Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗಾಂಧೀಜಿ ಹೆಸರಿಗೆ ಕತ್ತರಿ, ಬಿಜೆಪಿ ಅಂತಿಮ ದಿನಗಳು ಆರಂಭ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗಾಂಧೀಜಿ ಹೆಸರಿಗೆ ಕತ್ತರಿ, ಬಿಜೆಪಿ ಅಂತಿಮ ದಿನಗಳು ಆರಂಭ: ಡಿಕೆಶಿ

Bengaluru City

ಗಾಂಧೀಜಿ ಹೆಸರಿಗೆ ಕತ್ತರಿ, ಬಿಜೆಪಿ ಅಂತಿಮ ದಿನಗಳು ಆರಂಭ: ಡಿಕೆಶಿ

Public TV
Last updated: December 22, 2025 7:50 pm
Public TV
Share
4 Min Read
DK Shivakumar 9
SHARE

– ಕೇಂದ್ರದಿಂದ ನರೇಗಾ ಯೋಜನೆ ಸಮಾಧಿ

ಬೆಂಗಳೂರು: ಹುಟ್ಟಿದ ಸೂರ್ಯ ಮುಳುಗಲೇ ಬೇಕು. ಮಹಾತ್ಮ ಗಾಂಧಿ ಅವರ ಹೆಸರನ್ನು ತೆಗೆಯುವುದರ ಮೂಲಕ ಕೇಂದ್ರ ಬಿಜೆಪಿ ಸರ್ಕಾರದ ಕೊನೆಯ ದಿನಗಳು ಪ್ರಾರಂಭವಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದರು.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ (KPCC Office) ಸೋಮವಾರ (ಡಿ.22) ನಡೆದ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಆರ್ಟಿಕಲ್ 21ರ ಮೂಲಕ ಸಾಂವಿಧಾನಿಕವಾಗಿ ಕಾಂಗ್ರೆಸ್ ಪಕ್ಷ ನೀಡಿದ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಕಾರ್ಯಕ್ರಮವನ್ನು ಬಿಜೆಪಿ ಮುಟ್ಟುವ ಧೈರ್ಯ ಮಾಡುತ್ತದೆ ಎಂದುಕೊAಡಿರಲಿಲ್ಲ. ಆದರೆ ಈಗ ಮನರೇಗಾ ಹೆಸರನ್ನು ಬದಲಾವಣೆ ಮಾಡಲು ಹೊರಟಿರುವುದು ನೋಡಿದರೆ ಬಿಜೆಪಿಯ ಅಂತ್ಯ ಪ್ರಾರಂಭವಾಗಿದೆ ಎಂದು ನನಗೆ ಅನಿಸುತ್ತಿದೆ ಎಂದರು. ಇದನ್ನೂ ಓದಿ: ಕಾಂಗ್ರೆಸ್‌ ಟೂರಿಸ್ಟ್‌ ಪಾರ್ಟಿ, ನಾಯಕರಿಗೆ ಅಹಂಕಾರ ಬಂದಿದೆ: ಶಿವಸೇನೆ ಉದ್ಧವ್‌ ಬಣ ಟೀಕೆ

ಬಡವರಿಗೆ ಕೊಟ್ಟ ಕಾರ್ಯಕ್ರಮದ ಕುತ್ತಿಗೆ ಹಿಸುಕುವ ಕೆಲಸ ಮಾಡಲಾಗುತ್ತಿದೆ. ದೇಶದ ಬಡಜನತೆಗೆ ಎಸಗುತ್ತಿರುವ ದ್ರೋಹವಿದು. ಇದಕ್ಕಿಂತ ದೊಡ್ಡ ಅವಮಾನವಿಲ್ಲ. ಮುಂಬರುವ 27ರಂದು ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಮುಂದಿನ ಹೋರಾಟದ ಬಗ್ಗೆ ತೀರ್ಮಾನ ಮಾಡಲಾಗುತ್ತದೆ. ಹೆಸರು ಬದಲಾವಣೆ ಹಿಂಪಡೆಯುವ ತನಕ ಪಂಚಾಯಿತಿಯಿಂದ ಪಾರ್ಲಿಮೆಂಟ್ ತನಕ ಹೋರಾಟ ರೂಪಿಸಲಾಗುವುದು ಎಂದು ತಿಳಿಸಿದರು.

