ಬೆಂಗಳೂರು: ದೀಪಾವಳಿ (Deepavali) ಮನೆಯ ದೀಪಾಲಂಕಾರಕ್ಕೆ ಅನುಮತಿ ಪಡೆಯದೇ ವಿದ್ಯುತ್ ಪಡೆದಿದ್ದಕ್ಕೆ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಅವರಿಗೆ ಬೆಸ್ಕಾಂ (BESCOM) 68 ಸಾವಿರ ರೂ. ದಂಡ ವಿಧಿಸಿದೆ.
ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 71 ಯೂನಿಟ್ ವಿದ್ಯುತ್‌ಗೆ 3 ಪಟ್ಟು ದಂಡ ವಿಧಿಸಿದ್ದಾರೆ. ಒಟ್ಟು 2,526 ರೂಪಾಯಿ ದಂಡ ಹಾಕಬೇಕಿತ್ತು. ಆದರೆ ನನ್ನ ಮನೆಗೆ ತೆಗೆದುಕೊಂಡಿರುವ 33 kV ವಿದ್ಯುತ್ ಬಳಕೆ ಸೇರಿ 68,526 ರೂ. ದಂಡ ವಿಧಿಸಿದ್ದಾರೆ. ಇದನ್ನೂ ಓದಿ: 68 ಸಾವಿರ ದಂಡ ಪಾವತಿಸಿದ್ದೇನೆ – ಲುಲು ಮಾಲ್‌ಗೆ ಕರೆಂಟ್ ಶಾಕ್ ಕೊಟ್ಟ ಕುಮಾರಸ್ವಾಮಿ
Advertisement
Advertisement
ಈ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ ಕುಮಾರಸ್ವಾಮಿ, ಇನ್ಮುಂದೆಯಾದರೂ ಕರೆಂಟ್ ಕಳ್ಳ ಅನ್ನೋದನ್ನು ನಿಲ್ಲಿಸಿ ಎಂದು ಕಾಂಗ್ರೆಸ್ಸಿಗರನ್ನು ಆಗ್ರಹಿಸಿದರು. ಇಷ್ಟಕ್ಕೆ ಸುಮ್ಮನಾಗದ ಅವರು, ಡಿಸಿಎಂ ವಿರುದ್ಧ ಹರಿಹಾಯ್ದರು. ಲೂಲು ಮಾಲ್‌ಗೆ 6 ತಿಂಗಳಿಂದ ಕರೆಂಟ್ ಬಿಲ್ಲನ್ನೇ ಕೊಟ್ಟಿಲ್ಲ. ನಿಮ್ಮಷ್ಟು ದೊಡ್ಡ ಕಳ್ಳ ನಾನಲ್ಲ, ನಮಗೆ ಹೇಳೋಕೆ ಬರ್ತಾರೆ ಎಂದು ಡಿಕೆಶಿ ಹೆಸರು ಹೇಳದೇ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ವಿಶ್ವಕಪ್ ಫೈನಲ್ಸ್ ಬೆಟ್ಟಿಂಗ್ ಭರಾಟೆ – 15 ದಿನದಲ್ಲಿ 30 ಕೇಸ್, 42 ಮಂದಿ ಅರೆಸ್ಟ್
Advertisement
Advertisement
ಮೇಕೆದಾಟು ಪಾದಯಾತ್ರೆಯಲ್ಲಿ ಬಳಸಿದ ಕರೆಂಟ್‌ಗೆ ಅನುಮತಿ ತಗೊಂಡಿದ್ರಾ ಅಂತಾನೂ ಪ್ರಶ್ನಿಸಿದ್ರು. ಕರೆಂಟ್ ಕಳವು ಆರೋಪದಡಿ ಬೆಸ್ಕಾಂ ಹಾಕಿರೋ ಬಿಲ್ ಲೋಪದಿಂದ ಕೂಡಿದ್ದು ಈ ಬಗ್ಗೆ ಸ್ಪಷ್ಟನೆ ಕೊಡಬೇಕು ಅಂತ ಕುಮಾರಸ್ವಾಮಿ ಆಗ್ರಹಿಸಿದರು.
ಇದಕ್ಕೆ ಪ್ರತಿಕ್ರಿಯಿಸಿ, ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆಶಿ, ಹೆಚ್‌ಡಿಕೆ ಏನು ಹೇಳಿದ್ದಾರೆಯೋ ಅದಕ್ಕೆ ಜನರೇ ಉತ್ತರ ಕೊಟ್ಟಿದ್ದಾರೆ. ಇನ್ನೂ ಏನಾದ್ರೂ ಬೇಕಿದ್ರೆ ನಾನು ಉತ್ತರ ಕೊಡ್ತೀನಿ. ಅದೇನು ಪಟ್ಟಿ ಕೊಡಲಿ ಲೆಕ್ಕ ಕೊಡುತ್ತೇನೆ. ನಾನು ಮಾಲ್ ಕಟ್ಟಿರುವ ಜಾಗ ಕೇಂದ್ರ ಸರ್ಕಾರದ ಸಂಸ್ಥೆಯದ್ದು, ಅವರು ದಾಖಲೆ ಮಾಡಿ ಟೆಂಡರ್ ಹಾಕಿದ್ದಾರೆ. ಅದನ್ನು ನಮ್ಮ ಸ್ನೇಹಿತರು ತೆಗೆದುಕೊಂಡಿದ್ದರು. ಅವರಿಂದ ನಾನು ತೆಗೆದುಕೊಂಡೆ. ಏನು ತನಿಖೆ ಬೇಕಿದ್ದರೆ ಮಾಡಿಸಲಿ, ತಪ್ಪು ಮಾಡಿದ್ದರೆ ಗಲ್ಲಿಗೆ ಬೇಕಾದ್ರೂ ಹಾಲಿ ಎಂದು ಸವಾಲ್ ಹಾಕಿದ್ದಾರೆ.
ಕುಮಾರಸ್ವಾಮಿ ಅವರ ತಂದೆಯವರು 15 ವರ್ಷಗಳ ಹಿಂದೆಯೇ ಜಯರಾಜ್ ಎಂಬ ಅಧಿಕಾರಿಯಿಂದ ತನಿಖೆ ಮಾಡಿಸಿದ್ದಾರೆ. ಈಗಲೂ ಅಗತ್ಯವಿದ್ದರೆ ತನಿಖೆ ಮಾಡಿಸಲಿ. ಎಲ್ಲದಕ್ಕೂ ರೆಡಿ. ಈ ಪೊಗರು, ಈ ಬ್ಲ್ಯಾಕ್‌ಮೇಲ್‌ಗೆಲ್ಲ ಹೆದರಲ್ಲ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: 15 ನಿಮಿಷದಲ್ಲಿ 4 ಕೊಲೆ, ಇದು ವಿಶ್ವ ದಾಖಲೆ – ಸ್ಟೇಟಸ್ ಹಾಕಿದಾತನಿಗೆ ಬಿಸಿ ಮುಟ್ಟಿಸಿದ ಪೊಲೀಸರು