ಬೆಂಗಳೂರು: ಕರ್ನಾಟಕ ಸರ್ಕಾರಿ ಉದ್ಯಾನವನಗಳ (ಸಂರಕ್ಷಣೆ) ತಿದ್ದುಪಡಿ ವಿಧೇಯಕವನ್ನು ವಾಪಸ್ ಪಡೆದಿರುವ ಕುರಿತು ಸಿಎಂ ‘ಯು-ಟರ್ನ್’ ಮಾಡಿದ್ದಾರೆ ಎಂಬ ವಿಪಕ್ಷಗಳ ಆರೋಪಕ್ಕೆ ಸಿಎಂ ಡಿಕೆ ಶಿವಕುಮಾರ್ (DK Shivakuamr) ಕಿಡಿಕಾರಿದ್ದಾರೆ.
ಬೆಂಗಳೂರಲ್ಲಿ ಪ್ರತಿಕ್ರಿಯಿಸಿದ ಅವರು, “ನಾನು ಯೂಟರ್ನ್ ಏಕೆ ಮಾಡಬೇಕು. ಜನರ ಭಾವನೆಗಳಿಗೆ ಬೆಲೆ ನೀಡಲಾಗಿದೆ. ಯಡಿಯೂರಪ್ಪ, ಬೊಮ್ಮಾಯಿ ಅವರ ಕಾಲದಲ್ಲಿ ಏನಾಗಿದೆ ಎಂಬ ಪಟ್ಟಿ ಬಿಡುಗಡೆ ಮಾಡುತ್ತೇವೆ. ಈ ಬಗ್ಗೆ ಚರ್ಚೆಯಾಗಬೇಕು ಅಂತ ಹೇಳಿದ್ದಾರೆ. ಇದನ್ನೂ ಓದಿ: ಸಾಲ ಮನ್ನಾಕ್ಕೆ ನೆರವು ಕೋರಿ ದೆಹಲಿಗೆ ಸರ್ವಪಕ್ಷ ನಿಯೋಗ: ಡಿಕೆಶಿ
ಲಾಲ್‌ಬಾಗ್‌ನಲ್ಲಿಯೇ ಟನಲ್ ಮಾಡಬೇಕೆಂಬ ಉದ್ದೇಶವಿಲ್ಲ. ಇದಕ್ಕೆ ಪರ್ಯಾಯ ಮಾರ್ಗವನ್ನು ಪರಿಶೀಲಿಸಲಾಗುವುದು. ಹಿಂದೆ ಸಿದ್ದರಾಮಯ್ಯನವರು ಸ್ಟೀಲ್ ಬ್ರಿಡ್ಜ್ ಮಾಡಲು ಹೊರಟಾಗಲು ಬಿಜೆಪಿ (BJP) ವಿರೋಧಿಸಿತ್ತು. ಬಿಜೆಪಿಯವರು ಅಭಿವೃದ್ದಿಯ ವಿರೋಧಿಗಳು. ಬೆಂಗಳೂರಿಗೆ ಏನಾದರೂ ಶಾಪವಿದ್ದರೆ ಅದು ಬಿಜೆಪಿಯವರದ್ದು. ಅವರ ಕಾಲದಲ್ಲಿ ಒಂದು ಯಾವುದಾದರೂ ಈ ರೀತಿಯ ಗುರುತರ ಯೋಜನೆ ಪಾರಂಭಿಸಿದ್ದರೆ ತಿಳಿಸಲಿ. ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಟನಲ್ ರಸ್ತೆ, ಡಬಲ್ ಡೆಕ್ಕರ್ ಮಾರ್ಗಗಳು, ಯೋಜನೆಗಳು ಅತ್ಯಗತ್ಯ. ಟನಲ್ ರಸ್ತೆ ಬೇಡ ಎನ್ನುವವರು ಅದಕ್ಕೆ ಪರ್ಯಾಯ ಏನು ಎಂಬುದನ್ನು ಹೇಳಬೇಕಲ್ಲವೇ? ಎಂದು ಸವಾಲು ಹಾಕಿದ್ದಾರೆ.
