಮಫಲಕ ಹಾಕಿ ಬಂದಿದ್ದಾರೆ. ಇದು ನಮ್ಮ ಪಕ್ಷದ ಒಗ್ಗಟ್ಟಿನ ಹೋರಾಟ. ರಾಮಲಿಂಗಾರೆಡ್ಡಿ ಅವರ ನೇತೃತ್ವದಲ್ಲಿ ಬೆಂಗಳೂರು ನಾಯಕರ ಹೋರಾಟ ಮುಂದುವರಿಯಲಿದೆ. ಚುನಾವಣೆಗೆ ಕಾಂಗ್ರೆಸ್ ಪಕ್ಷ ಸಿದ್ಧವಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಬಿಗ್ ಬಾಸ್‌ಗೆ ಯಾಕೆ ಹೋಗಬಾರದು? ನವ್ಯಶ್ರೀ ರಾವ್ ಪ್ರಶ್ನೆ