ಅತ್ಯುತ್ತಮ ಯೋಜನೆಯನ್ನು ಕೊಲೆ, ಸಮಾಧಿ ಮಾಡಲಾಗಿದೆ:
ಗ್ರಾಮೀಣಾಭಿವೃದ್ಧಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ದೆಹಲಿಯಲ್ಲಿ ಮಂಗಳವಾರ (ಡಿ.23) ಸಭೆ ಕರೆದಿದ್ದಾರೆ. ಇಲ್ಲಿ ಇದರ ಬಗ್ಗೆ ಚರ್ಚೆ ನಡೆಸಲಾಗುವುದು. ಕೇಂದ್ರ ಸರ್ಕಾರ ಹೇಳಿದ ಅನುಪಾತದಲ್ಲಿ ಯಾವ ರಾಜ್ಯ ಸರ್ಕಾರವೂ ಹಣ ನೀಡಲು ಸಾಧ್ಯವಿಲ್ಲ. ಈ ರೀತಿ ಆದರೆ ಕಾರ್ಯಕ್ರಮ ಸತ್ತು ಹೋದಂತೆ. ಇದನ್ನು ಸಮಾಧಿ ಮಾಡಲಾಗಿದೆ. ಕೊಲೆ ಮಾಡಲಾಗಿದೆ ಎಂದರು.ಇದನ್ನೂ ಓದಿ: ಹಳದಿ ಮಾರ್ಗದ ಮೆಟ್ರೋಗೆ ನಾಳೆ 6ನೇ ರೈಲು ಸೇರ್ಪಡೆ

ಸರ್ಕಾರ ಮತ್ತು ಪಕ್ಷ ಒಟ್ಟಾಗಿ ಹೋರಾಡಲಿದೆ:
ಸರ್ಕಾರ ಮತ್ತು ಪಕ್ಷ ಒಟ್ಟಾಗಿ ನರೇಗಾ ಯೋಜನೆಯ ವಿರುದ್ಧ ಕೇಂದ್ರ ಬಿಜೆಪಿ ಸರ್ಕಾರ ತೆಗೆದುಕೊಂಡಿರುವ ತೀರ್ಮಾನ ವಿರೋಧಿಸಿ ಹೋರಾಟ ಮಾಡುತ್ತೇವೆ. ಇದು ರಾಷ್ಟ್ರೀಯ ವಿಚಾರ. ಈ ದೇಶದ ಗ್ರಾಮ ಪಂಚಾಯತಿಗಳನ್ನು ಸುಭದ್ರಗೊಳಿಸಿದ್ದು ಕಾಂಗ್ರೆಸ್ ಸರ್ಕಾರ. ರಾಜೀವ್ ಗಾಂಧಿ ಅವರು ತಂದ 73, 74ನೇ ತಿದ್ದುಪಡಿ ಮೂಲಕ ಅಧಿಕಾರ ವಿಕೇಂದ್ರೀಕರಣ ಮಾಡಿದರು. ಪಂಚಾಯತಿಗೆ, ಮತದಾರರಿಗೆ, ಉದ್ಯೋಗ ಖಾತ್ರಿ ಯೋಜನೆ ಫಲಾನುಭವಿಗಳಿಗೆ ನೀಡಿರುವ ಹಕ್ಕನ್ನು ಕಾಂಗ್ರೆಸ್ ಪಕ್ಷ ಕಾಪಾಡಲಿದೆ. ಕಾಪಾಡಲು ಹೋರಾಟ ರೂಪಿಸಲಿದೆ. ಇದರ ಬಗ್ಗೆ ರಾಜ್ಯದ ಎಲ್ಲಾ ಗ್ರಾಮಪಂಚಾಯತಿಗಳ ಮುಖಂಡರನ್ನು ಪಕ್ಷಾತೀತವಾಗಿ ಕರೆದು ಅವರ ಬಳಿ ಚರ್ಚೆ ನಡೆಸಲಾಗುವುದು. ಇದರ ಬಗ್ಗೆ ದೊಡ್ಡ ಆಂದೋಲನ ರೂಪಿಸಿ ಜನಾಭಿಪ್ರಾಯ ರೂಪಿಸಲಾಗುವುದು. ಇದರ ವಿರುದ್ಧ ಜನಾಭಿಪ್ರಾಯ ರೂಪಿಸಲಾಗುವುದು. ಅನ್ಯಾಯದ ಬಗ್ಗೆ ತಿಳಿಸಲಾಗುವುದು. ಹೆಸರು ಬದಲಾವಣೆ ತೀರ್ಮಾನವನ್ನು ವಾಪಸ್ ಪಡೆಯುವ ತನಕ ಹೋರಾಟ ನಡೆಸಲಾಗುವುದು. ಕಾಂಗ್ರೆಸ್ ಪಕ್ಷ ದೇಶದ ಜನಸಾಮಾನ್ಯರ ಪರವಾಗಿ ನಿಲ್ಲಲಿದೆ. ಜನರ ಹಕ್ಕನ್ನು ಕಾಪಾಡುವುದು ನಮ್ಮ ಕರ್ತವ್ಯ. ಚುನಾವಣೆಗಳು ಬರುತ್ತವೆ ಹೋಗುತ್ತವೆ. ಸೋಲು, ಗೆಲುವು ಇದ್ದಿದ್ದೆ ಎಂದು ತಿಳಿಸಿದರು.

