ಬೆಂಗಳೂರು: ಕಾಂಗ್ರೆಸ್ ಪಕ್ಷ ಮೇಕೆದಾಟು ಪಾದಯಾತ್ರೆಯನ್ನು ಆರಂಭಿಸಿದೆ. ಈ ವಿಚಾರವಾಗಿ ಮೊದಲಿನಿಂದಲೂ ವಿರೋಧ ವ್ಯಕ್ತಪಡಿಸುತ್ತಾ ಬಂದಿರುವ ಬಿಜೆಪಿ ಸರ್ಕಾರ, ಈಗ ಡಿ.ಕೆ.ಶಿವಕುಮಾರ್ ಅವರಿಗೆ ಸಂಬಂಧಿಸಿದ ಒಂದು ವೀಡಿಯೋವನ್ನು ಹಂಚಿಕೊಂಡು ವ್ಯಂಗ್ಯವಾಡಿದೆ.
ಮೆಕೆದಾಟು ಪಾದಯಾತ್ರೆ ಯಶಸ್ವಿಗಾಗಿ ಉದ್ಘಾಟನೆಗೂ ಮುನ್ನ ಡಿ.ಕೆ.ಶಿವಕುಮಾರ್ ಸಂಗಮದಲ್ಲಿ ವಿಶೇಷ ಪೂಜೆ ಮಾಡಿದ್ದಾರೆ. ಈ ವೇಳೆ ಅವರ ಕಾಲು ಸ್ಲಿಪ್ ಆಗಿತ್ತು. ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವೀಡಿಯೋವನ್ನು ಬಿಜೆಪಿ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡು ʻಡಿಕೆ ದಾಟಲಿಲ್ಲ, ಮೇಕೆಯಾದರೂ ದಾಟಲಿʼ ಎಂದು ವ್ಯಂಗ್ಯವಾಡಿದೆ. ಇದನ್ನೂ ಓದಿ: ರೈತ ಗೀತೆ ಮೂಲಕ ಮೇಕೆದಾಟು ಪಾದಯಾತ್ರೆಗೆ ಕಾಂಗ್ರೆಸ್ ಚಾಲನೆ
Advertisement
Advertisement
ಕಾಂಗ್ರೆಸ್ ಪಾದಯಾತ್ರೆ ವಿರುದ್ಧ ಸಚಿವ ಸುನೀಲ್ ಕುಮಾರ್ ಟ್ವೀಟ್ ಮೂಲಕವಾಗಿ ವಾಗ್ದಾಳಿ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಜಲಸಂಪನ್ಮೂಲ ಸಚಿವರಾಗಿದ್ದಾಗ ಮೇಕೆದಾಟು ಯೋಜನೆ ನೆನಪಾಗಲಿಲ್ಲವೇ? ಈಗ ಪಾದಯಾತ್ರೆ ಮಾಡುವ ಬದಲು ಅಂದೇ ಯೋಜನೆಗೆ ಸಂಬಂಧಪಟ್ಟ ಕೆಲಸಗಳನ್ನು ಮಾಡಿಸಬಹುದಿತ್ತಲ್ಲವೇ? ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಮೇಕೆದಾಟು ನಡಿಗೆಯಲ್ಲಿ ಸುಸ್ತಾದ ಸಿದ್ದರಾಮಯ್ಯ – ಕಾರಿನಲ್ಲಿ ವಾಪಸ್
Advertisement
Advertisement
ಅಧಿಕಾರವಿದ್ದಾಗ ಮೇಕೆದಾಟು ಯೋಜನೆ ಬಗ್ಗೆ ಕಾಂಗ್ರೆಸ್ ನಿರ್ಲಕ್ಷ್ಯ ತೋರಿಸಿತ್ತು. ಈಗ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಬೀದಿನಾಟಕ ಮಾಡುತ್ತಿದೆ. ಅಧಿಕಾರದಲ್ಲಿದ್ದಾಗ ಇಲ್ಲದ ಇಚ್ಛಾಶಕ್ತಿ, ಚುನಾವಣೆಗಾಗಿ ಬಂದಿರುವ ಹಠಾತ್ ರಾಜಕೀಯ ಆಸಕ್ತಿ ಎಲ್ಲವನ್ನೂ ಜನ ಗಮನಿಸುತ್ತಿದ್ದಾರೆ. ಮೇಕೆದಾಟು ಯೋಜನೆ ಜಾರಿ ಮಾಡುವ ನೈಜ ಬದ್ಧತೆ ಇರುವುದು ಬಿಜೆಪಿಗೆ ಮಾತ್ರ ಎಂದು ಕಾಂಗ್ರೆಸ್ ಪಾದಯಾತ್ರೆ ವಿರುದ್ಧ ಸಚಿವ ಸುಧಾಕರ್ ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.