ನಾಲಿಗೆಯ ಮೇಲೆ ಹತೋಟಿ ಇರಲಿ:
ನಾನು ಸಿಎಂ ಸ್ಥಾನದಲ್ಲಿ ಕೂತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಕೇಂದ್ರ ಸಚಿವ ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಆರ್.ಅಶೋಕ್ (R Ashok) ಅವರು ಬಳಸುವ ಪದಗಳನ್ನು ಬಳಸಲಾಗುವುದಿಲ್ಲ. ನನಗೆ ಗೌರವ ಕೊಡದಿದ್ರೂ ನಾಡಿನ ಜನತೆ ಹಾಗೂ ಪಕ್ಷ ಕೊಟ್ಟಿರುವ ಸ್ಥಾನಕ್ಕಾದರೂ ಬೆಲೆ ಕೊಡಲಿ. ನಿಮ್ಮ ನಾಲಿಗೆಯ ಮೇಲೆ ಹತೋಟಿ ಇರಲಿ ಎಂದು ನಮ್ರತೆಯಿಂದ ಹೇಳುತ್ತಿದ್ದೇನೆ. ನಿಮ್ಮ ತಂದೆಯವರೂ ಕೂಡ ಇದೇ ಸ್ಥಾನವನ್ನು ಅಲಂಕರಿಸಿದ್ದರು ಎನ್ನುವ ಪರಿವೆ ಇರಲಿ. ಅವರ ಬೇಡಿಕೆಗಳನ್ನು ಕೇಳಲಿ, ಅದರಲ್ಲಿ ತಪ್ಪಿಲ್ಲ. ಈ ಬಗ್ಗೆ ಸದನದಲ್ಲಿ ವಿಸ್ತೃತ ಚರ್ಚೆಗೆ ಅವಕಾಶ ಮಾಡಿಕೊಡಲು ಮಾತ್ರ ವಿಧೇಯಕ ಹಿಂಪಡೆಯಲಾಗಿದೆ ಎಂದಿದ್ದಾರೆ.ಇದನ್ನೂ ಓದಿ: ಪಿಎಂ ಸೇತು ಯೋಜನೆ| ಬೆಂಗಳೂರು, ಕಲಬುರಗಿಯ ತಲಾ 4 ಐಟಿಐ ಆಯ್ಕೆ: ಎಂ ಬಿ ಪಾಟೀಲ್
ಉದ್ಯಾನವನವನ್ನು ಮಾರುತ್ತಿಲ್ಲ:
ಚರ್ಚೆ ಮಾಡಬೇಕೆನ್ನುವ ಕಾರಣದಿಂದ ವಿಧೇಯಕವನ್ನು ಹಿಂಪಡೆಯಲಾಗಿದೆ. 16.5 ಕಿ.ಮೀ ಟನಲ್ ರಸ್ತೆ ಯೋಜನೆಗಾಗಿ ಲಾಲ್‌ಬಾಗ್ ಜಾಗವನ್ನು ಕಬಳಿಸುವ ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ. ನಾವು ಉದ್ಯಾನವನಗಳನ್ನು ಮಾರಾಟ ಮಾಡುತ್ತಿಲ್ಲ. ಮೆಟ್ರೋಗೆ ಜಾಗ ಕೊಡಲು ಭೂಮಿಯನ್ನು ವರ್ಗಾಯಿಸಬೇಕು. ನಾವು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ಮಾಡುತ್ತೇವೆ, ಅದರಿಂದ ಅವರ ವೈಫಲ್ಯಗಳು ಬಯಲಾಗುತ್ತವೆ ಎಂದು ತಿಳಿದೇ ಅಧಿವೇಶನವನ್ನು ನಡೆಸಲು ವಿರೋಧ ಪಕ್ಷದವರು ಬಿಡಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಾನು ಅವರಷ್ಟು ವಿದ್ಯಾವಂತರಲ್ಲದಿದ್ದರೂ ನನಗೂ ದೇವರು ಅಷ್ಟೋ ಇಷ್ಟೋ ಸಾಮಾನ್ಯ ಜ್ಞಾನ ಕೊಟ್ಟಿದ್ದಾರೆ. ಜೆಪಿ ಪಾರ್ಕ್ ಸೇರಿದಂತೆ ಎಲ್ಲಾ ಸ್ಥಳಗಳ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ. ಅನಾವಶ್ಯಕವಾಗಿ ನನ್ನನ್ನು ಕೆಣಕುವುದು ಬೇಡ ಎಂದು ತಿರುಗೇಟು ನೀಡಿದ್ದಾರೆ.ಇದನ್ನೂ ಓದಿ: KIADBಯಲ್ಲಿ ಒಬ್ಬನೇ ವ್ಯಕ್ತಿಗೆ SC/ST ಕೋಟಾದಡಿ 250 ಕೋಟಿಯ 15-17 ಎಕರೆ ಭೂಮಿ ಹಂಚಿಕೆ – ಛಲವಾದಿ ಆರೋಪ
ನಮ್ಮ ಯಾತ್ರೆಯನ್ನೂ ನೋಡಿ:
ಮೆಟ್ರೋ, ಶಾಸಕರ ಭವನ, ಪ್ರೆಸ್ ಕ್ಲಬ್, ಬಸವ ಭವನ, ಹೈಕೋರ್ಟ್ ಪಾರ್ಕಿಂಗ್ ಹಾಗೂ ಇಂದಿರಾ ಗಾಂಧಿ ಫೌಂಟೇನ್‌ಗೆ ಹಿಂದೆ ಸಾರ್ವಜನಿಕ ಭೂಮಿಯನ್ನೇ ನೀಡಲಾಗಿತ್ತು. ಕಾಲಕಾಲಕ್ಕೆ ಕೆಲವು ನಿರ್ಣಯಗಳಾಗಿವೆ. ಎಲ್ಲಾ ಸೇರಿ ಕೆಲಸ ಮಾಡೋಣ ಎಂದು ಈಗಾಗಲೇ ಹೇಳಿದ್ದೇನೆ. ಸಲಹೆ ಸ್ವೀಕಾರ ಮಾಡಿದರೆ ಯೂ ಟರ್ನ್ ಮಾಡಿದ್ದೇನೆ ಎಂದಾಗುತ್ತದೆಯೇ ಎಂದು ಪ್ರಶ್ನಿಸಿದ್ದಾರೆ.
ಸಚಿವ ನಾಗೇಂದ್ರ ಅವರು ಸ್ವಯಂ ಪ್ರೇರಿತರಾಗಿ ರಾಜೀನಾಮೆ ನೀಡಿದರು. ಆದರೂ ಪಾದಯಾತ್ರೆ ಮಾಡುತ್ತಿದ್ದಾರೆ. ನನ್ನ ಯಾತ್ರೆಯನ್ನೂ ನೀವು ನೋಡಿ ಎಂದಿದ್ದಾರೆ.
ಸರ್ಕಾರದ ಮತ್ತೊಂದು ವಿಕೆಟ್ ಪತನವಾಗಲಿದೆ ಎಂದು ವಿರೋಧ ಪಕ್ಷದವರು ಹೇಳುತ್ತಿದ್ದಾರೆ ಎಂದು ಕೇಳಿದಾಗ, ನನ್ನನ್ನೇ ಪತನ ಮಾಡುವುದಾಗಿ ಕೆಲವರು ಹೇಳಿದ್ದಾರೆ. ಅದರಲ್ಲಿ ಅವರು ಯಶಸ್ವಿಯಾಗಲಿ ಸಂತೋಷ. ತಪ್ಪು ಮಾಡಿದ್ದರೆ ಎಲ್ಲರೂ ಶಿಕ್ಷೆಗೆ ಒಳಗಾಗಬೇಕು, ಅದಕ್ಕೆ ನಾನೂ ಹೊರತಾಗಿಲ್ಲ ಎಂದು ಹೇಳಿದ್ದಾರೆ.ಇದನ್ನೂ ಓದಿ: ಶುದ್ಧೀಕರಣ ವಿವಾದ – ಉತ್ತರಾಖಂಡ ಬಿಜೆಪಿ ಸದಸ್ಯರ ಮೇಲೆ ಎಸ್‌ಸಿ/ ಎಸ್‌ಟಿ ಕಾಯ್ದೆಯ ಅಡಿ ಬೆಂಗಳೂರಿನಲ್ಲಿ ಎಫ್‌ಐಆರ್
ಪ್ರಾಸಿಕ್ಯೂಷನ್ ಅನುಮತಿ; ಪರಿಶೀಲನೆ ಬಾಕಿ ಇದೆ:
ಈಗ ನಾನು ಪ್ರಾಸಿಕ್ಯೂಷನ್ ಅನುಮತಿ ಬಗ್ಗೆ ಯೋಚನೆ ಮಾಡಿಲ್ಲ. ಬಿ. ನಾಗೇಂದ್ರ, ಜಿ. ಜನಾರ್ದನ ರೆಡ್ಡಿ ಹಾಗೂ ಎಂ.ಪಿ. ರೇಣುಕಾಚಾರ್ಯ ಸೇರಿದಂತೆ ಹಲವು ನಾಯಕರ ಪ್ರಾಸಿಕ್ಯೂಷನ್‌ಗೆ ಸಂಬಂಧಿಸಿದಂತೆ ರಾಜ್ಯಪಾಲರಿಂದ ಕಡತಗಳು ಬಂದಿವೆ. ಅದನ್ನು ಇನ್ನೂ ಕಾನೂನಾತ್ಮಕವಾಗಿ ಪರಿಶೀಲಿಸಿಲ್ಲ. ಸಾರಾಂಶ ಸರಿಯಿದೆಯೇ ಎಂದು ಪರಿಶೀಲಿಸಬೇಕಿದೆ. ಒಬ್ಬರಿಗೆ ಒಂದು ಆಗಿದೆಯೇ ಎಂದು ಪರಿಶೀಲಿಸಬೇಕು. ಈ ಬಗ್ಗೆ ಯಾವುದೇ ಆತುರದ ನಿರ್ಧಾರ ಕೈಗೊಳ್ಳಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ದೆಹಲಿ, ಮಹಾರಾಷ್ಟ್ರಗಳಲ್ಲಿ ಟನಲ್ ನಿಲ್ಲಿಸಲಿ:
ಲಾಲ್‌ಬಾಗ್ ವಿಚಾರದಲ್ಲಿ ತೋಟಗಾರಿಕಾ ಇಲಾಖೆಯ ಸ್ಥಳವನ್ನು ವರ್ಗಾಯಿಸುವ ಜಾಗವಾಗಿದ್ದು, ಹಿಂದೆಲ್ಲಾ ವಿಶೇಷ ಆದೇಶಗಳನ್ನು ಸಣ್ಣ ಸಣ್ಣ ಜಾಗಗಳಿಗೆ ಮಾಡಲಾಗಿದೆ. ಅಧಿಕಾರಿಗಳು ಇದನ್ನು ಪ್ರಸ್ತಾಪಿಸಿದಾಗ ಒಪ್ಪಿಗೆ ನೀಡಲಾಗಿದೆಯೇ ಹೋರತು, ಟನಲ್‌ಗಾಗಿಯೇ ಮಾಡುತ್ತಿದ್ದೇವೆ ಎಂದಲ್ಲ. ಹಾಗಾದರೆ ವಿಪಕ್ಷಗಳು ದೆಹಲಿ, ಮಹಾರಾಷ್ಟ್ರಗಳಲ್ಲಿ ಟನಲ್ ನಿಲ್ಲಿಸಲಿ. ಜಾರ್ಜ್ ಅವರ ಕಾಲದಲ್ಲಿ ಸ್ಟೀಲ್ ಸೇತುವೆಯನ್ನು ನಿಲ್ಲಿಸಿದರು. ವಾಹನಗಳನ್ನು ನಿಲ್ಲಿಸಿ ಎಂದು ಹೇಳಲಾಗುತ್ತದೆಯೇ? ಮೆಟ್ರೋಗೆ ಏನು ಬೇಕೋ ಅದನ್ನು ಮಾಡುತ್ತಿದ್ದೇವೆ. 40 ಕಿ.ಮೀ ಡಬಲ್ ಡೆಕ್ಕರ್ ಯೋಜನೆಗೆ ಅನುಮತಿ ಕೇಳಿದರೆ, 13 ಕಿ.ಮೀ ಮಾತ್ರ ಮಾಡಿ ಎಂದಿದ್ದಾರೆ. ಡಬಲ್ ಡೆಕ್ಕರ್‌ನಿಂದ ಮೇಲ್ಸೇತುವೆಯಲ್ಲಿ ಕಾರು ಹಾಗೂ ಇತರೆ ವಾಹನ ಸಾಗುತ್ತದೆ. ಅದರ ಮೇಲೆ ಮೆಟ್ರೋ ಹೋಗುತ್ತಿತ್ತು. ಆದರೂ ಆದರೂ ನೀಡಲು ಹಿಂದೇಟು ಹಾಕುತ್ತಾರೆ. ಇದು ಬಿಜೆಪಿಯ ನಿಲುವು. ಚೆನ್ನೈನಲ್ಲಿ 20 ಕಿ.ಮೀ ಡಬ್ಬಲ್ ಡೆಕ್ಕರ್ ಇದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಜಮ್ಮು-ಕಾಶ್ಮೀರದ ಬದ್ಗಾಮ್‌ನಲ್ಲಿ ಸೇನೆ, ಪೊಲೀಸರ ಕಾರ್ಯಾಚರಣೆ; ಓರ್ವ ಉಗ್ರ ಹತ್ಯೆ