ಇಡೀ ಭಾರತದಲ್ಲಿಯೇ ನನ್ನ ಕನಕಪುರ ಕ್ಷೇತ್ರ ಅತಿ ಹೆಚ್ಚು ನರೇಗಾ ಕಾಮಗಾರಿಗಳನ್ನು ನಡೆಸಿದ ಕ್ಷೇತ್ರ. ಇಲ್ಲಿ ಅವ್ಯವಹಾರ ನಡೆದಿದೆ ಎಂದು ಕೇಂದ್ರ ಬಿಜೆಪಿ ಸರ್ಕಾರ ತನಿಖಾ ತಂಡವನ್ನು ಕಳುಹಿಸಿತು. ಹತ್ತಾರು ನಿಯೋಗ ಬಂದಿತು. 250-300 ಕೋಟಿ ರೂ. ಕೆಲಸವನ್ನು ನರೇಗಾ ಮೂಲಕ ಮಾಡಲಾಗಿತ್ತು. 50 ಸಾವಿರ ದನದ ಕೊಟ್ಟಿಗೆಗಳನ್ನು ಕಟ್ಟಲಾಗಿತ್ತು. ಶಾಲಾ ಕಟ್ಟಡ, ಜಮೀನು ಮಟ್ಟ ಮಾಡುವುದು, ಕೃಷಿ ಹೊಂಡ ನಿರ್ಮಾಣ, ನೂರಾರು ಚೆಕ್ ಡ್ಯಾಂಗಳನ್ನು ನಿರ್ಮಾಣ ಮಾಡಲಾಯಿತು. ಇಲ್ಲಿನ ಕೆಲಸಗಳನ್ನು ನೋಡಿ ನನಗೆ ಎಲ್ಲಿ ಪ್ರಶಸ್ತಿ ನೀಡಬೇಕಾಗುತ್ತದೋ ಎಂದು ಕ್ಷೇತ್ರದ ತಾಲ್ಲೂಕು ಪಂಚಾಯತಿ ಅಧ್ಯಕ್ಷರಿಗೆ ಪ್ರಶಸ್ತಿ ನೀಡಿದರು. ಪ್ರತಿಯೊಂದು ಪಂಚಾಯತಿಯಲ್ಲಿಯೂ ಯಾವ ಕಾಮಗಾರಿಗಳನ್ನು ತೆಗೆದುಕೊಳ್ಳಬೇಕು ಎಂದು ಚರ್ಚೆ ನಡೆಸಿ ಕೈಗೆತ್ತಿಕೊಳ್ಳಲಾಗುತ್ತಿತ್ತು. ಪ್ರತಿದಿನ ಎನ್ ರೋಲ್ ಮೆಂಟ್ ಇರುತ್ತಿತ್ತು. ಎಷ್ಟು ಮಾನವದಿನ ಕೆಲಸ ನೀಡಬಹುದು ಎಂದು ಯೋಜಿಸಲಾಗುತ್ತಿತ್ತು. ಈಗಿನ ಕೇಂದ್ರ ಸರ್ಕಾರ ರಾಜ್ಯದ ಪಾಲಿನ ಕೂಲಿ ಹಣವನ್ನೇ ನೀಡುತ್ತಿಲ್ಲ ಎಂದು ಕಿಡಿಕಾರಿದರು.

