ಬೆಂಗಳೂರು: ನಗರದಲ್ಲಿ ಬಿ ಖಾತಾ ಆಸ್ತಿಗಳನ್ನು ಎ ಖಾತಾಗೆ ಪರಿವರ್ತನೆ ಮಾಡುತ್ತಿರುವ ಬಗ್ಗೆ ಇಲ್ಲಸಲ್ಲದ ಟೀಕೆ ಮಾಡುತ್ತಿರುವ ಕುಮಾರಸ್ವಾಮಿ ಖಾಲಿ ಟ್ರಂಕ್ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ವಾಗ್ದಾಳಿ ನಡೆಸಿದರು.
ನಮ್ಮ ಊರು – ನಮ್ಮ ನಡಿಗೆ – ನಮ್ಮ ಮಾತುಕತೆ
Today’s walk at Cubbon Park marked a meaningful moment in a journey that has truly been close to my heart. Through this series, I have met citizens across the city, listened to their ideas, and shared their hopes for our future. These… pic.twitter.com/hckW2ZUlke
— DK Shivakumar (@DKShivakumar) October 26, 2025
ಕಬ್ಬನ್ ಪಾರ್ಕ್‌ನಲ್ಲಿ ಇಂದು ಬೆಳಗ್ಗೆ ʻಬೆಂಗಳೂರು ನಡಿಗೆʼ ಕಾರ್ಯಕ್ರಮದ ವೇಳೆ ಡಿಕೆಶಿ ಸಾರ್ವಜನಿಕರೊಂದಿಗೆ ಮಾತನಾಡಿದರು. ಇದನ್ನೂ ಓದಿ: ತೀವ್ರ ಕಳಪೆ ಮಟ್ಟಕ್ಕೆ ಕುಸಿದ ದೆಹಲಿ ವಾಯುಗುಣಮಟ್ಟ – ಅ.29, 30ರಂದು ಕೃತಕ ಮಳೆ ಸಾಧ್ಯತೆ
ಈ ವೇಳೆ ನಾಗರಿಕರೊಬ್ಬರು, ಸರ್ಕಾರ ಆಸ್ತಿಗಳನ್ನು ʻಎ ಖಾತಾʼ (A Khata) ಆಗಿ ಪರಿವರ್ತನೆ ಮಾಡುತ್ತಿರುವುದು ಒಳ್ಳೆಯ ಕೆಲಸ. ಈ ಪರಿವರ್ತನೆಗಾಗಿ ಅನೇಕರು, ಹಲವು ವರ್ಷಗಳಿಂದ ಕಾಯುತ್ತಿದ್ದರು ಎಂದು ಸರ್ಕಾರದ ತೀರ್ಮಾನವನ್ನ ಸ್ವಾಗತಿಸಿ, ಮುಕ್ತವಾಗಿ ಪ್ರಶಂಸಿದರು. ಇದನ್ನೂ ಓದಿ: ನೀರಿನ ಬಿಲ್ 3 ಪಟ್ಟು ಹೆಚ್ಚಳ – ದುಬಾರಿ ಬಿಲ್ ನೋಡಿ ಹೌಹಾರಿದ ಗ್ರಾಹಕರು!
ಇದಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ, ʻಎ ಖಾತಾʼ ನಿಮ್ಮ ಆಸ್ತಿ ದಾಖಲೆ. ಸಾರ್ವಜನಿಕರ ಆಸ್ತಿ ದಾಖಲೆಗಳನ್ನ ಸರಿಪಡಿಸಿ, ಅವುಗಳನ್ನು ಜನರಿಗೆ ನೀಡುವುದು ನಮ್ಮ ಸರ್ಕಾರದ 6ನೇ ಗ್ಯಾರಂಟಿ. ಇದಕ್ಕಾಗಿ ನಾವು ಕೇವಲ 5% ಮಾತ್ರ ಅಭಿವೃದ್ಧಿ ಶುಲ್ಕ ಪಾವತಿ ಮಾಡುವಂತೆ ಕೇಳಿದ್ದೇವೆ. ನಿಮ್ಮಂತಹ ಪ್ರಜ್ಞಾವಂತ ನಾಗರೀಕರು ಇದನ್ನು ಸ್ವಾಗತಿಸಿರುವುದಕ್ಕೆ ಧನ್ಯವಾದ ಎಂದು ನಮಿಸಿದರು.