ಕೇಂದ್ರ ಸರ್ಕಾರ ಕೊಲೆ ಮಾಡಲು ಹೊರಟಿದೆ:
ಈ ಮೊದಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಕ್ರಮವಾಗಿ ಶೇ 90:10 ಅನುಪಾತದಲ್ಲಿ ಅನುದಾನ ನೀಡಬೇಕಿತ್ತು. ಈಗ ಶೇ 60:40 ಅನುಪಾತ ತಂದು ಈ ಯೋಜನೆಯನ್ನು ಸಾಯಿಸಲಾಗುತ್ತಿದೆ. ಮಹಾತ್ಮಾ ಗಾಂಧಿ ಅವರ ಹೆಸರಿನಲ್ಲಿರುವ ಯೋಜನೆಯನ್ನು ಕೊಲೆ ಮಾಡಲು ಬಿಜೆಪಿ ಸರ್ಕಾರ ಹೊರಟಿದೆ. ದೇಶದ ಎಲ್ಲಾ ಪ್ರಜಾ ಪ್ರತಿನಿಧಿಗಳಿಗೆ ಶಾಕಿಂಗ್ ವಿಚಾರ. ಬಳ್ಳಾರಿ ಪಾದಯಾತ್ರೆ ಸಮಯದಲ್ಲಿ ಒಂದು ಕಡೆ ಮಹಿಳೆಯರು ಒಂದಷ್ಟು ವಿಚಾರಗಳನ್ನು ಈ ಯೋಜನೆ ಬಗ್ಗೆ ಹೇಳಿದರು. ಆಗ ಸಿ.ಪಿ.ಜೋಶಿ ಸಚಿವರಿದ್ದರು. ಆ ಮಹಿಳೆಯರು ತಿಳಿಸಿದ ವಿಚಾರಗಳನ್ನು ತಿಳಿಸಿ ಬೇರೆಯವರ ಜಮೀನಿನಲ್ಲಿ ಒಂದಷ್ಟು ಜನರಿಗೆ ಕೆಲಸ ಮಾಡಲು ನಾಚಿಕೆ ಇರುತ್ತದೆ ಎಂದು ಸೋನಿಯಾ ಗಾಂಧಿ ಅವರಿಗೆ ಇದರ ಬಗ್ಗೆ ತಿಳಿಸಿದೆ. ಅವರು ಸಚಿವರಿಗೆ ಗಮನಿಸಲು ಸೂಚಿಸಿದರು. ಆ ನಂತರ ಸ್ವಂತ ಜಮೀನಿನಲ್ಲಿ ಈ ಯೋಜನೆ ಅಡಿ ಕೆಲಸ ಮಾಡಬಹುದು ಎಂದು ತಿದ್ದುಪಡಿ ಮಾಡಲಾಯಿತು ಎಂದರು.ಇದನ್ನೂ ಓದಿ: 2027ರ ಡಿಸೆಂಬರ್ ವೇಳೆಗೆ ಬೆಂಗಳೂರಿನಲ್ಲಿ 175 ಕಿ.ಮೀ ಮೆಟ್ರೋ ಮಾರ್ಗ ಸಂಚಾರ: ಡಿಕೆಶಿ

TAGGED:bengalurubjpCentral govtcongressDK Shivakumarಕಾಂಗ್ರೆಸ್ಕೇಂದ್ರ ಸರ್ಕಾರಡಿಕೆ ಶಿವಕುಮಾರ್ನರೇಗಾ ಯೋಜನೆಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ಜಟಾಪಟಿ – ಒಂದೇ ಜಾಗಕ್ಕೆ ಎರಡೆರಡು ದಾಖಲೆ ನೀಡಿ ಅಧಿಕಾರಿಗಳ ಯಡವಟ್ಟು?
Cinema Districts Hassan Karnataka Latest Sandalwood States Top Stories
Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories

You Might Also Like

Narendra Modi Donald Trump
Latest

ಭಾರತದ ಮೇಲಿನ ಸುಂಕ 18% ಗೆ ಇಳಿಕೆ – 500 ಶತಕೋಟಿ ಡಾಲರ್‌ ಒಪ್ಪಂದ ಘೋಷಿಸಿದ ಟ್ರಂಪ್‌

Public TV
By Public TV
5 hours ago
narendra modi trump
Latest

ಪ್ರಧಾನಿ ಮೋದಿಗೆ ಟ್ರಂಪ್‌ ಫೋನ್‌ ಕಾಲ್‌ – ಬಿಗ್‌ ಟ್ರೇಡ್‌ ಡೀಲ್‌ ಸುಳಿವು ಕೊಟ್ಟ ಅಮೆರಿಕದ ರಾಯಭಾರಿ!

Public TV
By Public TV
6 hours ago
N Chaluvarayaswamy
Bengaluru City

ಮಂಡ್ಯ ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ: ಚಲುವರಾಯಸ್ವಾಮಿ

Public TV
By Public TV
6 hours ago
Legislative Council 2
Bengaluru City

ʻಮೋದಿ ದೇಶದ್ರೋಹಿʼ ಎಂದ ಕಾಂಗ್ರೆಸ್ ಸದಸ್ಯ ನಜೀರ್ ಅಹಮದ್; ಪರಿಷತ್‌ನಲ್ಲಿ ಗದ್ದಲ – ಕೋಲಾಹಲ

Public TV
By Public TV
7 hours ago
Mamata Banerjee SIR ECI
Latest

ಬಂಗ ಭವನದಲ್ಲಿ ಎಸ್‌ಐಆರ್ ಸಂತ್ರಸ್ತ ಕುಟುಂಬಗಳ ಮೇಲೆ ದೌರ್ಜನ್ಯ: ಮಮತಾ ಬ್ಯಾನರ್ಜಿ

Public TV
By Public TV
7 hours ago
Haveri Farmers
Districts

ಬರೋಬ್ಬರಿ 4,685 ಹೆಕ್ಟೇರ್‌ನಲ್ಲಿ ದ್ವಿದಳ ಧಾನ್ಯ ಬೆಳೆದ ಹಾವೇರಿ ರೈತರು – ಜನ ಮೆಚ್ಚುಗೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?